'ಮನೆ ಬಾಗಿಲಿಗೆ ಬಂತು ಸರ್ಕಾರ-ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮಕ್ಕೆ ಡಿಕೆಶಿ ಚಾಲನೆ: ಇದರ ಉದ್ದೇಶ, ಉಪಯೋಗ ತಿಳಿಯಿರಿ

ಬೆಂಗಳೂರು, ಜನವರಿ 03: ಕರ್ನಾಟಕ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಸುಮ್ಮನೆ ಕುಳಿತಿಲ್ಲ. ಬದಲಾಗಿ ಜನರ ಮನೆಗೆ ಬಾಗಿಲಿಗೆ ತೆರಳುತ್ತಿದೆ. ಜನರನ್ನು ಸರ್ಕಾರವೇ ನೇರವಾಗಿ 'ಬಾಗಿಲಿಗೆ ಬಂತು ಸರ್ಕಾರ- ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಡಿ ಸಂಪರ್ಕಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಬುಧವಾರ ಚಾಲನೆ ನೀಡಿತು.

ಬೆಂಗಳೂರಿನ ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಜನವರಿ 3ರಂದು ಜರುಗಿದ ಸರ್ಕಾರ ಮಹತ್ವದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಈ ಕಾರ್ಯಕ್ರಮದ ಉದ್ದೇಶವೇನು, ಡಿಸಿಎಂ ವಿವರಿಸಿದ್ದೇನು ಎಂಬ ಮಾಹಿತಿ ಇಲ್ಲಿ ತಿಳಿಯಿರಿ.

Karnataka Govt Introduced Special program: how does it Benefit people? Know details

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಶೀಘ್ರವೇ ತಾಂತ್ರಿಕ ತೊಡಕು ನಿವಾರಣೆ

ಕೆಲವು ತಾಂತ್ರಿಕ ದೋಷಗಳಿಂದ ಯೋಜನೆಯ ಫಲಾನುಭಗಿಳ ಪೈಕಿ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು.

ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕೆಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ ಎಂದರು.

ಸ್ಥಳಿಯ ಸಮಸ್ಯೆಗಳನ್ನು ಹೇಳಿಕೊಳ್ಳಿ

ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದರು. ಈ ಸಂಬಂಧ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದರು.

ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಜಾಗಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಕಸವನ್ನು ಗುಡ್ಡೆ ಹಾಕಿಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

Karnataka Govt Introduced Special program: how does it Benefit people? Know details

ರಾಜಕಾಲುವೆ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಚಿಂತನೆ

ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ NGT ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ ಎಂದು ತಿಳಿಸಿದರು.

ಮನೆ ಬಾಗಿಲಿಗೆ ಕಂದಾಯ ಇಲಾಖೆ ಸಹಾಯ

ನಗರದಲ್ಲಿ ಇನ್ನೂ ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ಸರ್ಕಾರಿದಂದ ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ. ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡಲಾಗುತ್ತಿದೆ.

ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಲು ಅವಕಾಶ ಇದೆ. ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಏನೇ ಕುಂದು ಕೊರತೆ, ಅಹವಾಲು ಇದ್ದರು ತಿಳಿಸಿದೆ. ಸಮಸ್ಯೆಗಳಿಗೆ ನಿಮ್ಮ ಮನೆಯಲ್ಲಿ ಪರಿಹಾರ ನೀಡುವ ಉದ್ದೇಶ ಹೊಂದಿದ್ದೇವೆ. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದರು.

ಸದ್ಯ ಮಹಾದೇವಪುರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಕ್ರಮ ಹಂತ ಹಂತವಾಗಿ ಬೆಂಗಳೂರಿನ ಇತರ ಕಡೆಗಳಲ್ಲಿ, ವಲಯ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ನಡೆಯಲಿದೆ. ಗ್ಯಾರೆಂಟಿ ಯೋಜನೆ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಪರಿಹಾರ ಪಡೆಯಬಹದಾಗಿದೆ.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀಮತಿ ಮಂಜುಳಾ ಅರವಿಂದ್ ಲಿಂಬಾವಳಿ, ಬಿ.ಎ ಬಸವರಾಜು, ಮಾಜಿ ರಾಜ್ಯ ಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯಯುಕ್ತರಾದ ತುಷಾರ್ ಗಿರಿ ನಾಥ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+