ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರ ರಕ್ಷಣೆಗೆ ಸರ್ಕಾರ ಬದ್ಧ, ವೈದ್ಯರ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮ:ಸುಧಾಕರ್

|
Google Oneindia Kannada News

ಬೆಂಗಳೂರು, ಆಗಸ್ಟ್ 25: ವೈದ್ಯರಿಗೆ ಭದ್ರತೆ ನೀಡಲು ಮತ್ತು ವೈದ್ಯರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಸರ್ಕಾರ ಕಟಿಬದ್ಧವಾಗಿದೆ. ವಿವಿಧ ಕಾರಣಗಳಿಗೆ ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಗುರುವಾರ 'ಯುವ ಸಂವಾದ' ಕಾರ್ಯಕ್ರಮದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ವಿದ್ಯಾರ್ಥಿಗಳ ಆಶೋತ್ತರಗಳನ್ನು ತಿಳಿದುಕೊಳ್ಳುವ ಜತೆಗೆ ಅವರ ಸಮಸ್ಯೆಗಳಿಗೆ ಪರಿಹಾರ ಕ್ರಮ ವಹಿಸುವ ಭರವಸೆ ನೀಡಿದರು.

ಬಾಲಕನ ಬಾಯಿಯಲ್ಲಿದ್ದ 20 ಸೆಂ.ಮೀ ಕ್ಯಾನ್ಸರ್ ಗೆಡ್ಡೆಯನ್ನು ಉಚಿತ ಶಸ್ತ್ರಚಿಕಿತ್ಸೆ ಮಾಡಿ ತೆಗೆದ ಕಣಚೂರು ವೈದ್ಯರು!ಬಾಲಕನ ಬಾಯಿಯಲ್ಲಿದ್ದ 20 ಸೆಂ.ಮೀ ಕ್ಯಾನ್ಸರ್ ಗೆಡ್ಡೆಯನ್ನು ಉಚಿತ ಶಸ್ತ್ರಚಿಕಿತ್ಸೆ ಮಾಡಿ ತೆಗೆದ ಕಣಚೂರು ವೈದ್ಯರು!

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆರೋಗ್ಯ ಸಚಿವನಾಗಿ ವೈದ್ಯರ ಸುರಕ್ಷತೆಗೆ ಎಚ್ಚರಿಕೆ ಕ್ರಮ ವಹಿಸಿದ್ದೇನೆ. ಕೆಲ ರೋಗಿಗಳು ಮೃತಪಟ್ಟಾಗ ವೈದ್ಯರಿಂದ ತಪ್ಪಾಗಿದೆ ಎಂದೇ ಕುಟುಂಬದವರು ಆಲೋಚಿಸುತ್ತಾರೆ. ಆದರೆ ವಾಸ್ತವವಾಗಿ ಪ್ರತಿ ವೈದ್ಯರು ತಮ್ಮ ಶಕ್ತಿಮೀರಿ ಪ್ರಯತ್ನ ಮಾಡಿ ರೋಗಿಯನ್ನು ಬದುಕಿಸುವ ಯತ್ನ ಮಾಡುತ್ತಾರೆ ಎಂದರು.

ವಿನಾಕಾರಣ ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನಿನ ಅವಕಾಶವಿದೆ. ಈ ರೀತಿ ಹಲ್ಲೆ ಮಾಡಿದ ಘಟನೆಗಳಲ್ಲಿ ಸರ್ಕಾರ ಕಠಿಣ ಕ್ರಮ ವಹಿಸಿದೆ. ಹೀಗಾಗಿ ಇತ್ತೀಚೆಗೆ ಇಂತಹ ಹಲ್ಲೆ ಪ್ರಕರಣಗಳು ಕಡಿಮೆಯಾಗಿದೆ. ಅಲ್ಲದೇ ಈ ಬಗ್ಗೆ ಜಾಗೃತಿಯು ಮೂಡಿದೆ.

ವೈದ್ಯರ ಮೇಲೆ ಹಲ್ಲೆ ಮಾಡಿದವರಿಗೆ ಹಲವು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು. ಈ ಕ್ರಮಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಬೇಕು. ಸರ್ಕಾರ ಸದಾ ವೈದ್ಯರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಕೋವಿಡ್ ಸವಾಲಿನ ಅನುಭವ

ವಿದ್ಯಾರ್ಥಿಗಳಿಗೆ ಕೋವಿಡ್ ಸವಾಲಿನ ಅನುಭವ

ಪ್ರಸ್ತುತ ಕಾಲಘಟ್ಟದ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯ ಹೊಸ ಅನುಭವವನ್ನು ಪಡೆದುಕೊಂಡಿದ್ದಾರೆ. ಕಳೆದ ನೂರು ವರ್ಷದ ಹಿಂದಿನ ಬ್ಯಾಚ್ ಕೂಡ ಈ ಸನ್ನಿವೇಶದ ಸವಾಲನ್ನು ಎದುರಿಸಿರಲಿಲ್ಲ. ಆದ್ದರಿಂದ 2020ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ವಿದ್ಯಾರ್ಥಿಗಳು ಈ ದೊಡ್ಡ ಸವಾಲನ್ನು ಎದುರಿಸುವ ಅನುಭವ ಹೊಂದಿದ್ದಾರೆ ಎಂದರು.

ಸದ್ಯ 900 ಜನರಿಗೆ 1 ವೈದ್ಯರಿದ್ದಾರೆ

ಸದ್ಯ 900 ಜನರಿಗೆ 1 ವೈದ್ಯರಿದ್ದಾರೆ

ಎಂಜಿನಿಯರಿಂಗ್‌ನಂತೆ ಹೆಚ್ಚು ಮೆಡಿಕಲ್‌ ಕಾಲೇಜುಗಳನ್ನು ಆರಂಭಿಸುವುದರಿಂದ ನಿರುದ್ಯೋಗ ಉಂಟಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಿಂದೆ 2,300 ಜನಸಂಖ್ಯೆಗೆ ಒಬ್ಬ ವೈದ್ಯರಿದ್ದರು. ಈಗ 900 ಜನಸಂಖ್ಯೆಗೆ ಒಬ್ಬ ವೈದ್ಯರಿದ್ದಾರೆ. ಆಯುಷ್ ವೈದ್ಯರನ್ನು ಈ ಲೆಕ್ಕದಲ್ಲಿ ಪಡಿಗಣಿಸಿದರೆ 700ಜನರಿಗೆ ಒಬ್ಬರು ವೈದ್ಯರು ಇದ್ದಂತಾಗುತ್ತದೆ. 130 ಕೋಟಿ ಜನರು ಇರುವ ದೇಶದಲ್ಲಿ ಹೆಚ್ಚಿನ ಮೆಡಿಕಲ್ ಕಾಲೇಜುಗಳು ಬೇಕಾಗುತ್ತದೆ. ಅಲ್ಲದೆ ಮೆಡಿಕಲ್ ಟೂರಿಸಂ ಕೂಡ ಈಗ ಬೆಳೆಯುತ್ತಿದೆ. ಒಂದು ಮೆಡಿಕಲ್ ಕಾಲೇಜಿಗೆ 750 ಕೋಟಿ ರೂ. ನಷ್ಟು ಖರ್ಚಾಗುತ್ತದೆ. ಈ ಹೊರೆ ಕಡಿಮೆ ಮಾಡಲು ಪಿಪಿಪಿ ಮಾದರಿಯಲ್ಲಿ ಕಾಲೇಜು ನಿರ್ಮಿಸುವ ಪ್ರಸ್ತಾಪವಿದೆ ಎಂದು ವಿವರಿಸಿದರು.

9ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ

9ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ

ರಾಜ್ಯದಲ್ಲಿ ಇನ್ನೂ 9 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜುಗಳು ಸ್ಥಾಪನೆ ಆಗಿಲ್ಲ. ಆದ್ದರಿಂದ ಸರ್ಕಾರವು ಅಗತ್ಯದ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಲು ಚಿಂತನೆ ನಡೆಸಿದೆ. ದಾವಣಗೆರೆ, ಉಡುಪಿ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂತಹ ಕಾಲೇಜು ಆರಂಭಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಎಂಜಿನಿಯರಿಂಗ್‌ನಂತೆ ವೈದ್ಯ ಕ್ಷೇತ್ರದಲ್ಲಿ ಉದ್ಯೋಗ ಇಳಿಕೆಯಾಗುವುದಿಲ್ಲ. ವೈದ್ಯರಿಗೆ ಇನ್ನಷ್ಟು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿವೆ. ವೈದ್ಯರಿಗೆ ನಿರುದ್ಯೋಗ ಸಮಸ್ಯೆ ಎಂದಿಗೂ ಎದುರಾಗುವುದಿಲ್ಲ ಎಂದು ಹೇಳಿದರು.

ಯುವಜನರು ರಾಜಕೀಯಕ್ಕೆ ಬನ್ನಿ

ಯುವಜನರು ರಾಜಕೀಯಕ್ಕೆ ಬನ್ನಿ

ಯುವಜನರನ್ನು ರಾಜಕೀಯಕ್ಕೆ ನೀವೆಲ್ಲರೂ ರಾಜಕೀಯ ಪ್ರವೇಶ ಮಾಡಬಹುದು. ಜನರು ಆರಿಸಿದ ಜನಪ್ರತಿನಿಧಿಯಿಂದಲೇ ಕಾನೂನುಗಳು ಜಾರಿ ಆಗುತ್ತವೆ. ಜನರಿಗಾಗಿ ಸೇವೆ ಮಾಡುವ, ಶಿಕ್ಷಣ ಹೊಂದಿರುವ ವ್ಯಕ್ತಿಯನ್ನು ರಾಜಕೀಯಕ್ಕೆ ಆರಿಸದಿದ್ದರೆ ಸಮಸ್ಯೆ ಉಂಟಾಗುತ್ತದೆ. ರಾಜಕೀಯಕ್ಕೆ ಬರುವುದು ಬಹಳ ಶ್ರಮದಾಯಕ ಎಂಬುದು ನಿಜ. ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರುವುದರಿಂದ ಆರಂಭವಾಗಿ ಪ್ರಧಾನಿಯಾಗುವವರೆಗೆ ಬೆಳೆದಿದ್ದಾರೆ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ಉತ್ತಮ ಜಗತ್ತಿನ ನಿರ್ಮಾಣಕ್ಕಾಗಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಬೇಕು ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸುವ ಮೂಲಕ ಅವರು ಕರೆ ನೀಡಿದರು.

English summary
Karnataka government action against those who assault doctors says minister Dr.K. Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X