ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದಷ್ಟು ಸುಳ್ಳು,ಇನ್ನೊಂದಿಷ್ಟು ತಪ್ಪು ಮಾಹಿತಿ,ಇದೇ ರಾಜ್ಯಪಾಲರ ಭಾಷಣ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು,ಜನವರಿ 28: ಒಂದಿಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಇದೇ ರಾಜ್ಯಪಾಲ ವಜುಭಾಯ್ ವಾಲಾರ ಇಂದಿನ ಭಾಷಣವಾಗಿತ್ತು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು‌‌ ಹಿಂದಿನ ಕಾಂಗ್ರೆಸ್ ಸರ್ಕಾರದ‌ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ.

ಸರ್ಕಾರದ ನಿಲುವು. ಯೋಜನೆಗಳು, ಧ್ಯೇಯ ಧೊರಣೆಗಳು, ಮುನ್ನೋಟ ಇರಬೇಕು. ಆದರೆ, ಈ ಭಾಷಣ ನೋಡಿದಾಗ ಯಾವುದೂ ಕಾಣಿಸುವುದಿಲ್ಲ. ಇದೊಂದು ಸುಳ್ಳಿನ ಕಂತೆ ಎಂದರು.

ಈ ವರ್ಷ ನಮ್ಮ ಮೆಟ್ರೋ, ಬಿಎಂಟಿಸಿಗೆ ಒಂದು ದೇಶ ಒಂದು ಕಾರ್ಡ್ ಈ ವರ್ಷ ನಮ್ಮ ಮೆಟ್ರೋ, ಬಿಎಂಟಿಸಿಗೆ ಒಂದು ದೇಶ ಒಂದು ಕಾರ್ಡ್

ರಾಜ್ಯಪಾಲರ ಬಾಯಿಂದ ಸರ್ಕಾರ ಸುಳ್ಳು ಹೇಳಿಸಿದೆ. ನಮ್ಮ ಸರ್ಕಾರದ ಸಾಧನೆ ಗಳನ್ನೆ ಪುನರುಚ್ಚಾರ ಮಾಡಿಸಿದ್ದಾರೆ. ಭಾಷಣಕ್ಕೆ ಗೊತ್ತು ಗುರಿ ಏನು ಇಲ್ಲ. ಒಂದು ದೂರದೃಷ್ಟಿ ಇರಬೇಕು. ಇನ್ನು ಎರಡು ವರ್ಷ ಇದೆ. ಯಾವುದೇ ದೂರದೃಷ್ಟಿ ಇವರ ಭಾಷಣದಲ್ಲಿಲ್ಲ ಎಂದರು.

ರಾಜ್ಯಪಾಲರು ಭಾಷಣದಲ್ಲಿ ಎಲ್ಲಿಯೂ ರಾಜ್ಯದ ಹಣಕಾಸಿನ ಪರಿಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿಲ್ಲ. ರಾಜ್ಯ ಅಭಿವೃದ್ಧಿಯಲ್ಲಿ 10 ವರ್ಷ ಹಿಂದೆ ಹೋಗಿದೆ. ಅನುದಾನ ಹಂಚಿಕೆಗೆ ಹಣ ಕೇಳಿದರೆ ಸರ್ಕಾರ ಕೊರೊನಾ ನೆಪ ಹೇಳುತ್ತಿದೆ. ಕೊರೊನಾ, ನಿರಾವರಿ ಯೋಜನೆಗಳಿಗೆ ಹಣ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದು ಒಂದು ವರ್ಷ ಏಳು ತಿಂಗಳಾಯಿತು.

ಇಷ್ಟು ದಿನದಲ್ಲಿ ಇವರ ಸಾಧನೆ ಏನು ಅಂತ ಹೇಳಲಿಲ್ಲ. ಈ ಸರ್ಕಾರದ ಸಾಧನೆ ಶೂನ್ಯ. ಇದು ಯಾವುದೇ ರಾಜ್ಯದ ಪ್ರಗತಿಯ ದೂರ ದೃಷ್ಟಿಇಲ್ಲದ ಕಳಪೆ ಭಾಷಣ ಎಂದು ಟೀಕಿಸಿದರು.

ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ 5 ವರ್ಷಗಳಲ್ಲಿಯೂ ಬೆಳಗಾವಿ ಅಧಿವೇಶನ ಮಾಡಿದ್ದೆವು. ಬೆಳಗಾವಿಯಲ್ಲಿ ಸರ್ಕಾರ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ದ್ರೋಹ ಮಾಡಿದೆ. ವಿಧಾನಸೌಧದಲ್ಲಿನ ಕೆಲವು ಇಲಾಖೆಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರ ಮಾಡುವಂತೆ ಪ್ರಸ್ತಾಪ ಮಾಡಿದ್ದನ್ನು ಸರ್ಕಾರ ಪಾಲನೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

ರಾಜ್ಯಕ್ಕೆ ಸಿಕ್ಕಿರುವ ಪರಿಹಾರ ಇಷ್ಟು

ರಾಜ್ಯಕ್ಕೆ ಸಿಕ್ಕಿರುವ ಪರಿಹಾರ ಇಷ್ಟು

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ ರೂ.1,634 ಕೋಟಿ ಮಾತ್ರ. ರಾಜ್ಯ ಬಿಜೆಪಿ
ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ.

ಭಾಷಣದಲ್ಲಿ ಸ್ಪಷ್ಟತೆ ಇರಬೇಕು

ಭಾಷಣದಲ್ಲಿ ಸ್ಪಷ್ಟತೆ ಇರಬೇಕು

ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಇಂದು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ.

ಸರ್ಕಾರಕ್ಕೆ ದೂರದೃಷ್ಟಿ ಇರಬೇಕು

ಸರ್ಕಾರಕ್ಕೆ ದೂರದೃಷ್ಟಿ ಇರಬೇಕು

ಯಾವುದೇ ಒಂದು ಸರ್ಕಾರಕ್ಕೆ ದೂರದೃಷ್ಟಿ ಇರಬೇಕು. ಈ ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಇದೆ. ಈ ಅವಧಿಯಲ್ಲಿ ನಾವು ಏನು ಮಾಡಲಿದ್ದೇವೆ ಎಂಬುದನ್ನು ಹೇಳಬೇಕಿತ್ತು.

ರಾಜ್ಯ ಅಭಿವೃದ್ಧಿ 10 ವರ್ಷ ಹಿಂದಕ್ಕೆ ಹೋಗಿದೆ

ರಾಜ್ಯ ಅಭಿವೃದ್ಧಿ 10 ವರ್ಷ ಹಿಂದಕ್ಕೆ ಹೋಗಿದೆ

ರಾಜ್ಯ ಅಭಿವೃದ್ಧಿಯಲ್ಲಿ 10 ವರ್ಷ ಹಿಂದಕ್ಕೆ ಹೋಗಿದೆ. ಹಣಕಾಸು ಪರಿಸ್ಥಿತಿ ಹದಗೆಡಲು, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳಲು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡದಿರಲು ಕೊರೊನಾ ಕಾರಣ ಎಂದು ಯಡಿಯೂರಪ್ಪ ಅವರು ನೆಪ ಹೇಳುತ್ತಾರೆ.

English summary
Former chief minister Siddaramaiah Says We, from INCKarnataka raise strong objection to the content of the speech delivered by Hon. Governor in the joint assembly session. govt is trying to mislead public through their false narratives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X