ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಪ್ರಕರಣ ಏರಿಕೆ; ರಾಜ್ಯದಲ್ಲಿ ರಾತ್ರಿ ಪಾರ್ಟಿ ಮೇಲೆ ನಿಷೇಧ

|
Google Oneindia Kannada News

ಬೆಂಗಳೂರು, ಮಾರ್ಚ್ 11: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಗುರುವಾರ(ಮಾರ್ಚ್ 11) ದಿಂದ ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್‌, ರೆಸ್ಟೊರೆಂಟ್‌ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಭಯದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರದ ನಿರ್ಬಂಧ!ಕೊರೊನಾ ಭಯದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರದ ನಿರ್ಬಂಧ!

ಈ ಪಾರ್ಟಿಗಳು ಕೊರೊನಾ ಸೋಂಕಿನ ಸೂಪರ್‌ ಸ್ಪ್ರೆಡರ್‌ಗಳಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

Karnataka Govt Bans All Late Night Parties As Covid19 Cases Rise

ಮದುವೆ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವ ಎಲ್ಲಾ ಕಾರ್ಯಕ್ರಮಗಳ ಮೇಲೂ ನಿಗಾ ಇಟ್ಟಿರುವುದಾಗಿ ತಿಳಿಸಿದ್ದಾರೆ. ನೆರೆ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುವುದರಿಂದ ರಾಜ್ಯಾದ್ಯಂತ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬುಧವಾರ 760 ಹೊಸ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿಯೇ 488 ಪ್ರಕರಣಗಳು ಪತ್ತೆಯಾಗಿವೆ. 331 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

Recommended Video

Ramesh Jarkiholi ಏನು ಅಂಥ ನನಿಗೆ ಚೆನ್ನಾಗೇ ಗೊತ್ತು?? | D K Shivakumar | Oneindia Kannada

ಈಚೆಗೆ ದುಬೈನಿಂದ ಶಿವಮೊಗ್ಗಕ್ಕೆ ಮರಳಿದ್ದ ವ್ಯಕ್ತಿಯೊಬ್ಬರಲ್ಲಿಯೂ ದಕ್ಷಿಣ ಆಫ್ರಿಕಾ ಕೊರೊನಾ ರೂಪಾಂತರ ಸೋಂಕು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿರುವುದಾಗಿ ತಿಳಿದುಬಂದಿದೆ.

English summary
Karnataka government has banned all late-night parties from March 11, 2021 due to surge in covid 19 cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X