ಬೆಂಗಳೂರು ಅಭಿವೃದ್ಧಿಗಾಗಿ 124 ಕೋಟಿ ರೂ. ಅನುದಾನ: ಡಿಕೆ ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 05: ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಈಗಾಗಲೇ ತಂದಿದೆ. ಇದರೊಂದಿಗೆ ಗ್ರೇಟರ್ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಇದೀಗ 124 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಅನುದಾನದಲ್ಲಿ ನಗರದಲ್ಲಿನ ಫುಟ್‌ಪಾತ್‌ಗಳ ಅಗಲೀಕರಣ, ಟ್ರಾಫಿಕ್ ಸಮಸ್ಯೆ ನಿವಾರಣೆ, ಹೊಸ ಸೈಕಲ್ ಮಾರ್ಗಗಳು, ಪಾರ್ಕ್‌ಗಳ ನವೀಕರಣ, ಅತ್ಯಾಧುನಿಕ ಶವಾಗಾರಗಳ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ಪಾದಚಾರಿ ಮಾರ್ಗದಲ್ಲಿ ಸುಸೂತ್ರ ಸಾರ್ವಜನಿರ ಸಂಚಾರ ಸಾಧ್ಯವಾಗುತ್ತದೆ. ಹಸರೀಕರಣ ಹೆಚ್ಚಿಸಲಾಗುತ್ತದೆ. ಸ್ಮಶಾನಗಳ ಮೆಲ್ದರ್ಜೆಗೆ ಏರಿಸುವ ಮೂಲಕ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಇಷ್ಟು ಮಾತ್ರವಲ್ಲದೇ ಬೆಂಗಳೂರನ್ನು ರಸ್ತೆ ಗುಂಡಿ ಮುಕ್ತ ಮಾಡುವ ಗುರಿ ಹೊಂದಿದ್ದೇವೆ. ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.
ಬೆಂಗಳೂರಲ್ಲಿ ಇಲ್ಲಿಯವರೆಗೆ 13,000ಕ್ಕಿಂತ ಹೆಚ್ಚು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ನಗರದ ಹಲವೆಡೆ ವೈಟ್ ಟಾಪಿಂಗ್ ಕಾಮಗಾರಿಗಾಗಿ 1,100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ. ಇದರ ಜೊತೆಗೆ ರಸ್ತೆ ಗುಂಡಿಗಳ ಬಗ್ಗೆ ಗುಂಡಿ ಗಮನ ಅಪ್ಲಿಕೇಷನ್‌ನಲ್ಲೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
05 ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗುಂಡಿ ದುರಸ್ತಿ
ಸೆಪ್ಟಂಬರ್ ಮೊದಲ ವಾರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ನಗರ ಪಾಲಿಕೆಗಳಾಗಿ ವಿಂಗಡಿಸಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಎಂದು ಮಾಡಲಾಯಿತು. ಅದರಡಿ "ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮತ್ತು ಬೆಂಗಳೂರು ಪೂರ್ವ ನಗರ ಪಾಲಿಕೆ' ಎಂದು ಐದು ಪಾಲಿಕೆಗಳು ಬರುತ್ತವೆ. ಇವುಗಳ ಅಡಿಯಲ್ಲಿ ಐದು ಆಯುಕ್ತರ ನೃತೃತ್ವದಲ್ಲಿ ನಗರದಲ್ಲಿ ರಸ್ತೆಗುಂಡಿ ದುರಸ್ತಿ, ಒತ್ತುವರಿ ತೆರವು ಕೆಲಸ ನಡೆಯುತ್ತಿದೆ.
ದಸರಾ: ಕಸ ತೆರವಿಗೆ ಸೂಚನೆ
ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆ ಹಬ್ಬದ ಆಚರಣೆಗಳ ನಂತರ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಹಳ ಪ್ರಮಾಣದಲ್ಲಿ ಕಸ ಹಾಗೂ ಹಬ್ಬದ ಅವಶೇಷಗಳು ಬಿದ್ದಿರುವುದು ಗಮನಕ್ಕೆ ಬಂದಿದೆ. ಬೆಂಗಳೂರಿನ ಮಹಾಜನತೆಗೆ ಶುದ್ಧ ಮತ್ತು ಆರೋಗ್ಯಕರ ಪರಿಸರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ನಗರದಲ್ಲಿನ ಕಸವನ್ನು ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''












Click it and Unblock the Notifications