ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಕುಮಾರ ಸ್ವಾಮಿಗಳ ಲಿಂಗೈಕ್ಯ ದಿನವನ್ನು 'ದಾಸೋಹ ದಿನ' ಆಚರಿಸಲು ಆದೇಶ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 4: ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ದಿನವನ್ನು‌ ದಾಸೋಹ ದಿನವೆಂದು (ಜನವರಿ 21) ಘೋಷಣೆ ಮಾಡಿ ಕರ್ನಾಟಕ ಸರ್ಕಾರ‌ ಆದೇಶ ಹೊರಡಿಸಿದೆ.

ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂಬ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ-ಧರ್ಮ ಭೇದವಿಲ್ಲದೆ ವಿದ್ಯೆ, ವಸತಿ ಹಾಗೂ ಅನ್ನ ದಾಸೋಹ ನೀಡಿ ತ್ರಿವಿದ ದಾಸೋಹಿಗಳಾಗಿದ್ದರು.

1960ರ ದಶಕದಲ್ಲಿ ಭಾರತ ದೇಶವೇ ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದರು.

Karnataka Govt Declared Sri Shivakumara Swami Death Anniversary (Jan 21) As Dasoha Day

ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶಿವಕುಮಾರ ಶ್ರೀಗಳು ಒಂಬತ್ತು ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರೆ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಠರಾಗಿದ್ದರು.

ಶಿವಕುಮಾರ ಮಹಾಸ್ವಾಮಿಗಳ ಈ ಕೈಂಕರ್ಯ ಪರಿಗಣನೆಯಲ್ಲಿ 2007ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ.

ಶಿವಕುಮಾರ ಮಹಾಸ್ವಾಮಿಗಳ ಸಮಾಜ ಸೇವಾ ಕಾರ್ಯ ಕ್ಷೇತ್ರಗಳಾದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದು, ಇವರು ನಿತ್ಯಪೂಜ್ಯರು ಹಾಗೂ ಕಾಲಕಾಲಕ್ಕೂ ಅನುಸರಣೀಯವಾಗಿದ್ದು, ಇವರ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ, ಶ್ರೀಗಳು ಲಿಂಗೈಕ್ಯರಾದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ ದಾಸೋಗ ದಿನವೆಂದು ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.

Karnataka Govt Declared Sri Shivakumara Swami Death Anniversary (Jan 21) As Dasoha Day

ಈ ಬಗ್ಗೆ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಪ್ರತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದುಕೊಂಡು, ಸದರಿ ದಿನದಂದು ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಎಂ. ರಾಜು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Recommended Video

ಖಾಸಗಿ ಉದ್ಯೋಗಿಗಳ PF ಖಾತೆ ಮೇಲೆ ಕೇಂದ್ರದ ಕಣ್ಣು | Oneindia Kannada

English summary
Karnataka Govt announced that the State would observe Dasoha Day on Jan 21 every year on the death anniversary of Siddaganga Mutt seer late Shivakumara Swami.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X