ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಭೇಟಿ ಹಿನ್ನೆಲೆ: ಕೋವಿಡ್ ಪರೀಕ್ಷೆಗೆ ಒಳಗಾದ ರಾಜ್ಯಪಾಲರು

|
Google Oneindia Kannada News

ಬೆಂಗಳೂರು, ಆಗಸ್ಟ್ 03: ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ರಾಜ್ಯಪಾಲ ವಜುಭಾಯಿ ವಾಲಾ ಕೊವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

Recommended Video

Apple producion moves from China to India | Oneindia Kannada

ಸಿಎಂ ಯಡಿಯೂರಪ್ಪ ಅವರು ಜುಲೈ 31ರಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಮುಖ್ಯಮಂತ್ರಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ವರದಿ ನೆಗಟಿವ್ ಬಂದಿದೆ.

ರಾಜ್ಯಪಾಲರ ಆಪ್ತ ಕಾರ್ಯದರ್ಶಿ ತೇಜಸ್ ತೇಜಸ್ ಭಟ್ಟಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು ಅವರ ವರದಿಯೂ ನೆಗಿಟಿವ್ ಬಂದಿದೆ ಎಂದು ತಿಳಿದಿದೆ.

Karnataka governor Vajubhai Vala tested negative for COVID 19

ರಾಜ್ಯಪಾಲರನ್ನು ಭೇಟಿ ಮಾಡಿದ್ದ ವೇಳೆ ಗೃಹ ಸಚಿವ ಬಸವರಾಹ ಬೊಮ್ಮಾಯಿ ಸಹ ಸಿಎಂಗೆ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಆದ ಕಾರಣ ಇಂದು ರ್ಯಾಪಿಡ್ ಆಂಟಿಜಿನ್ ಟೆಸ್ಟ್ ಗೆ ಬೊಮ್ಮಾಯಿ ಒಳಗಾಗಿದ್ದರು. ವರದಿ ನೆಗಿಟಿವ್ ಬಂದಿದೆ.

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಯಡಿಯೂರಪ್ಪ ಅವರು, ರಾಜ್ಯದ ಜನತೆಗೆ ವಿಡಿಯೋ ಸಂದೇಶ ಕಳುಹಿಸಿದ್ದಾರೆ. "ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದಷ್ಟು ಬೇಗ ನಾನು ಗುಣಮುಖನಾಗಿ ಹೊರ ಬಂದು ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. ನಾನು ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ. ಇಲ್ಲಿಂದಲೇ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತಿದ್ದೇನೆ" ಎಂದು ಹೇಳಿದ್ದಾರೆ.

English summary
Karnataka governor Vajubhai Vala tested negative for COVID 19. july 31st CM was meet governor at Raj bhavan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X