ಕೆಆರ್ಎಸ್, ಕಬಿನಿ ಜಲಾಶಯಗಳಿಂದ ಕುಡಿಯಲು ನೀರು, ಗದ್ದೆಗಳಿಗಿಲ್ಲ
ಬೆಂಗಳೂರು, ಆಗಸ್ಟ್ 09 : ನಾಲೆಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದ್ದು, ಕೆಆರ್ ಎಸ್, ಕಬಿನಿ, ಹಾರಂಗಿ ಹೇಮಾವತಿ ಜಲಾಶಯಗಳಿಂದ ಕೆರೆ, ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಿದೆ.
ಕುಡಿಯುವ ನೀರಿಗಾಗಿ, ಜಾನುವಾರುಗಳಿಗೆ ಹಾಗೂ ಅಂತರ್ಜಲದ ಮಟ್ಟ ಹೆಚ್ಚಿಸಲು ನಾಲೆಗಳಿಗೆ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಜಲಾಶಯಗಳಿಂದ ನೀರು ಹರಿಸುವ ಸಂಬಂಧ ಇಂದು (ಬುಧವಾರ) ನಡೆದ ಸಭೆಯಲ್ಲಿ ಹೇಳಿದರು.

ಕೆರೆ-ಕಟ್ಟೆಗಳಿಗೆ ಹರಿಸಿದ ನೀರನ್ನು ಭತ್ತ ಕಬ್ಬು ಬೆಳೆಯಲು ಬಳಸಬೇಡಿ, ಅದಕ್ಕೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಮಳೆಯ ಆಧಾರಿತ ಬೆಳೆಗಳನ್ನು ಮಾತ್ರ ಬೆಳೆಯುವಂತೆ ರೈತರಲ್ಲಿ ಮನವಿ ಮಾಡಿದರು.
ಕಬಿನಿ, ಕೆಆರ್ ಎಸ್, ಹಾರಂಗಿ ಹಾಗೂ ಹೇಮಾವತಿ ನಾಲ್ಕು ಜಲಾಶಯಗಳಲ್ಲಿ 45 ಟಿಎಂಸಿ ನೀರಿದ್ದು, ಒಳ ಹರಿವು ಕಡಿಮೆಯಿದೆ. ನಾಲ್ಕೂ ಅಚ್ಚುಕಟ್ಟು ಪ್ರದೇಶದಲ್ಲಿ ಸಾವಿರಾರು ಕೆರೆಗಳಿವೆ. ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕೆಂದು ಅಧಿಕಾರಿಗಳು ನಿರ್ಧರಿಸಲಿದ್ದಾರೆ. ನೀರು ಬಿಟ್ಟ ಕೂಡಲೇ ಗದ್ದೆಗಳಿಗೆ ಹಾಯಿಸಬಾರದು ಎಂದರು.
ಸಚಿವರಾದ ಎಂ.ಬಿ.ಪಾಟೀಲ, ಕೃಷ್ಣಬೈರೇಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಪ್ಪ, ಸಂಸದ ಪುಟ್ಟರಾಜು, ಶಾಸಕರಾದ ನರೇಂದ್ರಸ್ವಾಮಿ, ಪುಟ್ಟಣ್ಣಯ್ಯ, ಮರಿತಿಬ್ಬೇಗೌಡ, ಅಂಬರೀಶ್, ಶ್ರೀಕಂಠೇಗೌಡ, ಚಲುವರಾಯಸ್ವಾಮಿ ಸೇರಿದಂತೆ ಇತರೆ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications