Get Updates
Get notified of breaking news, exclusive insights, and must-see stories!

ಅತಿಥಿ ಉಪನ್ಯಾಸಕರ ನೇಮಕಾತಿ; ಶೀಘ್ರದಲ್ಲೇ ಸಿಹಿಸುದ್ದಿ ಸುಳಿವು

ಬೆಂಗಳೂರು, ಜನವರಿ 12: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ತಿಳಿಯಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಸಚಿವರ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ಗಂಟೆಗಳ ಸಭೆಯ ನಂತರ ಅಶ್ವತ್ಥ ನಾರಾಯಣ ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ಹಲವು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ಈ ಕುರಿತ ವಿಷಯವನ್ನು ಚರ್ಚಿಸಲಾಗಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ನಂತರ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

karnataka govt is fast responding to the appointment and other demands of guest lecturers

ಸ್ವಾವಲಂಬಿ ಸಂಸ್ಥೆಗಳಾಗಿ ಬೆಳೆಯಬೇಕಾದ ಅಗತ್ಯ
ಎನ್ಇಪಿ ಮಾನದಂಡಗಳಿಗೆ ಅನುಸಾರವಾಗಿ ವಿಶ್ವವಿದ್ಯಾಲಯಗಳಲ್ಲಿ ಆಗಬೇಕಾದ ಸುಧಾರಣೆ ಮತ್ತು ನೇಮಕಾತಿ ವಿಧಿವಿಧಾನ ಕುರಿತು ಸರಕಾರ ರಚಿಸಿರುವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಾಶ್ಚಾತ್ಯ ದೇಶಗಳ ವಿವಿಗಳಲ್ಲಿರುವ ಬೋಧನಾ ವ್ಯವಸ್ಥೆ, ಸಿಬ್ಬಂದಿ ಬಲ, ಕೋರ್ಸ್‌ಗಳ ಸ್ವರೂಪ, ಸರಕಾರ ಕೊಡಬೇಕಾದ ಅನುದಾನದ ಪ್ರಮಾಣ ಎಷ್ಟಿರಬೇಕು ಎನ್ನುವಂತಹ ಮಹತ್ವದ ವಿಚಾರಗಳ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಚರ್ಚಿಸಿದರು.

ಇದೇ ವೇಳೇ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರು ಮತ್ತು ಹಲವು ಕುಲಪತಿಗಳೊಂದಿಗೆ ಸಂವಾದ ನಡೆಸಿದ ಸಚಿವರು, "ವಿಶ್ವವಿದ್ಯಾಲಯಗಳು ಸ್ವಾವಲಂಬಿ ಸಂಸ್ಥೆಗಳಾಗಿ ಬೆಳೆಯಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮಿತಿಯು ನೀಡಿರುವ ಕೆಲವು ಸಲಹೆ ಮತ್ತು ಶಿಫಾರಸುಗಳು ಅರ್ಥಪೂರ್ಣವಾಗಿವೆ. ಈ ನಿಟ್ಟಿನಲ್ಲಿ ಇನ್ನಷ್ಟು ಸ್ಪಷ್ಟತೆ ಬೇಕಾಗಿದ್ದು, ಮುಂದಿನ ಸಭೆಯೊಳಗೆ ಇದಕ್ಕೆ ಅಂತಿಮ ರೂಪುರೇಷೆ ನೀಡಬೇಕು,'' ಎಂದು ಸೂಚಿಸಿದರು.

karnataka govt is fast responding to the appointment and other demands of guest lecturers


ಸಂಶೋಧನಾ ವಿದ್ಯಾರ್ಥಿಗಳ ನೆರವಿನಿಂದ ಭೋದನೆ
"ವಿಶ್ವವಿದ್ಯಾಲಯಗಳಲ್ಲಿ ಸ್ವಾಯತತ್ತೆ ಮತ್ತು ಸ್ವಾವಲಂಬನೆ ಎರಡೂ ಬರಬೇಕು. ಆದ್ದರಿಂದ ಕನಿಷ್ಠ ಮೂರನೇ ಒಂದು ಭಾಗದಷ್ಟು ಆರ್ಥಿಕ ಖರ್ಚು-ವೆಚ್ಚಗಳನ್ನಾದರೂ ಈ ಸಂಸ್ಥೆಗಳು ಉದ್ದಿಮೆಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ತಾವೇ ಭರಿಸುವಂತಾಗಬೇಕು ಎನ್ನುವ ಸಲಹೆಯನ್ನು ಸಚಿವರು ನೀಡಿದರು. ಪಾಶ್ಚಾತ್ಯ ವಿವಿಗಳಲ್ಲಿ ನಮ್ಮಲ್ಲಿರುವಷ್ಟು ಬೋಧನಾ ಸಿಬ್ಬಂದಿಯೇ ಇಲ್ಲ. ನಮ್ಮಲ್ಲಿರುವ ಬೋಧನಾ ಕ್ರಮಕ್ಕೆ ಈಗಿರುವ ಬೋಧಕ ವರ್ಗದಲ್ಲಿ ಮೂರನೇ ಎರಡರಷ್ಟು ಮಂದಿಯೇ ಸಾಕು. ಉಳಿದ ಇನ್ನೊಂದು ಭಾಗದ ಕಾರ್ಯಭಾರವನ್ನು ಸಂಶೋಧನಾ ವಿದ್ಯಾರ್ಥಿಗಳ ನೆರವಿನಿಂದ ಪೂರೈಸಬಹುದು. ಇದರ ಜೊತೆಗೆ ವಾಣಿಜ್ಯ ಮತ್ತು ಕೈಗಾರಿಕಾ ವಲಯದ ವಿಷಯತಜ್ಞರನ್ನು ಸಂದರ್ಶಕ ಮತ್ತು ಗೌರವ ಬೋಧಕರನ್ನಾಗಿ ಪರಿಗಣಿಸಿ, ಅವರ ಸೇವೆಯನ್ನು ಪಡೆಯುವ ವ್ಯವಸ್ಥೆಯನ್ನು ತರುವ ಸಾಧ್ಯತೆಗಳ ಬಗ್ಗೆ ಯೋಚಿಸಬಹುದು," ಎಂದು ಹೇಳಿದರು.

ಸಿಬ್ಬಂದಿಯ ನೇಮಕಾತಿ ವಿಧಾನ ಬದಲಿಸಿಕೊಳ್ಳಬೇಕು
"ಎನ್ಇಪಿ ಪ್ರಕಾರ ವಿಶ್ವವಿದ್ಯಾಲಯಗಳು ಬೋಧನಾ ಸಿಬ್ಬಂದಿಯ ನೇಮಕಾತಿ ವಿಧಾನವನ್ನು ಆಮೂಲಾಗ್ರವಾಗಿ ಬದಲಿಸಿಕೊಳ್ಳಬೇಕಿದೆ. ಇದರ ಜತೆಯಲ್ಲೇ ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಹಾಗೂ ಸಂಶೋಧನೆಯಲ್ಲಿ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಗಮನ ಸೆಳೆದರು. ಈಗಿರುವ ವಿವಿಗಳಲ್ಲಿ ಸರಕಾರದ ಅನುದಾನವು ಪೋಲಾಗುತ್ತಿದೆ. ವಿವಿಗಳನ್ನು ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಪಾಲುದಾರಿಕೆ ಮಾದರಿಯಲ್ಲಿ (ಪಿಪಿಪಿ) ನಿರ್ವಹಣೆ ಮಾಡುವ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು," ಎಂದರು.

karnataka govt is fast responding to the appointment and other demands of guest lecturers

Recommended Video

      South Africa ವಿರುದ್ಧ ಮಿಂಚಿನ ಪ್ರದರ್ಶನ ತೋರಿದ Virat Kohli | Oneindia Kannada

      ಉದ್ದಿಮೆಗಳ ಸಿಎಸ್ಆರ್ ನಿಧಿ ಮತ್ತು ಹಿರಿಯ ವಿದ್ಯಾರ್ಥಿ ಸಂಘಗಳ ಮೂಲಕ ವಿವಿಗಳನ್ನು ಅಭಿವೃದ್ಧಿ ಪಡಿಸಬೇಕು. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಿ, ಮೆರಿಟ್ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

      ಸಭೆಯಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತಕುಮಾರ್, ಶ್ರೀಕೃಷ್ಣದೇವರಾಯ ವಿವಿ ಕುಲಪತಿ ಪ್ರೊ. ಸಿದ್ದು ಆಲೂರು, ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಸೇರಿದಂತೆ ಹಲವರಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+