ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ ತಿಂಗಳಾಂತ್ಯಕ್ಕೆ ಬೆಂಗಳೂರು ನಗರಕ್ಕೆ ಹೊಸ ಕಮೀಷನರ್ ನೇಮಕ?

|
Google Oneindia Kannada News

ಬೆಂಗಳೂರು, ಜೂ. 17: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನ ಪೊಲೀಸ್ ಆಯುಕ್ತರು ಕೂಡ ಬದಲಾಗುವ ಮಾಹಿತಿ ಚರ್ಚೆಗೆ ನಾಂದಿ ಹಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ನೂತನ ನಗರ ಪೊಲೀಸ್ ಆಯುಕ್ತರು ಯಾರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಎರಡನೇ ಸಲ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದ ಮೂಲೆ ಮೂಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಆಗುತ್ತಿದೆ. ಒಂದು ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆದರೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಹುದ್ದೆಯಲ್ಲೂ ಭಾರೀ ಬದಲಾವಣೆ ಆಗಲಿದೆ. ನಾಯಕತ್ವ ಬದಲಾಗಲೀ, ಬದಲಾಗದಿರಲೀ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಯಂತೂ ಬದಲಾಗಲಿದೆ ಎಂದೇ ಹೇಳಲಾಗುತ್ತಿದೆ.

ರಮೇಶ್ ಜಾರಕಹೊಳಿ ಸಿಡಿ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆ ಮುಗಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ಅಲಂಕರಿಸಿ ಕಮಲಪಂತ್ ಒಂದು ವರ್ಷ ಪುರ್ಣಗೊಳ್ಳುತ್ತಿದೆ. ಆಗಸ್ಟ್ ವೇಳೆಗೆ ಕೆಲವು ಪ್ರಕಣಗಳ ತನಿಖೆ ಪೂರ್ಣಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಜುಲೈ ತಿಂಗಳಾಂತ್ಯಕ್ಕೆ ಕಮಲಪಂತ್ ಪೊಲೀಸ್ ಆಯುಕ್ತರ ಹುದ್ದೆಯಿಂದ ನಿರ್ಗಮಿಸಲಿದ್ದಾರೆ ಎನ್ನಲಾಗಿದೆ.

Karnataka Govt Keen to change Bengaluru Police Commissioner?

ಕಮಲಪಂತ್ ನಿರ್ಗಮನದಿಂದ ಖಾಲಿಯಾಗಲಿರುವ ಹುದ್ದೆಗೆ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ನೇಮಕವಾಗಲಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಕೂಡಲೇ ಬಿ. ದಯಾನಂದ್ ಅವರಿಗ ಗುಪ್ತಚರ ಇಲಾಖೆ ಜವಾಬ್ಧಾರಿ ವಹಿಸಲಾಗಿತ್ತು. ಆಪರೇಷನ್ ಕಮಲದ ಬಳಿಕ ಅಸ್ತಿತ್ವಕ್ಕೆ ಬಂದ ಯಡಿಯೂರಪ್ಪ, ಗುಪ್ತಚರ ಜವಾಬ್ಧಾರಿಯನ್ನು ಬಿ. ದಯಾನಂದ್ ಅವರಿಗೆ ವಹಿಸಲಾಗಿದೆ. ಅಷ್ಟೇ ಪ್ರಾಮಾಣಿಕವಾಗಿ ಅವರು ಹುದ್ದೆಯನ್ನು ನಿರ್ವಹಣೆ ಮಾಡಿದ್ದರು. ಇದೀಗ ಅವರ ಸೇವೆ ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Recommended Video

33M ಫಾಲೋವರ್ಸ್ ಹೊಂದಿರೋ ಮಾಹಿ ಫಾಲೋ ಮಾಡೋದು ಇವ್ರನ್ನು‌ ಮಾತ್ರ!! | Oneindia Kannada

ಬೆಂಗಳೂರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಆಡಳಿತ ವಿಭಾಗದ ಎಡಿಜಿಪಿಯಾಗಿರುವ ಎಂ.ಎ. ಸಲೀಂ ಹೆಸರು ಕೂಡ ಪೊಲೀಸ್ ಆಯುಕ್ತರ ಹೆಸರಿಗೆ ಕೇಳಿ ಬರುತ್ತಿದೆ. ಎಡಜಿಪಿಯಾಗಿರುವ ಎಂ. ಎ. ಸಲೀಂ ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸದ್ದು ಮಾಡಿದ್ದರು. ಇದೀಗ ಅವರೂ ಸಹ ನಗರ ಪೊಲೀಸ್ ಆಯುಕ್ತರಾಗಲು ಅರ್ಹತೆ ಹೊಂದಿದ್ದು, ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎಂಬುದು ಕುತೂಹಲ ಕೆರಳಿಸಿದೆ.

English summary
Karnataka Govt Keen to change Bengaluru Police Commissioner? B. Dayananda will became for New commissioner of police,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X