ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿಗೆ ಭರ್ಜರಿ ಸಿದ್ಧತೆ!
Bengaluru towing: ಬೆಂಗಳೂರು ವಾಹನ ಸವಾರರಿಗೆ ಶಾಕ್ ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ವಾಹನ ಸವಾರು ಹಾಗೂ ಸಾರ್ವಜನಿಕರ ವಿರೋಧದ ನಂತರ ಬೆಂಗಳೂರು ಟ್ರಾಫಿಕ್ ಪೊಲೀಸರು ವಾಹನಗಳ ಟೋಯಿಂಗ್ ಮಾಡುವುದನ್ನು ಬಿಟ್ಟಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿ ಮಾಡುವುದಕ್ಕೆ ಸಿದ್ಧತೆ ನಡೆದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರೇ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಆರು ತಿಂಗಳ ಹಿಂದೆ ಟೋಯಿಂಗ್ ಮಿತಿ ಮೀರಿತ್ತು. ಸಾರ್ವಜನಿಕರ ತೀವ್ರ ವಿರೋಧದ ನಂತರ ಇದನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಕೈಬಿಟ್ಟಿತ್ತು. ಇದೀಗ ಮತ್ತೆ ಟೋಯಿಂಗ್ ಜಾರಿ ಮಾಡುವುದಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನಗಳ ಮೇಲೆ ಬೆಂಗಳೂರು ನಗರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದರು. ವಾಹನಗಳನ್ನು ಟೋಯಿಂಗ್ ಮಾಡುವ ಮೂಲಕ ದಂಡ ವಿಧಿಸಲಾಗುತ್ತಿತ್ತು. ಈ ರೀತಿ ದಂಡ ವಿಧಿಸಲಾಗುತ್ತದೆ ಎನ್ನುವ ಆತಂಕದಿಂದಲೇ ವಾಹನ ಸವಾರರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದನ್ನು ತಪ್ಪಿಸುತ್ತಿದ್ದರು. ಆದರೆ ಇದೀಗ ವಾಹನ ಸವಾರರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು ಹೆಚ್ಚಾಗಿದೆ. ಇದರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಳವಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಟೋಯಿಂಗ್ ಮರು ಜಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಟೋಯಿಂಗ್ ಪದ್ಧತಿ ಜಾರಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ನಗರದ 22 ಹೈಡೆನ್ಸಿಟಿ ಕಾರಿಡಾರ್‌ಗಳ ವ್ಯಾಪ್ತಿಗೆ ಬರುವ 75 ಜಂಕ್ಷನ್‌ಗಳಲ್ಲಿ ಟೋಯಿಂಗ್ ಮರು ಜಾರಿಯಾಗುವ ಸಾಧ್ಯತೆ ಇದೆ. ಟೋಯಿಂಗ್ ಮರು ಜಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಟೋಯಿಂಗ್‌ಗೆ ವಿರೋಧ: ಬೆಂಗಳೂರಿನಲ್ಲಿ ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿದರೆ ಟೋಯಿಂಗ್ ಮಾಡಲಾಗುತ್ತಿತ್ತು. ಟೋಯಿಂಗ್ ಮಾಡಿದರೆ ನೋ ಪಾರ್ಕಿಂಗ್ ಶುಲ್ಕ ಹಾಗೂ ಟೋಯಿಂಗ್ ಶುಲ್ಕ ಎರಡನ್ನೂ ವಿಧಿಸಲಾಗುತ್ತಿತ್ತು. ಆದರೆ ಟೋಯಿಂಗ್ ವಿಧಾನಕ್ಕೆ ಹಾಗೂ ಮೈಕ್‌ನಲ್ಲಿ ಕೂಗದೆ, ವಾಹನಗಳಿಗೆ ಡ್ಯಾಮೇಜ್ ಮಾಡುವುದು ಸೇರಿದಂತೆ ವಿವಿಧ ಕಾರಣಕ್ಕೆ ಟೋಯಿಂಗ್ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.

89 ಕೋಟಿ ದಂಡ ವಸೂಲಿ!
ಬೆಂಗಳೂರಿನಲ್ಲಿ ಹೆಚ್ಚು ವಾಹನ ಸವಾರರು ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಾರೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಹ ಸಂಚಾರ ನಿಯಮಗಳ ಉಲ್ಲಂಘನೆಗೆ ಕಾರಣವಾಗುತ್ತಿದೆ. 2024ನೇ ಸಾಲಿನಲ್ಲಿ ಟ್ರಾಫಿಕ್ ಜಾಮ್ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಗಳಿಂದಲೇ ಬರೋಬ್ಬರಿ 89 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ. ಕಳೆದ ವರ್ಷ 85 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಾರೆ.
ಈ ರೀತಿ ವಾಹನ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಂದ ಬರೋಬ್ಬರಿ 89 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವುದಕ್ಕೆ ಕಡಿವಾಣ ಹಾಕುವುದಕ್ಕೆ ದಂಡ ಹಾಕುವುದು ಒಂದೇ ಪರಿಹಾರವಲ್ಲ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯೂ ಇದೆ ಎಂದು ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಟೋಯಿಂಗ್ ಮರು ಜಾರಿಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.












Click it and Unblock the Notifications