ಇನ್ನು ಮುಂದೆ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸುವಂತಿಲ್ಲ

ಬೆಂಗಳೂರು, ಜುಲೈ 7: 'ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ'ದ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿ ಮುಷ್ಕರ ಹೂಡಿ ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

'ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-2013'ರ ಅನ್ವಯ ಸರಕಾರಕ್ಕಿರುವ ಅಧಿಕಾರವನ್ನು ಚಲಾಯಿಸಿ 'ಬೆಂಗಳೂರಿನ ನಾಗರಿಕರ ಹಿತದೃಷ್ಟಿಯಿಂದ' ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ಹೇಳಿದೆ.

Karnataka govt prohibits ‘Namma Metro’ workers from further protest

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಹಿದಾಯತ್ತುಲ್ಲ ಆದೇಶ ಹೊರಡಿಸಿದ್ದಾರೆ.

ಇಂದು ಮುಂಜಾನೆ ಏಕಾಏಕಿ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರಿಂದ ನಾಗರೀಕರು ಸರಕಾರದ ವಿರುದ್ಧ ಗರಂ ಆಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+