ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ನೀಡುವ 1 ಲಕ್ಷ ರೂ. ಪರಿಹಾರದಲ್ಲಿ ಷರತ್ತು ಸಡಿಲಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 3: ಕೊರೊನಾ ವೈರಸ್‌ನ ಎರಡೂ ಅಲೆಗಳಲ್ಲೂ ಸಾವಿರಾರು ಸೋಂಕಿತರು ಸಾವನ್ನಪ್ಪಿದ್ದರು. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ಘೋಷಿಸಿತ್ತು.

ಬಿಪಿಎಲ್ ಕಾರ್ಡ್​​ ಹೊಂದಿರುವ ಕುಟುಂಬದ ದುಡಿಯುವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರೆ, ಒಂದು ಕುಟುಂಬದಲ್ಲಿ ಆ ರೀತಿಯ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಈ ಮೊದಲು ತಿಳಿಸಿತ್ತು. ಈಗ ಆ ನಿಯಮಕ್ಕೆ ಬದಲಾವಣೆ ತರಲಾಗಿದೆ.

ಬಿಪಿಎಲ್ ಕುಟುಂಬದ ಯಾವುದೇ ವ್ಯಕ್ತಿ ಕೊರೊನಾದಿಂದ ಮೃತರಾಗಿದ್ದರೆ, ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ದುಡಿಯುತ್ತಿದ್ದ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ಎಂಬ ನಿಬಂಧನೆಯನ್ನು ತೆಗೆದು ಹಾಕಲಾಗಿದೆ. ಇದೀಗ ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೊನಾದಿಂದ ಮೃತರಾಗಿದ್ದರೂ 1 ಲಕ್ಷ ರೂ. ಪರಿಹಾರ ನೀಡಲಾಗುವುದು.

Karnataka Government Changes Terms In Compensation To The Covid-19 Death Victims For BPL Family

ಪರಿಹಾರ ನೀಡಲು ಕೊವಿಡ್‌ನಿಂದ ಮೃತ ಪಟ್ಟ ವ್ಯಕ್ತಿಯ ವಯಸ್ಸಿನ ನಿಬಂಧನೆಯೂ ಇಲ್ಲ ಎಂದು ಹೊಸದಾಗಿ ತಿದ್ದುಪಡಿ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಈ ಮಧ್ಯೆ ಕರ್ನಾಟಕದ ಇಬ್ಬರಿಗೆ ಓಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಓಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಡಾ. ಅಶ್ವಥ್ ನಾರಾಯಣ ಪ್ರತಿಕ್ರಿಯೆ
ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ. ಅಶ್ವಥ್ ನಾರಾಯಣ, "ರಾಜ್ಯದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಂದ ಸಂಗ್ರಹಿಸಿದ ಮಾದರಿಯನ್ನು ಜಿನೋಮಿಕ್​ ಸೀಕ್ವೆನ್​ಗೆ ಕಳಿಸಲಾಗಿತ್ತು. ಇದೀಗ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಅಂಥವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು," ಎಂದು ಹೇಳಿದರು.

Karnataka Government Changes Terms In Compensation To The Covid-19 Death Victims For BPL Family

"ಓಮಿಕ್ರಾನ್ ವೈರಸ್​ ಕುರಿತು ವಿಶ್ವದ ಹಲವು ದೇಶಗಳಲ್ಲಿ ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಓಮಿಕ್ರಾನ್​ ವೇಗವಾಗಿ ಹರಡುತ್ತದೆ, ಆದರೆ ಜೀವಕ್ಕೆ ಅಪಾಯವಿಲ್ಲ. ಓಮಿಕ್ರಾನ್​ ವೈರಸ್​ ಕುರಿತು ಸರ್ಕಾರ ಕಟ್ಟೆಚ್ಚರ ವಹಿಸಿದೆ," ಎಂದು ಹೇಳಿದರು.

ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್​ಗಳನ್ನು ಐಸೊಲೇಟ್ ಮಾಡಲಾಗಿದೆ. ವಿಶ್ವದ ಹಲವು ದೇಶಗಳಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ, ಹಲವು ಅಧ್ಯಯನಗಳೂ ನಡೆದಿವೆ. ದೈಹಿಕವಾಗಿ ಸೋರ್‌ನೆಸ್, ಮಾಂಸಖಂಡಗಳ ನೋವು ಕಾಣಿಸಿಕೊಳ್ಳಲಿದೆ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ತಪಾಸಣೆ ಆಗಿದ್ದರೂ ರಿಪೋರ್ಟ್ ಬರುವವರೆಗೂ ಯಾರನ್ನೂ ಜನರೊಂದಿಗೆ ಬೆರೆಯಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ

ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಓಮೈಕ್ರಾನ್ ವೈರಾಣುವಿನಿಂದ ಜೀವಕ್ಕೇನೂ ಅಪಾಯವಿಲ್ಲ. ಆದರೆ ಮುಂಜಾಗ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಇದುವರೆಗೂ ಒಂದೂ ಲಸಿಕೆಯನ್ನು ಪಡೆದುಕೊಳ್ಳದೆ ಇರುವವರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಸರಕಾರ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ, ಅನಗತ್ಯ ಭಯ-ಭೀತಿಗಳು ಬೇಡ ಎಂದು ಅವರು ಹೇಳಿದರು.

ಚಿತ್ರಮಂದಿರ, ಹೋಟೆಲ್, ಮಾಲ್ ಗಳಂತಹ ಜನಸಂದಣಿ ಸ್ಥಳಗಳು ಸೇರಿದಂತೆ ಎಲ್ಲೆಡೆಗಳಿಗೂ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಹೋಗಬೇಕು. ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ 11 ದೇಶಗಳ ಪರಿಸ್ಥಿತಿ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ರಾಜ್ಯದಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಇವರ ಪರೀಕ್ಷಾ ವರದಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳನ್ನು ಪ್ರತ್ಯೇಕ ವಾಸದಲ್ಲಿಡಲಾಗಿದೆ. ಅಂತಿಮ ಫಲಿತಾಂಶ ನೆಗೆಟೀವ್ ಆಗಿ ಬಂದರೆ ಮಾತ್ರ ಇವರನ್ನು ಮನೆಗೆ ಕಳಿಸಿ ಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

English summary
The state government has modified the terms of the issue of compensation to the family of Covid- 19 death victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X