ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಲಸೆ ಕಾರ್ಮಿಕರಿಗೆ ಸಂತಸದ ಸುದ್ದಿ ನೀಡಿದ ಕರ್ನಾಟಕ ಸರ್ಕಾರ

|
Google Oneindia Kannada News

ಬೆಂಗಳೂರು, ಮೇ 22: ಲಾಕ್‌ಡೌನ್‌ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ.

Recommended Video

BJP ಗ್ರಾಮ ಪಂಚಾಯಿತಿ ವಿಚಾರದಲ್ಲಿ ಹುನ್ನಾರ ಮಾಡುತ್ತಿದೆ | Oneindia kannada

ಬಿಹಾರ್, ಒಡಿಶಾ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಿಗೆ ಹೋಗಲು ದುಡ್ಡಿಲ್ಲದೇ ಕರ್ನಾಟಕದಲ್ಲೂ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ.

ನಮ್ಮತ್ರ ದುಡ್ಡಿಲ್ಲ, ನಮ್ಮನ್ನು ಕರೆಸಿಕೊಳ್ಳಿ: ಚೆನ್ನೈನಲ್ಲಿ ಅಸ್ಸಾಂ ಜನರು ಮನವಿನಮ್ಮತ್ರ ದುಡ್ಡಿಲ್ಲ, ನಮ್ಮನ್ನು ಕರೆಸಿಕೊಳ್ಳಿ: ಚೆನ್ನೈನಲ್ಲಿ ಅಸ್ಸಾಂ ಜನರು ಮನವಿ

'ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ' ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಸಿಎಂ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ''ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ & ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ'' ಎಂದು ಟ್ವೀಟ್ ಮಾಡಿದೆ.

Karnataka Government will bear the cost of travel of migrant workers

ಮೇ 31ರ ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

English summary
Karnataka Government will bear the cost of travel of migrant workers and stranded persons to their respective States by Shramik Trains up to 31st may, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X