Film Awards: ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು, ಅಕ್ಟೋಬರ್ 04: 2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದೆ. ಸ್ಯಾಂಡಲ್‌ವುಡ್ ನಿರ್ದೇಶಕರು, ನಟರು, ನಟಿಯರು, ಪೋಷಕ ನಟರು ಸೇರಿದಂತೆ ಅನೇಕರ ಮುಡಿಗೆ ರಾಜ್ಯ ಪ್ರಶಸ್ತಿ ಸಂದಿದೆ. ಇದೇ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯ ಅವರು ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೋಸ್ಟ್‌ನಲ್ಲಿ "2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ರಘು. ಕೆ.ಎಂ ನಿರ್ದೇಶನದ ʼದೊಡ್ಡಹಟ್ಟಿ ಬೋರೇಗೌಡʼ ಮೊದಲನೇ ಅತ್ಯುತ್ತಮ ಚಿತ್ರವಾಗಿದೆ. ಕಿರಣ್ ರಾಜ್ ನಿರ್ದೇಶನದ ʼಚಾರ್ಲಿ 777ʼ ಎರಡನೇ ಅತ್ಯುತ್ತಮ ಚಿತ್ರ ಮತ್ತು ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ' ಮೂರನೇ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ'.

"ದಿವಂಗತ ಡಾ.ಪುನೀತ್ ರಾಜ್‌ಕುಮಾರ್ ಅಭಿನಯದ "ಯುವರತ್ನ' ಅತ್ಯುತ್ತಮ ಮನರಂಜನಾ ಚಿತ್ರ ಎಂಬ ಹಿರಿಮೆಗೆ ಪಾತ್ರವಾಗಿದೆ. ಡಾ. ಕೃಷ್ಣಮೂರ್ತಿ ಚಮರಂ ನಿರ್ದೇಶನದ "ಭಾರತೀಯ ಪ್ರಜೆಗಳಾದ ನಾವು' ಅತ್ಯುತ್ತಮ ಸಾಮಾಜಿಕ ಕಳಕಳಿಯ ಚಿತ್ರವಾಗಿ ಆಯ್ಕೆಗೊಂಡಿದೆ. ಅತ್ಯುತ್ತಮ ಮಕ್ಕಳ ಚಿತ್ರವಾಗಿ ಕೇಕ್, ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರವಾಗಿ' ಬಡವ ರಾಸ್ಕಲ್, ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರವಾಗಿ 'ನಾಡ ಪೆದ ಆಶಾ' (ಕೊಡವ ) ಪ್ರಶಸ್ತಿಗೆ ಆಯ್ಕೆಯಾಗಿದೆ' ಎಂದು ಅವರು ತಿಳಿಸಿದ್ದಾರೆ.
2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ರಕ್ಷಿತ್ ಶೆಟ್ಟಿ ಅವರು "ಚಾರ್ಲಿ 777' ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್ ಅವರು ʼಮ್ಯೂಟ್ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ʼರತ್ನನ್ ಪ್ರಪಂಚʼ ಚಿತ್ರಕ್ಕಾಗಿ ಪ್ರಮೋದ್ ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನಿತರೆ ವಿಭಾಗಗಳಲ್ಲೂ ಅನೇಕ ಕಲಾವಿದರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಎಲ್ಲಾ ವಿಜೇತರಿಗೂ ಹಾಗೂ ಚಿತ್ರತಂಡಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಅವರ ಚಿತ್ರತಂಡಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ.
2021ನೇ ಸಾಲಿನ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ರಕ್ಷಿತ್ ಶೆಟ್ಟಿ ಅವರು ʼಚಾರ್ಲಿ 777ʼ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಅರ್ಚನಾ ಜೋಯಿಸ್ ಅವರು ʼಮ್ಯೂಟ್ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
— Siddaramaiah (@siddaramaiah) October 4, 2025
ʼರತ್ನನ್ ಪ್ರಪಂಚʼ ಚಿತ್ರಕ್ಕಾಗಿ ಪ್ರಮೋದ್… pic.twitter.com/r0syBL8t0G
ಯುವರತ್ನ ನಿರ್ದೇಶಕರ ಪ್ರತಿಕ್ರಿಯೆ
ಬೆಸ್ಟ್ ಎಂಟರ್‌ಟೈನಿಂಗ್ ಪಾಪುಲರ್ ಫಿಲ್ಮ್ ಅವಾರ್ಡ್ ಅನ್ನು ಸಂತೋಷ್ ಆನಂದ್ ರಾಮ್ ಅವರು ನಿರ್ದೇಶಿಸಿರುವ ನಟ ಪುನೀತ್ ರಾಜ್ ಕುಮಾರ್ ನಟನೆಯ "ಯುವರತ್ನ'ಗೆ ಸಿಕ್ಕಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಸಂತೋಷ್ ಆನಂದ್ ರಾಮ್ ಅವರು, "ಈ ಪ್ರಶಸ್ತಿ ನನ್ನ ಅಪ್ಪು ಅಣ್ಣನಿಗೆ,ಅವರ ಅಭಿಮಾನಿಗಳಿಗೆ ಹಾಗೂ ಕನ್ನಡ ಜನತೆಗೆ ಅರ್ಪಣೆ' ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications