Get Updates
Get notified of breaking news, exclusive insights, and must-see stories!

Startup Hub: ಬೆಂಗಳೂರಿನಲ್ಲಿ ವಿದೇಶಿ ಮಾದರಿಯಲ್ಲಿ ಪ್ರತ್ಯೇಕ 'ಸ್ಟಾರ್ಟ್‌ಅಪ್ ಹಬ್' ಸ್ಥಾಪನೆ

ಬೆಂಗಳೂರು, ಆಗಸ್ಟ್ 08: ಕರ್ನಾಟಕ ರಾಜ್ಯ ರಾಜಧಾನಿ ಹೊಸ ಹೊಸ ಉದ್ಯಮಗಳನ್ನು ತನ್ನತ್ತ ಸದಾ ಕೈಬೀಸಿ ಕರೆಯುತ್ತದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಈ ನಡುವೆ ಜಾಗತಿಕ ನವೋದ್ಯಮಗಳ ಸವಾಲಿನ ಎರಡನೇ ಆವೃತ್ತಿ 'ವೆಂಚುರೈಸ್ 24' ಅನಾವರಣಗೊಳಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ನವೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ.

ದೇಶದ ಸ್ಟಾರ್ಟ್‌ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದು. ಇದು ಜಪಾನ್, ದಕ್ಷಿಣ ಕೊರಿಯಾಗಳ ಮಾದರಿಯಲ್ಲಿ ಈ ಸ್ಟಾರ್ಟ್‌ಅಪ್‌ ಪಾರ್ಕ್‌ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

Karnataka Government has Plan to Set Up A Startup Hub in Bengaluru

ಈ ಸ್ಟಾರ್ಟ್‌ಅಪ್‌ ಪಾರ್ಕ್‌ನಲ್ಲಿ ನವೋದ್ಯಮಗಳ ಅಗತ್ಯಗಳಿಗೆ ತಕ್ಕಂತೆ ಸ್ಥಳಾವಕಾಶ/ ನಿವೇಶನ ಒದಗಿಸಲಾಗುವುದು. ಸಕಲ ಸೌಲಭ್ಯ ಸಜ್ಜಿತ, ಬಳಕೆಗೆ ಸಿದ್ಧ ಇರುವ ಕಚೇರಿಗಳು ಇಲ್ಲಿ ಇರಲಿವೆ. ಪ್ರತಿಭಾನ್ವಿತ ನವೋದ್ಯಮಿಗಳು ತಮ್ಮ ವಿನೂತನ ಆಲೋಚನೆಗಳನ್ನು ಸುಲಲಿತವಾಗಿ ಕಾರ್ಯಗತಗೊಳಿಸಲು ಪೂರಕವಾದ ಪರಿಸರವನ್ನು ಇಲ್ಲಿ ಕಲ್ಪಿಸಿಕೊಡಲಾಗುವುದು ಎಂದರು.

ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ಕೇಂದ್ರ

ನವೋದ್ಯಮ ಸವಾಲು ಉಪಕ್ರಮವು ಕರ್ನಾಟಕವನ್ನು ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಬೆಳೆಸುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಹೂಡಿಕೆದಾರರು ಮತ್ತು ಉದ್ಯಮ ಪಾಲುದಾರರ ಮಧ್ಯೆ ಸಂವಹನ ಒದಗಿಸುವ ಮೂಲಕ ತಯಾರಿಕೆ ಮತ್ತು ಸಂಬಂಧಿತ ವಲಯಗಳಲ್ಲಿನ ನವೋದ್ಯಮಗಳಿಗೆ ಕರ್ನಾಟಕವನ್ನು ಆದ್ಯತೆಯ ತಾಣವನ್ನಾಗಿ ಮಾಡಲಿದೆ. 'ವೆಂಚುರೈಸ್-24' ಕಾರ್ಯಕ್ರಮದ ಯಶಸ್ಸಿಗೆ ಟಿಐಇ ಗ್ಲೋಬಲ್‌ ಜೊತೆಗೆ ಕೈಜೋಡಿಸಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಹೊಸ ಉಪಕ್ರಮಗಳನ್ನು ಪರಿಚಯಿಸುವ, ಮಾರ್ಗದರ್ಶನ ಕಾರ್ಯಕ್ರಮಗಳನ್ನು ವಿಸ್ತರಿಸುವ ಮತ್ತು ಜಾಗತಿಕ ಹೂಡಿಕೆದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಮೂಲಕ ಈ ವರ್ಷದ ಕಾರ್ಯಕ್ರಮವನ್ನು ಇನ್ನಷ್ಟು ದೊಡ್ಡದಾಗಿ ಮತ್ತು ಉತ್ತಮಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

Karnataka Government has Plan to Set Up A Startup Hub in Bengaluru

ಎರಡನೇ ಆವೃತ್ತಿಯ ವೆಂಚುರೈಸ್ ಸ್ಪೂರ್ತಿ

ಹಿಂದಿನ ವರ್ಷದ ಯಶಸ್ಸಿನಿಂದ ಸ್ಫೂರ್ತಿ ಪಡೆದಿರುವ ಕರ್ನಾಟಕ ರಾಜ್ಯ ಸರ್ಕಾರವು, ಟಿಐಇ ಗ್ಲೋಬಲ್‌ ಮತ್ತು ಟಿಐಇ ಬೆಂಗಳೂರಿನ ಸಹಯೋಗದಲ್ಲಿ ಈ ಬಾರಿಯ ವೆಂಚುರೈಸ್ ಆಯೋಜಿಸುತ್ತಿದೆ. ಈ ವರ್ಷದ ಜಾಗತಿಕ ನವೋದ್ಯಮ ಸವಾಲನ್ನು ವಿವಿಧ ಕ್ಷೇತ್ರಗಳಲ್ಲಿನ ಹೊಸ ಆವಿಷ್ಕಾರಗಳನ್ನು ಗುರುತಿಸಲು, ಪೋಷಿಸಲು ಮತ್ತು ಬೆಂಬಲಿಸುವ ಉದ್ದೇಶಕ್ಕೆ ಸಮರ್ಪಿಸಲಾಗಿದೆ.

ಮೂರು ಪ್ರಮುಖ ವಲಯಗಳಾದ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ಶುದ್ಧ ಇಂಧನ ವಾಹನ ಸಂಚಾರ, ವೈಮಾಂತರಿಕ್ಷ ಹಾಗೂ ರಕ್ಷಣಾ ಕ್ಷೇತ್ರಗಳಿಗೆ 'ವೆಂಚುರೈಸ್ 24' ಗಮನ ಕೇಂದ್ರೀಕರಿಸಲಿದೆ. ಈ ವಲಯಗಳ ಉದ್ಯಮಿಗಳೇ ತಾವು ಎದುರಿಸುತ್ತಿರುವ ಸವಾಲುಗಳನ್ನು ಇಲ್ಲಿ ಪ್ರಸ್ತುತಪಡಿಸಲಿದ್ದಾರೆ.

ನವೋದ್ಯಮಗಳು ವಾಸ್ತವ ಪ್ರಪಂಚದ ಸವಾಲುಗಳನ್ನು ಬಗೆಹರಿಸಲು ಇದರಿಂದ ನೆರವಾಗಲಿದೆ. ಉದ್ಯಮಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಮುಂದೆ ಬರುವ ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಸಮರ್ಥ ವೇದಿಕೆಯಾಗಿರಲಿದೆ. ಜೊತೆಗೆ ಹೂಡಿಕೆದಾರರು ಮತ್ತು ಮಾರ್ಗದರ್ಶಕರ ನೆರವು ಪಡೆಯುವುದಕ್ಕೂ ಸಾಧ್ಯವಾಗಲಿದೆ.

ಸಮಾರಂಭದಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಸ್ಟಾರ್ಟ್ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ ಪ್ರಕಾಶ್ ಅವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+