ಕೆಂಪೇಗೌಡ ಜಯಂತಿ: ಪರಂಪರೆ ತಾಣಗಳ ಅಭಿವೃದ್ಧಿಗೆ ಒತ್ತು ನೀಡಿದ ಸರ್ಕಾರ

ಬೆಂಗಳೂರು, ಜೂನ್ 27: 'ನಾಡಪ್ರಭು ಕೆಂಪೇಗೌಡ ಪರಂಪರೆ ತಾಣಗಳ ಕ್ಷೇತ್ರಾಭಿವೃದ್ಧಿ ಕಾಯ್ದೆ-2018' ಕೆಂಪೇಗೌಡರ ಜಯಂತಿಯ ದಿನವಾದ ಜೂನ್ 27ರಿಂದ ಜಾರಿಗೆ ಬಂದಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾತನಾಡುತ್ತಿದ್ದ ಅವರು, 'ಬೆಂಗಳೂರಿನ ಸಂಸ್ಥಾಪಕರಾದ ಕೆಂಪೇಗೌಡರಿಗೆ ಸಂಬಂಧಿಸಿದ ಪರಂಪರೆಯ ತಾಣಗಳು, ಸ್ಮಾರಕಗಳು ಮತ್ತು ಪ್ರವಾಸ ಸ್ಥಳಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯು ಈ ಕಾಯ್ದೆಯಿಂದ ಸಾಧ್ಯವಾಗಲಿದೆ. ಇಂದು ಜಗತ್ತಿನ ಗಮನ ಸೆಳೆದಿರುವ ಬೆಂಗಳೂರು ನಗರದ ನಿರ್ಮಾತೃವಿಗೆ ಇದು ರಾಜ್ಯ ಸರಕಾರ ಸಲ್ಲಿಸುತ್ತಿರುವ ಸೂಕ್ತ ಗೌರವ' ಎಂದಿದ್ದಾರೆ.

'ಬೆಂಗಳೂರನ್ನು ಅಭಿವೃದ್ಧಿಪಡಿಸಲು ಕೆಂಪೇಗೌಡರು ಕೈಗೊಂಡ ಕ್ರಮಗಳನ್ನು ಗುರುತಿಸಿ, ಅವರಿಗೆ ಸಂಬಂಧಿಸಿದ ಪ್ರತಿಯೊಂದು ತಾಣ ಮತ್ತು ಸ್ಮಾರಕಗಳನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಆದ್ಯ ಕರ್ತವ್ಯ. ಇದಕ್ಕಾಗಿ ಪ್ರಾಧಿಕಾರವು ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಿ, ಅವುಗಳನ್ನು ಅನುಷ್ಠಾನಗೊಳಿಸಲಿದೆ' ಎಂದು ದೇಶಪಾಂಡೆ ವಿವರಿಸಿದ್ದಾರೆ.

Karnataka Government schemes for Kempe Gowda Jayanti: RV Deshpande

'ಕೆಂಪೇಗೌಡರಿಗೆ ಸಂಬಂಧಿಸಿದ ಸ್ಥಳಗಳು ಮತ್ತು ಸ್ಮಾರಕಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಪಾರ ಸಂಖ್ಯೆಯಲ್ಲಿವೆ. ಇವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಷಿಸುವಂತಹ ಪರಂಪರೆ, ಸಾಂಸ್ಕೃತಿಕ ಮತ್ತು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು' ಎಂದು ಸಚಿವರು ನುಡಿದಿದ್ದಾರೆ.

'ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವ ಈ ಪ್ರಾಧಿಕಾರಕ್ಕೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಉಳಿದಂತೆ ಕಂದಾಯ ಸಚಿವರು ಮತ್ತು ಕನ್ನಡ-ಸಂಸ್ಕೃತಿ ಸಚಿವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಬೆಂಗಳೂರು ನಗರದ ರಾಜ್ಯಸಭಾ ಸದಸ್ಯರು, ಯಲಹಂಕ ಮತ್ತು ಮಾಗಡಿ ಶಾಸಕರು, ಬಿಬಿಎಂಪಿ ಮೇಯರ್, ಕಂದಾಯ, ಹಣಕಾಸು ಇಲಾಖೆ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಗಳ ಹೆಚ್ಚುವರಿ ಅಪರ ಮುಖ್ಯ ಕಾರ್ಯದರ್ಶಿಗಳು ಅಥವಾ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು, ಮತ್ತು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸದಸ್ಯರಾಗಿರುತ್ತಾರೆ' ಎಂದು ದೇಶಪಾಂಡೆ ಮಾಹಿತಿ ನೀಡಿದ್ದಾರೆ.

ಜತೆಗೆ, ಕೆಂಪೇಗೌಡರ ಇತಿಹಾಸ ಮತ್ತು ಪರಂಪರೆಯ ಬಗ್ಗೆ ವಿದ್ವತ್ತನ್ನುಳ್ಳ ಆರು ಪರಿಣತರನ್ನು ಸರಕಾರವು ಈ ಪ್ರಾಧಿಕಾರಕ್ಕೆ ಅಧಿಕಾರೇತರ ಸದಸ್ಯರನ್ನಾಗಿ ನಾಮಕರಣ ಮಾಡಲಿದೆ ಎಂದೂ ಸಚಿವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+