ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರಕಾರದಿಂದ ತಾತ್ವಿಕ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20: ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಮಾಡುತ್ತಿರುವ ಉತ್ತರ ಕನ್ನಡ ಜನತೆಗೆ ಅಂತೂ ಸರಕಾರ ಖುಷಿ ಸುದ್ದಿ ನೀಡಿದೆ. ಅತ್ತ ಜನರು ತಮ್ಮ ಶಾಸಕರ ಮೇಲೆ ಒತ್ತಡ ಹಾಕುತ್ತಿದ್ದಂತೆ, ಇತ್ತ ಉತ್ತರ ಕನ್ನಡ ಜಿಲ್ಲೆಯ ಶಾಸಕರ ಒತ್ತಡಕ್ಕೆ ಮಣಿದಿರುವ ಸರಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣದ ಅಧಿಕೃತ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ.

ಮಂಗಳವಾರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರೊಂದಿಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸಭೆ ನಡೆಸಿ, ಮುಂಗಾರು ಅಧಿವೇಶನ ಮುಗಿಯುತ್ತಿದ್ದಂತೆ ಜಿಲ್ಲೆಗೆ ಭೇಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತೇವೆ, ನಂತರ ಆಸ್ಪತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಅನಿಲ್ ಕುಮಾರ್‌ ಸಾವಿಗೆ ಹೃದಯಾಘಾತ ಕಾರಣ, ಆಕ್ಸಿಜನ್ ಕೊರತೆ ಇಲ್ಲ: ಚಾರುಲತಾ ಸೋಮಲ್ಅನಿಲ್ ಕುಮಾರ್‌ ಸಾವಿಗೆ ಹೃದಯಾಘಾತ ಕಾರಣ, ಆಕ್ಸಿಜನ್ ಕೊರತೆ ಇಲ್ಲ: ಚಾರುಲತಾ ಸೋಮಲ್

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ಇನ್ನೂ ಅಂತಿಮ ಮಾಡಿಲ್ಲ. ಕಾರವಾರದಲ್ಲಿರುವ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಸಾಕಾಗುವುದಿಲ್ಲ. ಅದಕ್ಕೆ ಬೇಕಾದ ಜಮೀನು ಬೇರೆ ಬೇರೆ ಇಲಾಖೆಗೆ ಸೇರಿದ್ದಾಗಿದೆ. ಹೀಗಾಗಿ ಸ್ಥಳದ ವಿಚಾರವಾಗಿ ಸ್ಪೀಕರ್ ಕಾಗೇರಿ, ಸಿಎಂ ಬೊಮ್ಮಯಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಧಿವೇಶನದ ಬಳಿಕ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

 ಆಸ್ಪತ್ರೆಗೆ ಸಿಎಂ ತಾತ್ವಿಕ ಒಪ್ಪಿಗೆ

ಆಸ್ಪತ್ರೆಗೆ ಸಿಎಂ ತಾತ್ವಿಕ ಒಪ್ಪಿಗೆ

ಈಗಾಗಲೆ ಶಿರಸಿಯಲ್ಲಿ 250 ಹಾಸಿಗೆಗಳ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಗೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ಉತ್ತಮ ಪ್ರಗತಿ ನಡೆಯುತ್ತಿದೆ. ಕಾರಾವಾರದ ವೈದ್ಯಕೀಯ ಕಾಲೇಜಿನ ಸಂಪೂರ್ಣ ಕಾಮಗಾರಿ ಮುಂದಿನ ವರ್ಷ ಮುಗಿಯಲಿದ್ದು, ಈ ವರ್ಷ 150 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುವುದು. ಇದಕ್ಕೆ ನಮಗೆ ಅನುಮತಿ ಸಿಕ್ಕಿದೆ. ಹಾಗಾಗಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದರು.

ರಾಜ್ಯ ಬಿಡಿ, ಕಲ್ಯಾಣ ಕರ್ನಾಟಕದಲ್ಲೇ ರಾಯಚೂರಿಗೆ ತಾರತಮ್ಯ!ರಾಜ್ಯ ಬಿಡಿ, ಕಲ್ಯಾಣ ಕರ್ನಾಟಕದಲ್ಲೇ ರಾಯಚೂರಿಗೆ ತಾರತಮ್ಯ!

 ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಸೌಲಭ್ಯಕ್ಕೆ ಬೇಡಿಕೆ

ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಸೌಲಭ್ಯಕ್ಕೆ ಬೇಡಿಕೆ

ಕಾರವಾರ ಹೆಡ್‌ ಕ್ವಾರ್ಟರ್ಸ್‌ ಆಗಿರುವುದರಿಂದ ಮೆಡಿಕಲ್ ಕಾಲೇಜಿದೆ. 450 ಹಾಸಿಗೆಯುಳ್ಳ ಕಟ್ಟಡ 165 ಕೋಟಿ ರೂ ವೆಚ್ಛದಲ್ಲಿ ಕಟ್ಟಡದಲ್ಲಿ ಆರಂಭವಾಗಿದೆ. ಅದರಲ್ಲೇ ಒಂದೆರಡು ಬಿಲ್ಡಿಂಗ್ ಹೆಚ್ಚಿಸಿಕೊಂಡು ಅಗತ್ಯವಾಗಿರು ಎಂಆರ್‌ಐ ಮಿಷನ್, ನ್ಯೂರೋ ಸರ್ಜನ್‌, ಹಾರ್ಟ್‌ ಸ್ಪೆಷಲಿಸ್ಟ್‌ ಅಗತ್ಯವಾಗಿದೆ, ಇವುಗಳ ಜೊತೆಗೆ ವೈದ್ಯರ ಸೌಲಭ್ಯದ ಅಗತ್ಯವನ್ನು ಸಭೆಯಲ್ಲಿ ತಿಳಿಸಿದ್ದೇವೆ. ಎಲ್ಲವನ್ನು ಒದಗಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಕಾರವಾರ ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

 ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ

ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ

ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಒದಗಿಸಬೇಕು, ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಇರುವಂತಹ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಡರೆ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ಜಿಲ್ಲೆಯ ಬೇಡಿಕೆಗಳು ಈಡೇರುತ್ತದೆ ಎಂದು ಹೇಳಿದ್ದಾರೆ.

 ತಿರಸ್ಕಾರಕ್ಕೊಳಗಾಗಿದ್ದ ಪ್ರಸ್ತಾವನೆ

ತಿರಸ್ಕಾರಕ್ಕೊಳಗಾಗಿದ್ದ ಪ್ರಸ್ತಾವನೆ

ಸದನದಲ್ಲಿ ಕಾರವಾರ ಶಾಸಕರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದ, ಆರೋಗ್ಯ ಸಚಿವ ಡಾ. ಕೆ ಸುಧಾಕರ್ " ಕಾರಾವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ಆರ್ಥಿಕ ಇಲಾಖೆಗಳಿಗೆ ಸಲ್ಲಿಸಲಾಗಿತ್ತು, ಆದರೆ ಈ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ. ಆದರೆ ಮತ್ತೆ ಮತ್ತೊಮ್ಮೆ ಕಡತವನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಲಾಗುತ್ತಿದೆ. ಅಲ್ಲಿಂದ ಸಹಮತಿ ಬಂದ ನಂತರದಲ್ಲಿ ಅನುದಾನದ ಲಭ್ಯತೆಗೆ ಅನುಗುಣವಾಗಿ ಕಾರವಾರಕ್ಕೆ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಿ, ಕ್ರಮ ಕೈಗೊಳ್ಳಲಾಗುವುದು " ಎಂದು ತಿಳಿಸಿದ್ದರು.

ಆಸ್ಪತ್ರೆ ಸ್ಥಾಪನೆ ಪ್ರಸ್ತಾವನೆ ತಿರಸ್ಕಾರಗೊಂಡಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಾರದೊಳಗೆ ಜಿಲ್ಲಾ ಶಾಸಕರ ಜೊತೆ ಚರ್ಚೆ ನಡೆಸಿರುವ ಆರೋಗ್ಯ ಸಚಿವರು ಆಸ್ಪತ್ರೆ ಭರವಸೆ ನೀಡಿರುವುದು ಜಿಲ್ಲೆಯ ಜನತೆಗೆ ಸಮಾಧಾನ ತಂದಿದೆ.

English summary
state government has ain principle approval to build a multi super speciality hospital in uttara kannada district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X