ಕೆಂಪೇಗೌಡ ಭವನಕ್ಕೆ ₹25 ಕೋಟಿ ಅನುದಾನ ಘೋಷಣೆ: ಬೆಂಗಳೂರಿನ ಯಾವ ಪ್ರದೇಶದಲ್ಲಿ ನಿರ್ಮಾಣ? ತಿಳಿಯಿರಿ
ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಸಮಯದಲ್ಲಿ ಮತದಾರರನ್ನು ಓಲೈಸಲು ಸರ್ಕಾರ ಅನುದಾನಗಳನ್ನು ಘೋಷಿಸುತ್ತಿದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಭವನಕ್ಕೆ ಅನುದಾನ ನೀಡಲು ಮುಂದಾಗಿದೆ.
ಬೆಂಗಳೂರು, ಮಾರ್ಚ್ 08: ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಸಮಯದಲ್ಲಿ ಮತದಾರರನ್ನು ಓಲೈಸಲು ಸರ್ಕಾರ ಅನುದಾನಗಳನ್ನು ಘೋಷಿಸುತ್ತಿದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಭವನಕ್ಕೆ ಅನುದಾನ ನೀಡಲು ಮುಂದಾಗಿದೆ.
ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನವನ್ನು ಘೋಷಿಸಿದೆ.

ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹಂಪಿನಗರದ ಈಜುಕೊಳದ ಪಕ್ಕದಲ್ಲಿರುವ 18,000 ಚದರ ಅಡಿ ಖಾಲಿ ಜಾಗದಲ್ಲಿ ಕನ್ವೆನ್ಷನ್ ಹಾಲ್ ನಿರ್ಮಾಣವಾಗಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆ ಮಾರ್ಚ್ 2ರಂದು ಈ ಆದೇಶ ಹೊರಡಿಸಿದೆ.
ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರು ಫೆ.19ರಂದು ಬರೆದ ಪತ್ರದಲ್ಲಿ ಕೆಂಪೇಗೌಡ ಭವನ ನಿರ್ಮಾಣಕ್ಕೆ ಸಾರ್ವಜನಿಕರ ಬೇಡಿಕೆ ಇದ್ದು, 25 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿರುವ ಮುಖ್ಯಮಂತ್ರಿ ಅನುದಾನ ನೀಡಲು ಮುಂದಾಗಿದ್ದಾರೆ.

ಸಮಗ್ರ ಅಭಿವೃದ್ಧಿಗಾಗಿ ಅನುದಾನ ಘೋಷಣೆ
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮಂಡಿಸಿದ ಬಜೆಟ್‌ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ 9,698 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿದೆ. ಸರ್ಕಾರವು ಸಂಚಾರ ದಟ್ಟಣೆಯನ್ನು ತಪ್ಪಿಸಲು ಹೊಸ ರಸ್ತೆಗಳ ನಿರ್ಮಾಣ ಮತ್ತು ಪ್ರವಾಹವನ್ನು ತಡೆಯುವ ಯೋಜನೆಗಳ ಮೇಲೆ ಗಮನ ಹರಿಸಿದೆ.
ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ.ಗಳ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾರಿಡಾರ್ ಯೋಜನೆಯಡಿ 273 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 108 ಕಿ.ಮೀ ರಸ್ತೆಗಳ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಮಳೆನೀರು ಮುಕ್ತವಾಗಿ ಹರಿಯುವಂತೆ ಮತ್ತು ಪ್ರವಾಹವನ್ನು ತಪ್ಪಿಸಲು 195 ಕಿಮೀ ಒಳಚರಂಡಿ ಮತ್ತು ಮೋರಿಗಳ ಅಭಿವೃದ್ಧಿಗೆ 1,813 ಕೋಟಿ ರೂ ಅನ್ನು ಮೀಸಲಿರಿಸಿದೆ.

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು 150 ಕೋಟಿ ರೂಪಾಯಿ ವೆಚ್ಚದಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ 75 ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಪೂರಕವಾಗಿ ಟ್ರಾಫಿಕ್ ಸಿಗ್ನಲ್ ಗಳ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ತಡೆರಹಿತ ಸಿಗ್ನಲಿಂಗ್ ಅಳವಡಿಸಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಯೋಜನೆಯನ್ನು ರೂಪಿಸಿದೆ.
ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ವೆಚ್ಚದಲ್ಲಿ 5 ಕಿ.ಮೀ ಎತ್ತರದ ರಸ್ತೆ ನಿರ್ಮಾಣ ಮಾಡಲಾಗುವುದು. ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಮತ್ತು ಬಿಇಎಲ್ ರಸ್ತೆಗೆ ಸಮಗ್ರ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಕಲ್ಪಿಸುವ ಮೂಲಕ ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು. ಉಪನಗರ ರೈಲ್ವೆ ನಿಗಮಗಳ ರೈಲು ಜಾಲದೊಂದಿಗೆ ಇದನ್ನು ಸಂಯೋಜಿಸಲಾಗುತ್ತದೆ.
ಬೆಂಗಳೂರಿನಲ್ಲಿ 1,000 ಕೋಟಿ ರೂಪಾಯಿ ವೆಚ್ಚದಲ್ಲಿ 120 ಕಿಮೀ ಆರ್ಟಿರಿಯಲ್ ರಸ್ತೆಗಳಿಗೆ ವೈಟ್ ಟಾಪಿಂಗ್ ಮತ್ತು 450 ಕೋಟಿ ವೆಚ್ಚದಲ್ಲಿ ನಗರದಲ್ಲಿ 300 ಕಿಮೀ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಅಭಿವೃದ್ಧಿ ಮಾಡಲು ಸರ್ಕಾರ ಯೋಜನೆ ರೂಪಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಗ್ರಾಮಗಳಲ್ಲಿ ದುರಸ್ತಿ ಅಗತ್ಯವಿರುವ ರಸ್ತೆಗಳ ಪುನರ್ ನಿರ್ಮಾಣಕ್ಕೆ 300 ಕೋಟಿ ರೂ. ಮೀಸಲಿರಿಸಿದೆ.
ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನ ಸರಿಯಾದ ಬಳಕೆಗಾಗಿ, ಟರ್ಮಿನಲ್ ಸುತ್ತಲಿನ ಪ್ರವೇಶ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಸಂಚಾರ ದಟ್ಟಣೆ ಕಡಿಮೆ ಮಾಡಲು 300 ಕೋಟಿ ರೂ.ವೆಚ್ಚದಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications