ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2 ಲಕ್ಷ Rapid ಟೆಸ್ಟ್ ಕಿಟ್ ಖರೀದಿ, ತಬ್ಲಿಘಿ ಜನರ ಟ್ರೇಸಿಂಗ್ ಪೂರ್ಣ: ಡಿಸಿಎಂ

|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಕೋವಿಡ್ ಪತ್ತೆಗಾಗಿ ಹೆಚ್ಚುವರಿಯಾಗಿ ಎರಡು ಲಕ್ಷ rapid ಟೆಸ್ಟ್ ಕಿಟ್‌ಗಳನ್ನು ಖರೀದಿಸಲು ಗುರುವಾರ ನಡೆದ ಕೋವಿಡ್ ಕುರಿತ ಕಾರ್ಯಪಡೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇನ್ನು ರಾಜ್ಯ ಹಾಗು ದೇಶದಲ್ಲಿ ಆತಂಕ ಸೃಷ್ಟಿಸಿದ್ದ ದೆಹಲಿಯ ತಬ್ಲಿಘಿ ಜಮಾತ್ ಮತ್ತು ನಂಜನಗೂಡಿನ ಜೂಬಿಲಿಯಂಟ್ ಕಾರ್ಖಾನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಟ್ರೇಸಿಂಗ್ ಪೂರ್ಣವಾಗಿದ್ದು, ಪಾಸಿಟಿವ್ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕ್ವಾರಂಟೈನ್‍ನಲ್ಲಿ ಇರುವವರ ಮೇಲೆ ನಿಗಾ ಇಡಲಾಗಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಮುಂದೆ ಓದಿ...

Rapid ಟೆಸ್ಟ್ ಕಿಟ್‌ಗೆ ಒಪ್ಪಿಗೆ

Rapid ಟೆಸ್ಟ್ ಕಿಟ್‌ಗೆ ಒಪ್ಪಿಗೆ

ಕೋವಿಡ್ ಪತ್ತೆಗಾಗಿ ಹೆಚ್ಚುವರಿಯಾಗಿ ಎರಡು ಲಕ್ಷ rapid ಟೆಸ್ಟ್ ಕಿಟ್‌ಗಳನ್ನು ಖರೀದಿಸಲು ತೀರ್ಮಾನಿಸಲಾಗಿದ್ದು, ಚೀನಾ ಸರ್ಕಾರ ಪಟ್ಟಿ ಮಾಡಿರುವ ಅಧಿಕೃತ ಸಂಸ್ಥೆಗೇ rapid ಟೆಸ್ಟ್ ಕಿಟ್‌ಗಳನ್ನು ಸರಬರಾಜು ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಅವು ಬಂದ ನಂತರ ಟೆಸ್ಟ್ ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು' ಎಂದು ಡಿಸಿಎಂ ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರ ನಮ್ಮನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ದೂರಿದ ಡಿಕೆಶಿಸರ್ಕಾರ ನಮ್ಮನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ದೂರಿದ ಡಿಕೆಶಿ

ತಾಲ್ಲೂಕಿಗೆ ಒಂದರಂತೆ ಕಿಯೋಸ್ಕ್

ತಾಲ್ಲೂಕಿಗೆ ಒಂದರಂತೆ ಕಿಯೋಸ್ಕ್

'ಕೋವಿಡ್ ರೋಗ ಲಕ್ಷಣಗಳು ಇರುವ ವ್ಯಕ್ತಿಯ ಕಫಾ ಮಾದರಿಗಳನ್ನು ಸಂಗ್ರಹಿಸಲು ರಾಜ್ಯದಲ್ಲಿ 250 ಕಿಯೋಸ್ಕ್ ಗಳನ್ನು ಸ್ಥಾಪಿಸಲಾಗುವುದು. ಇಂತಹ ಕಿಯೋಸ್ಕ್ ಗಳು ತಾಲ್ಲೂಕಿಗೆ ಒಂದರಂತೆ ಆರಂಭಿಸಲಾಗುವುದು. ಈ ಮೂಲಕ ಮಾದರಿ ಸಂಗ್ರಹ ಪ್ರಕ್ರಿಯೆಯನ್ನು ಮತ್ತಷ್ಟು ಹೆಚ್ಚಿಸಿ, ರೋಗ ಹರಡುವುದನ್ನು ತಡೆಯಲಾಗುವುದು' ಎಂದು ಅವರು ವಿವರಿಸಿದರು.

ರಂಜಾನ್ಗೆ ಸಾಮೂಹಿಕ ಪ್ರಾರ್ಥನೆ ಇಲ್ಲ

ರಂಜಾನ್ಗೆ ಸಾಮೂಹಿಕ ಪ್ರಾರ್ಥನೆ ಇಲ್ಲ

'ರಂಜಾನ್ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಿರಲು ಹಾಗೂ ಮನೆಗಳಲ್ಲಿಯೇ ಪ್ರಾರ್ಥನೆ ಮಾಡಿಕೊಳ್ಳುವಂತೆ ಸೂಚಿಸಲು ತೀರ್ಮಾನಿಸಲಾಗಿದೆ. ವೈಯಕ್ತಿಕ ಅಂತರವನ್ನು ಕಾಪಾಡಿಕೊಳ್ಳುವುದನ್ನು ಕಡ್ಡಾಯ ಮಾಡಿದ್ದು, ಇದನ್ನು ಸ್ಥಳೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗುರುಗಳ ಮೂಲಕವೂ ಜನರಲ್ಲಿ ಜಾಗೃತಿ ಮೂಡಿಸಲು ಸಲಹೆ ನೀಡಲಾಗಿದೆ' ಎಂದು ಅವರು ತಿಳಿಸಿದರು.

ಕೊರೊನಾ ವೈರಸ್ ನಿಂದ ಭಾರತೀಯರನ್ನು ರಕ್ಷಿಸಲು ಚೀನಾ ಅಸ್ತ್ರಕೊರೊನಾ ವೈರಸ್ ನಿಂದ ಭಾರತೀಯರನ್ನು ರಕ್ಷಿಸಲು ಚೀನಾ ಅಸ್ತ್ರ

ಪಿಪಿಇ ಕಿಟ್ ರಾಜ್ಯದಲ್ಲಿದೆ

ಪಿಪಿಇ ಕಿಟ್ ರಾಜ್ಯದಲ್ಲಿದೆ

'ವೈದ್ಯರ ರಕ್ಷಣಾ ಕವಚಗಳು (ಪಿಪಿಇ) ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇವೆ. ಅಗತ್ಯ ಇರುವ 25 ಸಾವಿರ ಆರ್‍ಟಿಪಿಸಿಆರ್ ಕಿಟ್‌ಗಳ ಖರೀದಿಗೂ ಒಪ್ಪಿಗೆ ನೀಡಲಾಯಿತು. ಜಿಲ್ಲಾ ಆಸ್ಪತ್ರೆ ಗಳಲ್ಲಿ ಕನಿಷ್ಠ 50 ರಿಂದ 100 ಹಾಸಿಗೆಗಳಿಗೆ ಕೇಂದ್ರಿಕೃತ ಆಮ್ಲ ಜನಕ ಸರಬರಾಜು ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಯಿತು ಎಂದರು.

ಡಾ.ಸುದರ್ಶನ ವರದಿ ಅಂಗೀಕಾರ

ಡಾ.ಸುದರ್ಶನ ವರದಿ ಅಂಗೀಕಾರ

ರಕ್ತ/ಕಫಾ ಮಾದರಿಗಳ ಸಂಗ್ರಹಕ್ಕೆ ಸಂಬಂಧಿಸಿದಂತೆ ಡಾ.ಸುದರ್ಶನ ನೇತೃತ್ವದ ತಂಡ ಕೊಟ್ಟಿರುವ ವರದಿಯನ್ನು ಅಂಗೀಕರಿಸಲಾಯಿತು. ಕೋವಿಡ್ ರೋಗಿಗಳಿಗೆ ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡಬೇಕು. ಕೆ.ಸಿ.ಜನರಲ್ ಸೇರಿದಂತೆ ಬೇರೆ ಮಾಮೂಲಿ ರೋಗಿಗಳು ಹೋಗುವ ಕಡೆಗೆ ಚಿಕಿತ್ಸೆ ನೀಡಬಾರದು ಎನ್ನುವ ತೀರ್ಮಾನವನ್ನೂ ಸಭೆಯಲ್ಲಿ ಮಾಡಲಾಯಿತು. ಕೋವಿಡ್ ಸಲುವಾಗಿಯೆ ಪ್ರತ್ಯೇಕ ಸಹಾಯವಾಣಿ ತೆರೆಯಲಾಗುವುದು. ಕನಿಷ್ಟ 300 ಜನರು, 50 ಸಾವಿರ ಕರೆ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

English summary
Karnataka govt has decide to buy 2 lakh Rapid Test Kits from china said deputy chief minister dr ashwath narayana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X