ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಕೋಲಾ ರೈಲಿಗೆ ಅರಣ್ಯ ಭೂಮಿ ಮಂಜೂರು: ಜ.9ಕ್ಕೆ ಅಂತಿಮ ಸಭೆ

|
Google Oneindia Kannada News

ಬೆಂಗಳೂರು, ಜನವರಿ 8: ಅಂಕೋಲಾ ರೈಲಿಗೆ ಅರಣ್ಯ ಮಂಜೂರಾಗುವ ಸಾಧ್ಯತೆ ಇದ್ದು, ಜನವರಿ 9 ರಂದು ನಡೆಯುವ ವನ್ಯಜೀವಿ ಮಂಡಳಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

1999ರಲ್ಲಿ ಶಂಕು ಸ್ಥಾಪನೆಗೊಂಡ ಈ ಯೋಜನೆಯಿಂದ ವನ್ಯಜೀವಿಗಳಿಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ವಿಳಂಬ ಮಾಡಲಾಗಿತ್ತು. ಹುಲಿ ಸಂರಕ್ಷಿತ ಪ್ರದೇಶ ಮತ್ತು ಆನೆ ಕಾರಿಡಾರ್‌ನಲ್ಲಿ ಈ ರೈಲು ಮಾರ್ಗ ಹಾದು ಹೋಗಲಿದೆ. ಯೋಜನೆ ಪ್ರಾರಂಭವಾದರೆ ಅವುಗಳ ಜೀವಕ್ಕೆ ಕುತ್ತು ಎಂದು ಪರಿಸರ ಸಂಘಟನೆಗಳು, ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು

ಈ ಕುರಿತು ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆ ಹಂತದಲ್ಲಿದೆ. ಆದರೂ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಪಶ್ಚಿಮಘಟ್ಟದಲ್ಲಿ ಸುಮಾರು ,470 ಕ್ಕೂ ಹೆಚ್ಚು ಎಕರೆ ಜಮೀನನ್ನು ರೈಲು ಮಾರ್ಗಕ್ಕೆ ನೀಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

Karnataka govt may give forest land to Ankola railway project

 ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18' ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜ.9ರಂದು ರಾಜ್ಯ ವನ್ಯಜೀವಿ ಮಂಡಳಿಯ 11ನೇ ಸಭೆ ನಿಗದಿಯಾಗಿದ್ದು, ಸಭೆಯ ಕಾರ್ಯಸೂಚಿಯಲ್ಲಿ ಹುಬ್ಬಳ್ಳಿ-ಅಂಕೋಲ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವ್ಯಾಪ್ತಿಗೆ ಒಳಪಡುವ ಸುಮಾರು 595.64 ಹೆಕ್ಟೇರ್ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಮಂಜೂರು ಮಾಡುವ ವಿಷಯವನ್ನು ಸೇರಿಸಲಾಗಿದೆ.

English summary
Chief minister HD Kumraswamy will hold meeting with forest department over forest land transfer to railway department for Ankola , Hubballi lane.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X