ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೋನಾ ವಾರಿಯರ್ಸ್‌ಗಳಿಗೆ ಪರಿಹಾರ ನೀಡದ ಸರ್ಕಾರ: ಎಎಪಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 19: ಸರ್ಕಾರ ಅಳೆದು ತೂಗಿ ಸರ್ಕಾರಿ ನೌಕರರನ್ನೂ ಕೊರೋನಾ ವಾರಿಯರ್ಸ್‌ಗಳೆಂದು ಘೋಷಿಸಿತು ಆದರೆ ಪ್ರಾಣಪಣಕ್ಕಿಟ್ಟು ಕೆಲಸ ಮಾಡಿದ ಇವರುಗಳಿಗೆ ಕನಿಷ್ಟ ಗೌರವ, ನ್ಯಾಯಯುತ ಪರಿಹಾರ ನೀಡದೆ ರಾಜ್ಯ ಬಿಜೆಪಿ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ, ಇದೊಂದು ಅಸಮರ್ಥ, ನಾಲಾಯಕ್ ಸರ್ಕಾರ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಕಿಡಿಕಾರಿದ್ದಾರೆ.

ಕೊರೋನಾ ವಾರಿಯರ್ಸ್‌ಗಳಾಗಿ ದುಡಿದು ಮಡಿದವರಿಗೆ ಈ ಕೂಡಲೇ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಉಷಾ ಮೋಹನ್ ಆಗ್ರಹಿಸಿದರು.

ಕೊರೋನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಕೊರೋನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವೇ ಘೋಷಿಸಿದ್ದ 30 ಲಕ್ಷ ರೂಪಾಯಿ ಪರಿಹಾರವನ್ನು ಬಿಬಿಎಂಪಿಯ 17 ಸಿಬ್ಬಂದಿಗಳ ಕುಟುಂಬದವರಿಗೆ ಇನ್ನೂ ತಲುಪಿಸದಿರುವುದು ಅಮಾನವೀಯ ವರ್ತನೆ. ಅಲ್ಲದೇ, ಕೊರೋನಾ ಸಂದರ್ಭದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದಿಂದ ತನ್ನ ಜೇಬು ತುಂಬಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡಿ, ತಾವೇ ಘೋಷಿಸಿದ ಪರಿಹಾರ ನೀಡಲು ಹಣವಿಲ್ಲದಷ್ಟು ಈ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದಾರೆ ಎಂದು ಆರೋಪಿಸಿದರು.

Karnataka Govt failed to provide privileges to Corona Warriors: AAP

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೊರೋನಾ ಯೋಧರು ಮೃತಪಟ್ಟ ಮರುಕ್ಷಣವೇ 1 ಕೋಟಿ ರೂಪಾಯಿ ಪರಿಹಾರ ನೀಡುತ್ತಿದ್ದಾರೆ. ಕಳೆದ ಗುರುವಾರ ಮೃತಪಟ್ಟ ಇಬ್ಬರು ಕೊರೋನಾ ಯೋಧರ ಕುಟುಂಬಗಳನ್ನು ಖುದ್ದಾಗಿ ಭೇಟಿ ನೀಡಿ ಚೆಕ್ ಹಸ್ತಾಂತರಿಸಿದ್ದಾರೆ. ಕೇವಲ 60 ಸಾವಿರ ಕೋಟಿ ಬಜೆಟ್ ಹೊಂದಿರುವ ರಾಜ್ಯ ಇಷ್ಟು ಪ್ರಮಾಣದಲ್ಲಿ ಪರಿಹಾರ ನೀಡುವುದಾದರೆ, ಲಕ್ಷ ಕೋಟಿ ಲೆಕ್ಕದಲ್ಲಿ ಬಜೆಟ್ ಮಾಡುವ ನಿಮಗೆ ಪರಿಹಾರ ನೀಡಲು ಯಾವ ಅಡೆ ತಡೆ ಇದೆ ಎಂದು ಪ್ರಶ್ನಿಸಿದರು.

Recommended Video

ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮದ ಹೊಸ ಶಕೆ-ನಮಾಮಿ ಬ್ರಹ್ಮಪುತ್ರ ಉತ್ಸವದಲ್ಲಿ ಮೋದಿ ಭಾಗಿ | Oneindia Kannada

ಈ ಕೂಡಲೇ ಬಿಬಿಎಂಪಿ ಹಾಗೂ ಇತರೇ ಇಲಾಖೆಗಳಲ್ಲಿ ಕೊರೋನಾ ಯೋಧರಾಗಿ ದುಡಿದು ಮೃತಪಟ್ಟ ಸಿಬ್ಬಂದಿಗಳ ಕುಟುಂಬದವರಿಗೆ ಈ ಕೂಡಲೇ 30 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದ ಪಕ್ಷದಲ್ಲಿ ಎಲ್ಲಾ ಕುಟುಂಬದ ಸದಸ್ಯರನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬಿಬಿಎಂಪಿ ನೌಕರರ ಜತೆ ಆಮ್ ಆದ್ಮಿ ಪಕ್ಷ ಯಾವಾಗಲೂ ಇರುತ್ತದೆ ಎಂದರು.

English summary
Karnataka Govt fail to provide privileges and incentives to Corona Warriors allged AAP Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X