ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಲಸಿಕೆ ಅಭಿಯಾನ; ದೇಶದಲ್ಲೇ ಮೊದಲ ಸ್ಥಾನ ಪಡೆದ ಕರ್ನಾಟಕ

|
Google Oneindia Kannada News

ಬೆಂಗಳೂರು, ಜನವರಿ 25: ಭಾರತದಲ್ಲಿ ಜನವರಿ 16ರಿಂದ ಕೊರೊನಾ ಸೋಂಕಿನ ವಿರುದ್ಧ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶಾದ್ಯಂತ ಇದುವರೆಗೂ 16 ಲಕ್ಷ (16,13,667) ಮಂದಿಗೆ 28,613 ಸೆಷನ್ ಗಳಲ್ಲಿ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಜೊತೆಗೆ ಇಡೀ ದೇಶದಲ್ಲಿ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಿದ ಮೊದಲ ರಾಜ್ಯ ಕರ್ನಾಟಕ ಎನಿಸಿಕೊಂಡಿದೆ.

2ನೇ ಹಂತದಲ್ಲಿ 2ಕೋಟಿ ಜನರಿಗೆ ಕೊರೊನಾ ಲಸಿಕೆ: ಸುಧಾಕರ್ 2ನೇ ಹಂತದಲ್ಲಿ 2ಕೋಟಿ ಜನರಿಗೆ ಕೊರೊನಾ ಲಸಿಕೆ: ಸುಧಾಕರ್

ಕರ್ನಾಟಕದಲ್ಲಿ ಇದುವರೆಗೂ ಎರಡು ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿಯೇ ಹೆಚ್ಚು ಕೊರೊನಾ ಲಸಿಕೆ ನೀಡಿದ ಮೊದಲ ರಾಜ್ಯ ಎಂದು ಕರೆಸಿಕೊಂಡಿದೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿಯಂತೆ ಸೋಮವಾರ ಮಧ್ಯಾಹ್ನ 2 ಗಂಟೆವರೆಗೂ ಒಟ್ಟು 2,06,577 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಮೊದಲ ಹಂತದ ಕೊರೊನಾ ಲಸಿಕೆ ಅಭಿಯಾನದಲ್ಲಿ ರಾಜ್ಯ ಮುನ್ನಡೆಯಲ್ಲಿದೆ.

Karnataka First State In India To Inoculate More People

ಜನವರಿ 16ರಂದು ಪ್ರಧಾನಿ ನರೇಂದ್ರ ಮೋದಿ ಭಾರತದಾದ್ಯಂತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕರ್ನಾಟಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್ ಅಡೆಂಡರ್ ನಾಗರತ್ನಾ ಕೆ (28) ಅವರಿಗೆ ಮೊದಲ ಲಸಿಕೆ ನೀಡಲಾಗಿತ್ತು.

ದೇಶದಲ್ಲಿ ಕೊರೊನಾ ಲಸಿಕೆಯನ್ನು ಹಂತ ಹಂತವಾಗಿ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿಯಿದೆ. ಮೊದಲು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಿ ನಂತರ ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಆನಂತರ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿದುಬಂದಿದೆ.

ಸದ್ಯಕ್ಕೆ ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಗಳನ್ನು ನೀಡಲಾಗುತ್ತಿದೆ.

English summary
Karnataka became first state in india to inoculate over 2 lakh health workers till now,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X