ನೆಲಮಂಗಲ ಸ್ಯಾಟಲೈಟ್ ಟೌನ್ ಆಗಿ ಸಮಗ್ರ ಅಭಿವೃದ್ಧಿಗೆ: ಸುಧಾಕರ್
ಬೆಂಗಳೂರು ನವೆಂಬರ್ 29: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡು ಅತಿ ವೇಗವಾಗಿ ಬೆಳೆಯುತ್ತಿರುವ ನೆಲಮಂಗಲ ಪಟ್ಟಣವನ್ನು ಸ್ಯಾಟಲೈಟ್ ಟೌನ್ ಆಗಿ ಪರಿವರ್ತಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನೆಲಮಂಗಲದ ತಾಲೂಕು ಪಂಚಾಯತಿ ಆವರಣದಲ್ಲಿ ಇಂದು ನಡೆದ 'ಜನತಾದರ್ಶನ' ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು. ಅಭಿವೃದ್ಧಿ ಭಾಗವಾಗಿ ನೆಲಮಂಗಲ ಪಟ್ಟಣಕ್ಕೆ ಉಪನಗರ ರೈಲು ಹಾಗೂ ಮೆಟ್ರೋ ರೈಲುಗಳ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.
ರಾಜಧಾನಿ ಬೆಂಗಳೂರು ಸುತ್ತ ಮುತ್ತಲಿನ 7 ರಿಂದ 8 ನಗರಗಳನ್ನು ಸ್ಯಾಟಲೈಟ್ ನಗರಗಳನ್ನಾಗಿ ಅಭಿವೃದ್ಧಿ ಪಡಿಸುವ ಉದ್ದೇಶ ಸರ್ಕಾರಕ್ಕಿದೆ. ಇವುಗಳಲ್ಲಿ ನೆಲಮಂಗಲ ನಗರವು ಒಂದು ಎಂಬುದು ಸಂತಸದ ವಿಚಾರ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಮೂಲ ಸೌಕರ್ಯಗಳ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಪ್ರತಿಯೊಂದು ತಾಲೂಕುಗಳಲ್ಲಿ 20 ರಿಂದ 30 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸುಮಾರು 500 ಕೋಟಿ ಹಣ ಸರ್ಕಾರ ಒದಗಿಸಿದೆ.

'ನಮ್ಮ ಕ್ಲಿನಿಕ್' ಗಳಿಗೆ ಸಿಎಂ ಚಾಲನೆ
ನಗರ ಪ್ರದೇಶಗಳ ಕೊಳಗೇರಿಗಳಲ್ಲಿ ವಾಸಿಸುವ ಬಡಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲು 'ನಮ್ಮ ಕ್ಲಿನಿಕ್' ಗಳಿಗೆ ಬರುವ ಡಿಸೆಂಬರ್ 14 ರಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಅದೇ ದಿನ ರಾಜ್ಯದ ನೂರು ತಾಲೂಕುಗಳಲ್ಲಿ ನೂರು 'ನಮ್ಮ ಕ್ಲಿನಿಕ್' ಗಳು ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮವು ಜನಸ್ನೇಹಿ, ಜನೋಪಯೋಗಿ ಆಡಳಿತ ನೀಡಲು ಸಹಕಾರಿಯಾಗಿದೆ. ಕಂದಾಯ ಇಲಾಖೆಯ ಸೇವೆಗಳು, ಭೂ ದಾಖಲೆಗಳ ಮಾಪನ, ಸರ್ವೆ ಸ್ಕೆಚ್, ತಿದ್ದುಪಡಿ, ಪೌತಿಖಾತೆ, ಸಾಗುವಳಿ ಚೀಟಿ ಮೊದಲಾದ ಕಾರ್ಯಗಳಿಗೆ ವೇಗ ಒದಗಿಸಲು ಸಾಧ್ಯವಾಗಿದೆ. ಬರುವ ತಿಂಗಳಿನಿಂದ ನಿರಂತರವಾಗಿ ಜನತಾದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಜಿಲ್ಲೆಯ ಎಲ್ಲಾ ಗ್ರಾಮಾಂತರ ಪ್ರದೇಶಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ಸ್ಥಳದಲ್ಲಿ ಸೂಚಿಸಿದರು.
ಅಪಘಾತದಲ್ಲಿ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ
ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದ್ವಿಚಕ್ರ ವಾಹನ ಸವಾರರಾದ ಮಾರುತಿ ಹಾಗೂ ಮಹೇಶ ಅವರ ಕುಟುಂಬದ ವಾರಸುದಾರರಿಗೆ ತಲಾ 25 ಲಕ್ಷ ರೂ.ಪರಿಹಾರ ನೀಡಲು ಬಿಬಿಎಂಪಿಗೆ ಸೂಚಿಸಲಾಗಿತ್ತು. ಅದರಂತೆ ಮೊದಲ ಹಂತದಲ್ಲಿ ಇಂದು ತಲಾ 10 ಲಕ್ಷ ರೂ.ಪರಿಹಾರದ ಚೆಕ್ ನೀಡಲಾಗುತ್ತಿದೆ.ಉಳಿದ ಪರಿಹಾರ ಮೊತ್ತ ಶೀಘ್ರ ನೀಡಲು ನಿರ್ದೇಶಿಸಲಾಗುವುದು ಎಂದರು.

ನಿವೇಶನಗಳ ಹಕ್ಕು ಪತ್ರ, ಗ್ರಾಮಗಳ ನಕಾಶೆ, ಸರ್ವೆ, ವಿಕಲಚೇತನರೊಬ್ಬರಿಗೆ ನಗರಸಭೆಯ ಮೂಲಕ ಪೆಟ್ಟಿಗೆ ಅಂಗಡಿ ಒದಗಿಸುವುದು, ಪತ್ರಿಕಾ ಭವನ ನಿರ್ಮಾಣ ಸೇರಿದಂತೆ ಅನೇಕ ಅಹವಾಲುಗಳನ್ನು ಸಚಿವರು ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ, ತಹಸೀಲ್ದಾರ ಮಂಜುನಾಥ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮೋಹನ್ ಮತ್ತಿತರರು ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications