Industry: ಎಸ್‌ಸಿ, ಎಸ್‌ಟಿ ಉದ್ಯಮಿದಾರರ ಪರ ಸರ್ಕಾರ ಕೈಗೊಂಡ ನಿರ್ಣಯಗಳು, ಸಿಹಿ ಸುದ್ದಿ
ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಉದ್ಯಮಿದಾರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ, ಹಾಲಿ ಗೊಂದಲಗಳನ್ನು ಪರಿಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕರ್ನಾಟಕ ದಲಿತ ಉದ್ದಿಮೆದಾರರ ಸಂಘಕ್ಕೆ ತ್ವರಿತ ಸ್ಪಂದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೈಗೊಂಡ ಸಭೆಯಲ್ಲಿ ಕೆಲವು ನಿರ್ಣಯ ಘೋಷಿಸಲಾಗಿದೆ. ಅವುಗಳ ವಿವರ ಇಲ್ಲಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮದಾರರ ಗೊಂದಲಗಳ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರವು ಸಭೆಯಲ್ಲಿ ಕೈಗೊಂಡ ಪ್ರಮುಖ ಅಂಶಗಳನ್ನು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಸಾಮಾಜಿಕ ಜಾತಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಮುಖ ಅಂಶಗಳು ಹೀಗಿವೆ.

ಸಭೆಯ ಪ್ರಮುಖಾಂಶಗಳ ಪಟ್ಟಿ
* ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸುವುದು ಉತ್ತಮ.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೂ 192 ಎಕರೆ ಮಂಜೂರು ಆಗಿದೆ. ಇನ್ನೂ 280 ಎಕರೆ ಪ್ರದೇಶದ ಅವಶ್ಯಕತೆ ಇದ್ದು, ಮನೆಗಳನ್ನು ಅಧಿಕಾರಿಗಳು ಪರಿಶೀಲಿಸಬೇಕೆಂದು ಹೇಳಿದರು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಅದನ್ನು ಪರಿಶೀಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಕೈಗಾರಿಕಾ ಪ್ರದೇಶದಲ್ಲಿ ವಿವಾದಗಳಿರುವ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಸಮಸ್ಯೆ ಕುರಿತು ಮಾತುಗಳು ಕೇಳೀ ಬಂದಿವೆ. ಕೈಗಾರಿಕೆ ಪ್ರದೇಶದಲ್ಲಿ ಸೂಕ್ತ ಪ್ರದೇಶಗಳನ್ನು ಹಂಚಬೇಕೆಂದು ಸಭೆಯಲ್ಲಿ ಸಿಎಂ ನಿರ್ದೇಶಿಸಿದರು.
* ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಉದ್ದಿಮೆದಾರರಿಗೆ ಬರಬೇಕಾಗಿರುವ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಇ-ಖಾತಾ ಹಂಚಿಕೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದರು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ಅಗತ್ಯವಾಗಿದ್ದು, ಅದಕ್ಕೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರು.












Click it and Unblock the Notifications