ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಟೆಸ್ಟ್‌ ಸ್ಥಗಿತ, ಸರ್ಕಾರದ ವೈಫಲ್ಯಕ್ಕೆ ಕನ್ನಡಿ: ಸಲೀಂ ಅಹ್ಮದ್

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್‌ 20: ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಟೆಸ್ಟ್‌ಗಳನ್ನು ಹೆಚ್ಚು ಮಾಡಿದಲ್ಲಿ ಹೆಚ್ಚು ಜನರಿಗೆ ಕೋವಿಡ್‌ ಇರುವುದು ಗೊತ್ತಾಗುತ್ತದೆ. ಇದರಿಂದ ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎನ್ನುವ ದುರುದ್ದೇಶದಿಂದ ಟೆಸ್ಟ್‌ಗಳನ್ನು ಸರಿಯಾಗಿ ಮಾಡಲಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಆರೋಪಿಸಿದ್ದಾರೆ.

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜಲಗಂಗಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ಆರೋಗ್ಯ ಹಸ್ತ ಹಾಗೂ ಅರೋಗ್ಯ ಹಸ್ತ ಸ್ವಯಂ ಸೇವಕರುಗಳಿಗೆ ಕೋವಿಡ್‌ - 19 ತಪಾಸಣೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್: ಅಘಾತಕಾರಿ ಮಾಹಿತಿ ಹಂಚಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ!ಕೋವಿಡ್: ಅಘಾತಕಾರಿ ಮಾಹಿತಿ ಹಂಚಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ!

ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸಲು ಕೆಪಿಸಿಸಿ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಹಸ್ತ ವಿನೂತನ ಕಾರ್ಯಕ್ರಮ ಅಧಿಕಾರ ಇಲ್ಲದೇ ಇದ್ದರೂ ಕೂಡಾ ನಾವು ಜನರ ಮನೆ ಮನೆಗೆ ಹೋಗಿ ಟೆಸ್ಟ್‌ ಮಾಡುತ್ತಿದ್ದೇವೆ.

 ಜನರ ಕಷ್ಟಗಳಿಗೆ ಸ್ಪಂದಿಸುವ ಕಾಂಗ್ರೆಸ್

ಜನರ ಕಷ್ಟಗಳಿಗೆ ಸ್ಪಂದಿಸುವ ಕಾಂಗ್ರೆಸ್

ನಿರಂತರವಾಗಿ ಜನರ ಪರವಾಗಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಈ ಸರಕಾರಕ್ಕೆ ಸಂಪೂರ್ಣ ಬೆಂಬಲ ಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳನ್ನು ಗಣನೆಗೆ ತಗೆದುಕೊಳ್ಳದೆ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಕರೋನಾ ನಿರ್ವಹಣೆಯಲ್ಲಿ ವಿಫಲವಾಗಿದೆ. ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸುವಲ್ಲಿ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ಬಿ.ಕೆ ಹರಿಪ್ರಸಾದ್‌ ಮಾತನಾಡಿ

ಬಿ.ಕೆ ಹರಿಪ್ರಸಾದ್‌ ಮಾತನಾಡಿ

ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ ಮಾತನಾಡಿ, ಅಮೇರಿಕಾ ದೇಶದಲ್ಲಿ 10 ಲಕ್ಷ ಜನರಲ್ಲಿ 1.15 ಲಕ್ಷ ಜನರಿಗೆ ಟೆಸ್ಟ್‌ ಮಾಡಲಾಗುತ್ತಿದ್ದರೆ, ಭಾರತದಲ್ಲಿ ಕೇವಲ 11 ಸಾವಿರ ಜನರಿಗೆ ಟೆಸ್ಟ್‌ ಮಾಡಲಾಗುತ್ತಿದೆ. ಬಡ ಜನರಿಗೆ ಟೆಸ್ಟ್‌ ದೊರಕದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಎಲ್ಲಾ ಸುರಕ್ಷತೆಗಳನ್ನು ತಗೆದುಕೊಂಡು ಜನರ ಟೆಸ್ಟ್‌ ಮಾಡಿ ಎಂದು ಸ್ವಯಂ ಸೇವಕರುಗಳಿಗೆ ಸಲಹೆ ನೀಡಿದರು.

ಕೆಂಗಲ್‌ ಶ್ರೀಪಾದ ರೇಣು ಅವರು ಮಾತನಾಡಿ

ಕೆಂಗಲ್‌ ಶ್ರೀಪಾದ ರೇಣು ಅವರು ಮಾತನಾಡಿ

ಮಲ್ಲೇಶ್ವರಂ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಂಗಲ್‌ ಶ್ರೀಪಾದ ರೇಣು ಅವರು ಮಾತನಾಡಿ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 60 ಜನ ಸ್ವಯಂ ಸೇವಕರುಗಳು ಮನೆ ಮನೆಗೆ ತೆರಳಿ ಕೋವಿಡ್‌ - 19 ತಪಾಸಣೆಯನ್ನು ನಡೆಸಲಿದ್ದಾರೆ. ಇಂದು ಅವರಿಗೆ ಅಗತ್ಯ ತರಬೇತಿಯನ್ನು ವೈದ್ಯರು ನೀಡಲಿದ್ದಾರೆ. ಈ ತರಬೇತಿಯ ನಂತರ ಅಗತ್ಯವಿರುವ ಎಲ್ಲಾ ಜನರಿಗೂ ಸೇವೆಯನ್ನು ತಲುಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು. ಇದೇ ವೇಳೆ ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ 2 ಲಕ್ಷ ರೂಪಾಯಿಗಳ ದೇಣಿಗೆಯನ್ನೂ ನೀಡಿದರು.

ಕೊರೊನಾ ಟೆಸ್ಟ್‌ ಸ್ಥಗಿತ, ಸರ್ಕಾರದ ವೈಫಲ್ಯಕ್ಕೆ ಕನ್ನಡಿ

ಕೊರೊನಾ ಟೆಸ್ಟ್‌ ಸ್ಥಗಿತ, ಸರ್ಕಾರದ ವೈಫಲ್ಯಕ್ಕೆ ಕನ್ನಡಿ

ಮಲ್ಲೇಶ್ವರ ವಿಧಾನ ಸಭಾ ಕ್ಷೇತ್ರದ ಜಲ ಗಂಗಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ *ಆರೋಗ್ಯ ಹಸ್ತ* ಹಾಗೂ ಆರೋಗ್ಯ ಹಸ್ತ ಸ್ವಯಂಸೇವಕರಿಗೆ ಕೋವಿಡ್-19 ತಪಾಸಣೆ ತರಬೇತಿ ಕಾರ್ಯಕ್ರಮವನ್ನು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ.ಹರಿಪ್ರಸಾದ್‌ ಹಾಗೂ 2018ರ ವಿಧಾನ ಸಭಾ ಅಭ್ಯರ್ಥಿಯಾದ ಕೆಂಗಲ್ ಶ್ರೀಪಾದ ರೇಣು ಅವರು ಉದ್ಘಾಟಿಸಿದರು. ಇದೇ ವೇಳೆ ಕೆಂಗಲ್ ಶ್ರೀಪಾದ ರೇಣು ಅವರು ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ 2 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದರು.

English summary
Karnataka govt failed to curb Coronavirus pandemic menace and provide good medical facility to people said KPCC working president Saleem Ahmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X