ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ
ಬೆಂಗಳೂರು, ಮಾರ್ಚ್.08: ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್(82) ಭಾನುವಾರ ವಿಧಿವಶರಾಗಿದ್ದಾರೆ. ಕೇಂದ್ರದ ಮಾಜಿ ಕಾನೂನು ಸಚಿವರಾಗಿ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದ ಭಾರದ್ವಾಜ್, ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಕಳೆದ 2009-2014ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಹಂಸರಾಜ್ ಭಾರದ್ವಾಜ್ ನಾಲ್ವರು ಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದ್ದರು. ಇದರ ಮಧ್ಯೆ 2012-2013ರ ಅವಧಿಯಲ್ಲಿ ಕೇರಳ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನಿಭಾಯಿಸಿದ್ದರು.

1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಡಿಸೆಂಬರ್ 1984 ರಿಂದ ನವೆಂಬರ್ 1989ರವರೆಗೂ ಕೇಂದ್ರ ಕಾನೂನು ಸಚಿವರಾಗಿದ್ದರು.












Click it and Unblock the Notifications