Greater Bengaluru: ಬೆಂಗಳೂರು ಉಪ ನಗರ ಯೋಜನೆಗೆ ಒಪ್ಪಿಗೆ, ಟೌನ್‌ಶಿಪ್‌ ನಿರ್ಮಾಣ

ಬೆಂಗಳೂರು, ಜನವರಿ 30: ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಉಪ ನಗರ ಯೋಜನೆಗೆ ಅನುಮೋದನೆ ನೀಡಿದೆ. ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕಗಳೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್. ಕೆ. ಪಾಟೀಲ ಸಭೆಯಲ್ಲಿ ಕೈಗೊಂಡ ತೀರ್ಮಾನದ ವಿವರಗಳನ್ನು ಕೊಟ್ಟರು. ಆಗ 'ಬೆಂಗಳೂರು ಉಪ ನಗರ ಯೋಜನೆ' ಕುರಿತು ಮಾಹಿತಿ ನೀಡಿದರು.

Karnataka Govt Approved For Greater Bengaluru Integrated Township

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ. ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಭಾಗಶ: ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ 'ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ' ಯೋಜನೆಯನ್ನು ಅನುಷ್ಟಾನಗೊಳಿಸಲು ಸಚಿವ ಸಂಪುಟ ಅನುಮೋದಿಸಿದೆ ಎಂದರು.

ಸರ್ಕಾರದ ಅಧಿಸೂಚನೆ ದಿನಾಂಕ 18.10.2006ರಲ್ಲಿ ಬಿಡದಿ, ಸಾತನೂರು, ರಾಮನಗರ, ಸೋಲೂರು ಮತ್ತು ನಂದಗುಡಿಯಲ್ಲಿ 5 ಸಮಗ್ರ ಉಪನಗರಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿತ್ತು. ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್‌ನಲ್ಲಿ ಟೌನ್‌ಶಿಪ್‌ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳುವುದಾಗಿ ಘೋಷಣೆ ಮಾಡಲಾಗಿತ್ತು ಎಂದು ಹೇಳಿದರು.

ಬಜೆಟ್ ಘೋಷಣೆ ವಿವರಗಳು

* ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡಲು, ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತದೆ ಸುಸ್ಥಿರ ಮೂಲ ಸೌಕರ್ಯದೊಂದಿಗೆ ರಾಜ್ಯದಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದು. ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳಾಗಿ ಅಭಿವೃದ್ಧಿಪಡಿಸುವುದು.

* ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರಡಿಯಲ್ಲಿ ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸಿ ಅಧಿಸೂಚಿಸಲಾಗಿದೆ.

* ಸರ್ಕಾರದ ಆದೇಶ ದಿನಾಂಕ 02.09.2024ರಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿನ ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ, ಬನ್ನಿಗೆರೆ, ಹೊಸೂರು, ಕೆ.ಜಿ.ಗೋಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ, ಕಾವಲು, ಮಂಡಲಹಳ್ಳಿ, ಹಾಗೂ ಹಾರೋಹಳ್ಳಿ ತಾಲ್ಲೂಕು, ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ ಒಟ್ಟು 101ಎಕರೆ 12ಗುಂಟೆ ಮತ್ತು ಸುಮಾರು ಒಟ್ಟು 8943 ಎಕರೆ 35ಗುಂಟೆ ಪ್ರದೇಶದಲ್ಲಿ ಈಗಾಗಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಂದ ಖಾತೆ ತೆರೆದಿರುವ ನಿವೇಶನಗಳನ್ನು ಒಳಗೊಂಡಂತೆ, ಹ್ಯಾಮ್‌ಲೆಟ್, ಸೆಂಟಲ್ಮೆಂಟ್, ಶಾಲೆ/ ಕಾಲೇಜು, ಕೆರೆ, ಸ್ಮಶಾನ ಮತ್ತಿತರೆ ಸಾರ್ವಜನಿಕ ಉದ್ದೇಶಿತ ಜಾಗಗಳನ್ನು ಯಥಾವತ್ತಾಗಿ ಕಾಯ್ದಿರಿಸಿ, ಉಳಿದ ಪ್ರದೇಶಕ್ಕೆ ಪ್ರಸ್ತುತ ಪ್ರಥಮ ಹಂತದಲ್ಲಿ ಬಿಡದಿ ಸಮಗ್ರ ಉಪನಗರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ಪ್ರಕ್ರಿಯೆಗಳನ್ನು ಕೈಗೊಳ್ಳುವ ಪ್ರಸ್ತಾವನೆಗೆ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.

* BMR ಪ್ರದೇಶದಲ್ಲಿನ ಎಲ್ಲಾ ಟೌನ್‌ಶಿಪ್ ಅಭಿವೃದ್ಧಿ ಚಟುವಟಿಕೆಗಳನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾರ್ಯಗತಗೊಳಿಸುತ್ತದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಒಟ್ಟು 10 ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಅಭಿವೃದ್ಧಿ ಯೋಜನೆಯನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ, 1987ರ ಸೆಕ್ಷನ್ 15(1)(b) ಅಡಿಯಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

* ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಯೋಜನೆಗಾಗಿ ಮೇಲಿನ 10 ಗ್ರಾಮಗಳಲ್ಲಿನ ಸುಮಾರು 8943 ಎಕರೆ ಪ್ರದೇಶದ ಪೈಕಿ 8032- 37 ಎಕರೆ-ಗುಂಟೆ ಪ್ರದೇಶವನ್ನು ಗ್ರೇಟ‌ರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೂಸ್ವಾಧೀನ ಪ್ರಕ್ರಿಯೆಗಳನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ-1987ರ ಕಲಂ.35 & 36 ರ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ಸ್ವಾಧೀನಪಡಿಸಿಕೊಂಡ ಭೂಮಿಗೆ ಬದಲಿ ನಿವೇಶನಗಳ ಹಂಚಿಕೆ ಪರಿಹಾರ) ನಿಯಮಗಳು, 2009ರಲ್ಲಿನ ಭೂ ಹಂಚಿಕೆ ಮಾದರಿಯಲ್ಲಿ(35-50% ಅಭಿವೃದ್ಧಿ ಹೊಂದಿದ ಭೂಮಿಯನ್ನು ಪರಿಹಾರವಾಗಿ) ಪರಿಹಾರವನ್ನು ನೀಡುವ ಮುಖೇನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

* 910 ಎಕರೆ 3 ಗುಂಟೆ ಜಾಗವನ್ನು ಈಗಾಗಲೇ ಕೆಇಎಡಿಬಿ ವತಿಯಿಂದ ಭೂಸ್ವಾಧೀನಗೊಳಿಸಿಕೊಂಡಿದ್ದು, ಸದರಿ ಜಾಗವನ್ನು ಹೊರತು ಪಡಿಸಿ ಟೌನ್‌ಶಿಪ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿತ್ತು. ಸಮಗ್ರ ಉಪನಗರ ಯೋಜನೆಗಳ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ, ಇಲಾಖೆ ಮತ್ತು ಸಂಸ್ಥೆಗಳನ್ನೊಳಗೊಂಡಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಅನುಮೋದನೆ ನೀಡಲಾಗಿದೆ.

* ಜಾಗತಿಕ ಟೆಂಡರ್ ಕರೆಯುವ ಮೂಲಕ ಅಂತರರಾಷ್ಟ್ರೀಯ ಮಾನದಂಡಗಳ ಪ್ರಕಾರ Work-Live-Play ಪರಿಕಲ್ಪನೆಯಲ್ಲಿ ಟೌನ್‌ಶಿಪ್‌ ಅನ್ನು ವಿನ್ಯಾಸಗೊಳಿಸಲು ಮತ್ತು ಯೋಜಿಸಲು ಅರ್ಹ ಸಂಸ್ಥೆಯನ್ನು ನೇಮಿಸಲು ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+