ರಾಗಿಗೆ ಭರ್ಜರಿ ಬೆಂಬಲ ಬೆಲೆ, ಸಚಿವ ಕೃಷ್ಣಬೈರೇ ಗೌಡ ಭರವಸೆ
ಬೆಂಗಳೂರು, ಡಿಸೆಂಬರ್ 14 : ಪ್ರತಿ ಕ್ವಿಂಟಾಲ್ ರಾಗಿಗೆ 2,300 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು ಇನ್ನು 15 ದಿನಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇ ಗೌಡ ಭರವಸೆ ನೀಡಿದರು.
ಕಬ್ಬು, ಭತ್ತಕ್ಕೆ ಬೆಂಬಲ ಬೆಲೆ ನೀಡಲು ಒತ್ತಾಯಿಸಿ ರಾಜ್ಯದಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಲೇ ಇದೆ. ಆದರೆ ಇದೀಗ ರಾಗಿಯ ಸರದಿ. ರಾಗಿಯನ್ನು ಕೇವಲ ಬಡವರು ಮಾತ್ರ ಸೇವಿಸುವ ಧಾನ್ಯವಾಗಿ ಉಳಿದಿಲ್ಲ. ಬಡವ, ಶ್ರೀಮಂತರೆನ್ನದೆ ಸಾಕಷ್ಟು ಮಂದಿ ರಾಗಿಯನ್ನು ಬಳಸುತ್ತಾರೆ. ಕರಾವಳಿ ಭಾಗ ಇನ್ನಿತರೆ ಕೆಲವು ಪ್ರದೇಶಗಳನ್ನು ಹೊರತು ಪಡಿಸಿ, ಬೆಂಗಳೂರು, ಮೈಸೂರು, ಹಾಸನ ಭಾಗಗಳಲ್ಲಿ ರಾಗಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ.
ಆದರೆ ಇದೀಗ ರಾಗಿಯ ಬೆಲೆ ಇಳಿಕೆ ಕಂಡಿದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಬೆಲೆ ಕುಸಿದಿದೆ ಎಂದು ಗಾಬರಿಯಾಗಿ ಯಾರೂ ಕೂಡ ಕಡಿಮೆ ಹಣಕ್ಕೆ ಮಾರುವುದು ಬೇಡ. ಸರ್ಕಾರ ಖರೀದಿಸುವವರೆಗೆ ಕಾಯುವುದು ಸೂಕ್ತ ಎಂದು ಸಚಿವ ಕೃಷ್ಣ ಬೈರೇ ಗೌಡ ಹೇಳಿದರು.

ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಗೆ 1,500 ರೂ.ನಿಂದ 1,700 ಇದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ 1,900 ಬೆಂಬಲ ಬೆಲೆ ನಿಗದಿ ಪಡಿಸಿದೆ. ಅದಕ್ಕೆ ರಾಜ್ಯ 400 ರೂ. ಬೋನಸ್ ನೀಡಲಿದ್ದು ಒಟ್ಟು 2,300 ರೂ. ನೀಡಿ ಖರೀದಿ ಮಾಡಲಾಗುವುದು ಎಂದರು.
ಶೇಂಗಾ, ಹೆಸರು, ಉದ್ದಿಮೆ ದಾರರಿಗೆ ಸದ್ಯವೇ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಡಿ ರಾಗಿ, ಉದ್ದು, ಶೇಂಗಾ ಖರೀದಿಗೆ ಯಾವುದೇ ಸಮಸ್ಯೆ ಇಲ್ಲ. ತೊಗರಿ ಮತ್ತು ಮೆಕ್ಕೆ ಜೋಳ ಖರೀದಿಗೆ ಸರ್ಕಾರದಿಂದ ಅನುಮತಿ ಸಿಕ್ಕಿಲ್ಲ . ಶೇಂಗಾ ಖರೀದಿ್ಎ ೪೦ ಕೇಂದ್ರಗಳನ್ನು ಆರಂಭಿಸಲಾಗುವುದು. ಕ್ವಿಂಟಲ್ ಗೆ 4,450 ರಂತೆ ಈ ವರ್ಷ 47,500 ಟನ್ ಶೇಂಗಾ ಖರೀದಿಸಲಾಗುವುದು.
10 ಲಕ್ಷ ಟನ್ ಉತ್ಪಾದನೆ: ಈ ವರ್ಷ 105 ರಿಂದ 110 ಲಕ್ಷ ಟನ್ ಆಹಾರ ಧಾನ್ಯಗಳ ಉತ್ಪಾದನೆ ಆಗುವ ಸಾಧ್ಯತೆ ಇದೆ. ಮುಂಗಾರಿನಲ್ಲಿ 30.85 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದ್ದು, 27 ಲಕ್ಷ ಟನ್ ಇಳುವರಿ ಬರುವ ನಿರೀಕ್ಷೆ ಇದೆ. ಹಿಂಗಾರಿನಲ್ಲಿ 64 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಆಗಿದ್ದು, 75 ಲಕ್ಷ ಟನ್ ಇಳುವರಿ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications