ಇನ್ಮುಂದೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್
ಬೆಂಗಳೂರು, ಜೂನ್ 08 : ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಮಹತ್ವದ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.
ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕಗಳನ್ನು ಅಳವಡಿಸಲಾಗುತ್ತಿದೆ. ಪ್ರಥಮ ಹಂತವಾಗಿ ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 25 ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ರಮೇಶ್ ಕುಮಾರ್ ಈ ಯೋಜನೆಗೆ ಚಾಲನೆ ನೀಡಿದರು.

ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುವ ಪದ್ದತಿಯನ್ನು ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗಿದೆ.
ಇದೇ ಸಂದರ್ಭದಲ್ಲಿ ಶ್ರವಣದೋಷ ಇರುವವರಿಗೆ ಉಚಿತ ಚಿಕಿತ್ಸೆ ಮತ್ತು ಸಲಕರಣೆ ನೀಡಿ 10 ಕಾಕ್ಲಿಯರ ಇಂಪ್ಲಾಂಟ್ ಗಳನ್ನು ಒದಗಿಸುವ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ: ಶರಣಪ್ರಕಾಶ್ ಅವರು ರಾಜ್ಯದಾದ್ಯಂತ ಜಾರಿ ಮಾಡಿದರು.












Click it and Unblock the Notifications