SC ST: ಪರಿಶಿಷ್ಟರ ಯೋಜನೆಗಳಿಗೆ ₹16,000 ಕೋಟಿ ಅನುದಾನ ಬಿಡುಗಡೆ ಮಾಡದೇ ದ್ರೋಹ..
ಬೆಂಗಳೂರು, ಜನವರಿ 27: ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ (2024-25) ಪೂರ್ಣಗೊಳ್ಳುತ್ತಾ ಬಂದರೂ ಇನ್ನೂ ಸಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಗಳ ಅಭಿವೃದ್ಧಿ ಯೋಜನೆಗಳಿಗೆ ವಿವಿಧ ಕಾರ್ಯಕ್ರಮಗಳಡಿ ಇಟ್ಟಿದ್ದ ಶೇಕಡಾ 41ರಷ್ಟು ಅನುದಾನ ಬಿಡುಗಡೆ ಮಾಡಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಬಾಕಿ ಉಳಿಸಿಕೊಂಡು ಪರಿಶಿಷ್ಟರಿಗೆ ದ್ರೋಹ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಹ್ತ ಸರ್ಕಾರ 2024-25 ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಉಪಜಾತಿ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (TSP) ಕಾರ್ಯಕ್ರಮಗಳ ಅಡಿ ಕೋಟ್ಯಾಂತರ ರೂಪಾಯಿ ಹಣ ಹಂಚಿಕೆ ಮಾಡಿದೆ. ಇದರಲ್ಲಿ ಇನ್ನೂವರೆಗೆ ₹16,429 ಕೋಟಿ ರೂಪಾಯಿ ನೀಡದೇ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್ ಸೋಮವಾರ ಮಾಹಿತಿ ಹಂಚಿಕೊಂಡಿದ್ದಾರೆ.

ಪರಿಶಿಷ್ಟರಿಗೆಲ್ಲ SCSP/TSP ಅನುದಾನ ಗ್ಯಾರೆಂಟಿ? ಶಿರ್ಷಿಕೆಯಡಿ ವರದಿ ಹಂಚಿಕೊಂಡಿದ್ದಾರೆ. 2024-25 ನೇ ಆರ್ಥಿಕ ವರ್ಷ ಮುಗಿಯಲು ಇನ್ನು ಕೇವಲ 2 ತಿಂಗಳ ಬಾಕಿ ಉಳಿದಿದೆ. ಹೀಗಿದ್ದರೂ SCSP/TSP ಯೋಜನೆ ಅಡಿಯಲ್ಲಿ ಹಂಚಿಕೆ ಮಾಡಿದ್ದ ರೂ.39,914 ಕೋಟಿ ಅನುದಾನದಲ್ಲೊಇ ಬರೋಬ್ಬರಿ 16,429 ಕೋಟಿ ಹಣವನ್ನು (41%) ಬಿಡುಗಡೆ ಮಾಡದೆ ಪರಿಶಿಷ್ಟ ಸಮುದಾಯಗಳಿಗೆ ಸರ್ಕಾರ ದ್ರೋಹ ಬಗೆದಿದೆ. ರಾಜ್ಯದಲ್ಲಿ ದಲಿತ ವಿರೋಧಿ ಸರ್ಕಾರ ಇದೆ ಎಂದು ಅವರು ದೂರಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ನವರೇ, ಬರುವ ತಿಂಗಳು 2025-26ನೇ ಸಾಲಿನ ಬಜೆಟ್ ಮಂಡನೆ ಆಗಬೇಕಿದೆ. ಇನ್ನೆರಡು ತಿಂಗಳಲ್ಲಿ ಹೊಸ ಆರ್ಥಿಕ ವರ್ಷ ಜಾರಿಗೆ ಬರಲಿದೆ. ಆದರೆ ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆಯಾದ ಶೇ. 41.46% SCSP/TSP ಅನುದಾನವನ್ನೇ ಈ ಬಿಡುಗಡೆ ಮಾಡಿಲ್ಲ.
ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದರೆ ಕಲ್ಯಾಣ ಆಗುತ್ತಾ?
ಹಂಚಿಕೆ ಮಾಡಿದ ಅನುದಾನದಲ್ಲಿ ಬಾಕಿ ಉಳಿಸಿಕೊಂಡ ಹಣ ಬಿಡುಗಡೆ ಮಾಡುವುದು ಯಾವಾಗ? ಖರ್ಚು ಯಾವಾಗ ಮಾಡುವುದು? ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ?. ನಿಮ್ಮ ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಮಾಡಿದ್ದರೆ ಪರಿಶಿಷ್ಟ ಸಮುದಾಯಗಳು ಕಲ್ಯಾಣ ಆಗುತ್ತಾ? ಎಂದು ಸಚಿವರನ್ನು ಪ್ರಶ್ನಿಸಿದ್ದಾರೆ.
ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆ ಮಾಡಿ, ಅನುದಾನ ಬಾಕಿ ಉಳಿಸಿಕೊಳ್ಳಲಾಗಿದೆ. ಇದೇನಾ ತಮ್ಮ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ಸಿದ್ದರಾಮಯ್ಯನವರು ಮತ್ತು ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ಸರ್ಕಾರದ ನಡೆ ಖಂಡಿಸಿದ್ದಾರೆ.
ಒಂದು ಕಡೆ ಬಿಡುಗಡೆ ಮಾಡಿರುವ ಸ್ವಲ್ಪ ಅನುದಾನವನ್ನು ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನು ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಮತ್ತು ತಮ್ಮ ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇನ್ನು ಮುಂದೆ ಬುದ್ಧ, ಬಸವ, ಅಂಬೇಡ್ಕರ್ ಹೆಸರು ಹೇಳಿಕೊಂಡು ರಾಜಕೀಯ ಮಾಡಬೇಡಿ ಎಂದು ಅವರು ತಿಳಿಸಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications