ಬಿಬಿಎಂಪಿ ಮೂರು ಭಾಗ ಮಾಡಲು ಸುಗ್ರೀವಾಜ್ಞೆ?
ಬೆಂಗಳೂರು, ಏ. 5: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದಕ್ಕೆ ಹಾಕಲು ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಮೂರು ವಿಭಾಗ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ. ಅಲ್ಲದೇ ಬಿಬಿಎಂಪಿ ಅವ್ಯವಹಾರ ತನಿಖೆಯನ್ನು ಸಿಐಡಿಗೆ ವಹಿಸಲು ತೀರ್ಮಾನ ತೆಗೆದುಕೊಂಡಿದೆ.[ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ : ಹೈಕೋರ್ಟ್]
ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಲೇಬೇಕಾದ ಪರಿಸತ್ಥಿತಿ ಎದುರಾಗಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಕಾಯ್ದೆ ಜಾರಿಗೆ ಮತ್ತೆ ವಿಧಾನಮಂಡಲದ ಅಧಿವೇಶನ ಕರೆಯಲು ಸಾಧ್ಯವಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಕಾನೂನು ಹೇರಲು ರಾಜ್ಯ ಸರ್ಕಾರ ಮುಂದಾಗಿದೆ

ಬಿಬಿಎಂಪಿಯಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳು, ಅವ್ಯವಹಾರಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿರುವ ವರದಿ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ.[ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]
ಆದರೆ ಒಂದೆಡೆ ಬಿಬಿಎಂಪಿಯ 198 ವಾರ್ಡ್ ಗಳಿಗೆ ನಗರಾಭಿವೃದ್ಧಿ ಇಲಾಖೆ ಮೀಸಲು ಪ್ರಕಟ ಮಾಡಿದೆ. ಮಹಿಳೆಯರಿಗೆ 97 ವಾರ್ಡ್ ಗಳು ಮೀಸಲಿವೆ. ಒಟ್ಟಿನಲ್ಲಿ ರಾಜ್ಯ ಸರ್ಕಾರ ಅತ್ತ ಚುನಾಚಣೆಗೂ ಇತ್ತ ಮಸುಗ್ರೂವಾಜ್ಞೆಗೂ ಸಿದ್ಧಚಾದಂತೆ ತೋರುತ್ತಿದೆ.
ಸರ್ಕಾರದ ನಡೆ ಗೊಂದಲ ಮೂಡಿಸಿದ್ದು ಮೀಸಲು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಿದ ನಂತರ ಪರಿಷ್ಕೃತ ಪಟ್ಟಿ ಪ್ರಕಟವಾಗಲಿದ್ದು ಸ್ಪಷ್ಟ ಚಿತ್ರಣ ಗೋಚರವಾಗಲಿದೆ. ಹೈ ಕೋರ್ಟ್ ಚುನಾವಣೆ ನಡೆಸಲೇ ಬೇಕೆಂದು ಸೂಚಿಸುವುದರೊಳಗಾಗಿ ಸುಗ್ರೀವಾಜ್ಞೆ ಹೊರಡಿಸಿದರೂ ಆಶ್ಚರ್ಯವಿಲ್ಲ.












Click it and Unblock the Notifications