KPSC- KEA: ಕೆಪಿಎಸ್‌ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಒಂದಷ್ಟು ಪರೀಕ್ಷೆಗಳಲ್ಲಿ ಅಕ್ರಮ ಸಾಬೀತಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ವ್ಯಾಪಕ ಟೀಕೆಗಳನ್ನು ಎದುರಿಸಬೇಕಾಯಿತು. ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಆಕ್ರೋಶ, ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ಕೃಷಿ ಇಲಾಖೆಗೆ ಸಂಬಂಧಿಸಿದ ನಿರ್ದಿಷ್ಟ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವಂತೆ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿದ್ದ ಕೃಷಿ ಇಲಾಖೆ ಸಂಬಂಧಿ ಖಾಲಿ ಹುದ್ದೆಗಳ ನೇಮಕಾತಿಯ ಆದೇಶ ಬದಲಾಗಿದೆ. ಅಂದರೆ ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಹೆಗಲಿದೆ ಹಾಕಲಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.

Agriculture Minister Cheluvarayaswamy announces that KEA will now conduct recruitment for 945 Agriculture Officer posts replacing KPSC to ensure transparency

ಅಭ್ಯರ್ಥಿಗಳ ಮನವಿಗೆ ಸರ್ಕಾರ ಸ್ಪಂದನೆ

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಸಚಿವ ಚೆಲುವರಾಯಸ್ವಾಮಿ ಅವರು, ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ಆಗಿದೆ. ಕೃಷಿ ಇಲಾಖೆಯ ನೇಮಕಾತಿಗಳ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು. ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.

ಉದ್ಯೋಗಾಕಾಂಕ್ಷಿಗಳ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದೆ. KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರತಿಭಾವಂತರಿಗೆ ಅನ್ಯಾಯ ಆಗದಂತೆ ಕ್ರಮ

ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಕಡೆಯಿಂದ ಶುಭ ಹಾರೈಕೆಗಳು. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ನಮ್ಮ ಸರ್ಕಾರ ಸದಾ ನಿಮ್ಮ ಬೆನ್ನಿಗಿರುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಈ ಎಕ್ಸ್‌ ಪೋಸ್ಟ್‌ಗೆ ಸಾಕಷ್ಟು ಮಂದಿ ಉದ್ಯೋಗಾಕಾಂಕ್ಷಿಗಳ ಪರವಾಗಿ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಕೆಇಎ ಸಹ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+