''KPSC ಅಭ್ಯರ್ಥಿಗಳ ವಿರುದ್ಧ ರಾಜ್ಯ ಸರ್ಕಾರ ಸೇಡು''
ಬೆಂಗಳೂರು, ಮೇ 04: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ನಡೆದ ಲೋಪದೋಷದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅವರೆಗೆಲ್ಲ ಮೇ 09ರವರೆಗೆ ನಡೆಯಲಿರುವ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಇತ್ತ ರಾಜ್ಯ ಸರ್ಕಾರ ಆ ಅಭ್ಯರ್ಥಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ವತಿಯಿಂದ ಪೂರ್ವಭಾವಿ ಪರೀಕ್ಷೆ ಎರಡು ಬಾರಿ ನಡೆದಿತ್ತು. ಎರಡನೇ ಪರೀಕ್ಷೆ ಡಿಸೆಂಬರ್ 29ರಂದು 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆದಿತ್ತು. ಆ ಪರೀಕ್ಷೆಯಲ್ಲೂ ಉಂಟಾದ ಲೋಪದೋಷಗಳ ವಿರುದ್ಧ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋದ ಪರಿಣಾಮ ಅವರಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ದೊರೆತಿದೆ.

ಆದರೆ ತಮ್ಮ ವಿರುದ್ಧ ಕೋರ್ಟ್‌ಗೆ ಹೋದರು ಎಂಬ ಕಾರಣಕ್ಕೆ ಕೆಪಿಎಸ್‌ಸಿ ಒಳಗೊಂಡಂತೆ ರಾಜ್ಯ ಸರ್ಕಾರ ಮೇ 3 ಮೇ 09ರವರೆಗೆ ನಡೆಯಲಿರುವ KPSC Mains exam 2025 ಅಭ್ಯರ್ಥಿಳಿಗೆ ರಾಜ್ಯ ಸರ್ಕಾರ ಹಾಲ್‌ಟಿಕೆಟ್ ನೀಡುತಿಲ್ಲ. ಈ ಮೂಲಕ ಅವರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್ ಸರ್ಕಾರ ಎಂದು ಆರ್.ಅಶೋಕ್ ಗುಡುಗಿದ್ದಾರೆ.
ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಮೇ 3ರಿಂದ ಅಂದರೆ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಅನುಮತಿ ಪಡೆದಿದ್ದಾರೆ. ಅವರಿಗೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅವರು ವಿವರಿಸಿದರು.
ಕೆಪಿಎಸ್‌ಸಿ ಅಭ್ಯರ್ಥಿಗಳ ಪರಿಸ್ಥಿತಿ ಇದು..
ಒಂದು ಕಡೆ ಧೋ ಎಂದು ಸುರಿಯುತ್ತಿರುವ ಮಳೆ, ಮತ್ತೊಂದು ಕಡೆ ಅರ್ಜಿ ತುಂಬಲು ಯಾವ ದಾಖಲಾತಿಗಳು ಬೇಕೆ ಎನ್ನುವ ಗೊಂದಲ. ಹತ್ತಿರದಲ್ಲಿ ಒಂದು ಜೆರಾಕ್ಸ್ ಅಂಗಡಿ ಇಲ್ಲ, ಕುಡಿಯೋಕೆ ನೀರಿಲ್ಲ. ಕಾಫಿ ತಿಂಡಿಗೆ ಒಂದು ಹೋಟೆಲ್ ಇಲ್ಲ. ಹೆಣ್ಣು ಮಕ್ಕಳಿಗೆ ಶೌಚಾಲಯವಿಲ್ಲ. ಹಸು ಗೂಸುಗಳಿಗೆ ಹಾಲುಣಿಸೋಕೆ ಜಾಗ ಇಲ್ಲ. ಮಧ್ಯರಾತ್ರಿ ಆದರೂ ಹಾಲ್ ಟಿಕೆಟ್ ಕೈಗೆ ಸಿಕ್ಕಿಲ್ಲ. ಬೆಳಗಾದರೆ ಪರೀಕ್ಷೆ, ಇಂತಹ ಅವಾಂತರದ ನಡುವೆ ಪಾಪ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ? ಎಂದು ಅವರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅಂದರೆ ತಮಗೆ ಯಾಕಿಷ್ಟು ದ್ವೇಷ? ಯಾಕಿಷ್ಟು ಅಸಡ್ಡೆ? ಬಡವರು ಮಕ್ಕಳು ಮುಂದೆ ಬರಬಾರಾದಾ? ಎಂದು ಕಿಡಿ ಕಾರಿದರು.
ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುವುದಾಗಿ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಬೇರೆ ದಾರಿ ಇಲ್ಲದೆ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿ ಆದೇಶ ತಂದರೆ ಹಾಲ್ ಟಿಕೆಟ್ ಕೊಡಲು
ಸತಾಯಿಸಿ ನೆಮ್ಮದಿಯಾಗಿ ಪರೀಕ್ಷೆ ಬರೆಯಲೂ ತೊಂದರೆ ಮಾಡಿದ್ದೀರಿ. ನೂರಾರು ಕನಸುಗಳನ್ನು ಇಟ್ಟುಕೊಂಡು ಹಗಲು ರಾತ್ರಿ ಎನ್ನದೆ ವರ್ಷಗಟ್ಟಲೆ ತಯಾರಿ ನಡೆಸಿದ ಅಭ್ಯರ್ಥಿಗಳ ಶಾಪ ನಿಮ್ಮ ಸರ್ಕಾರಕ್ಕೆ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
KPSC ಮುಖ್ಯ ಪರೀಕ್ಷೆ ವೇಳಾಪಟ್ಟಿ
KPSC ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿಗೆ ಹುದ್ದೆಗಳ ಮುಖ್ಯ ಪರೀಕ್ಷೆಯು ಮೇ 3ರಂದು ನಡೆದಿದೆ. ಮೇ 5, 7 ಮತ್ತು 9 ರಂದು ನಡೆಯಲಿದೆ. ಈ ಹಿಂದೆ ಮಾರ್ಚ್ 28 ರಿಂದ ಏಪ್ರಿಲ್ 2 ರವರೆಗೆ ನಿಗದಿಯಾಗಿದ್ದಂತೆ, ಮರು ನಿಗದಿಪಡಿಸಿದ ನಂತರ ಮುಖ್ಯಪರೀಕ್ಷೆ ನಡೆಯುತ್ತಿದೆ. ಮೊದಲ ಪೂರ್ವ ಭಾವಿ ಪರೀಕ್ಷೆ 2024 ಆಗಸ್ಟ್ 25 ರಂದು ನಂತರ ಡಿಸೆಂಬರ್ 29ರಂದು ನಡೆಸಲಾಗಿತ್ತು.












Click it and Unblock the Notifications