• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಾಹಿತ್ಯಪ್ರಿಯರಿಗೆ ಖುಷಿ ಸುದ್ದಿ ನೀಡಿದ ಸರ್ಕಾರ: ಗ್ರಂಥಾಲಯ ತೆರೆಯಲು ಅನುಮತಿ

|

ಬೆಂಗಳೂರು, ಸೆಪ್ಟೆಂಬರ್ 11: ಲಾಕ್‌ಡೌನ್ ಆರಂಭವಾದಾಗಿನಿಂದ ಗ್ರಂಥಾಲಯಗಳಿಗೆ ಹೋಗಲು ಸಾಧ್ಯವಾಗದೆ ಓದುವ ಅಭ್ಯಾಸದಿಂದ ವಂಚಿತರಾಗಿದ್ದ ಸಾಹಿತ್ಯಪ್ರಿಯರಿಗೆ ನೆಮ್ಮದಿಯ ಸುದ್ದಿಯನ್ನು ಸರ್ಕಾರ ನೀಡಿದೆ. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಗ್ರಂಥಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೇಂದ್ರ ಸರ್ಕಾರವು ಆಗಸ್ಟ್ 29ರಂದು ಬಿಡುಗಡೆ ಮಾಡಿದ ಅನ್‌ಲಾಕ್‌ 4.0ರ ಮಾರ್ಗಸೂಚಿಗಳಲ್ಲಿ ಸೆಪ್ಟೆಂಬರ್ 30ರವರೆಗೆ ಇನ್ನಷ್ಟು ಕಾರ್ಯಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದೆ. ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹೆಚ್ಚಿನ ಕಾರ್ಯಗಳನ್ನು ಆರಂಭಿಸಲು ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕೊರೊನಾ; ಸಾರ್ವಜನಿಕ ಗ್ರಂಥಾಲಯ ಸೇವೆ ರದ್ದು

ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರೆ ಎಲ್ಲ ವಲಯಗಳಲ್ಲಿಯೂ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆದರೆ ಗ್ರಂಥಾಲಯಗಳಲ್ಲಿ ಕೋವಿಡ್ ಸಂಬಂಧಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

   ಪೋಷಕರಿಗೆ ಸಿಹಿ ಸುದ್ದಿ ಕೊಟ್ಟ BJP government | Oneindia Kannada

   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು. ಅವರಿಗೆ ಸೂಕ್ತ ಗ್ರಂಥಾಲಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ.

   English summary
   Karnataka government has ordered to open all public libraries across the state except in containment zone.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X