ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರ್ಕಾರದಿಂದ 3,673 ಪೌರಕಾರ್ಮಿಕರ ಕೆಲಸ ಕಾಯಂ

|
Google Oneindia Kannada News

ಬೆಂಗಳೂರು, ನ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ಕೆಲಸ ಮಾಡುತ್ತಿರುವ 3,673 ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಸರ್ಕಾರದ ಅಡಿಯಲ್ಲಿ 17,000 ರಿಂದ 28,950 ರೂಪಾಯಿ ವರೆಗಿನ ವೇತನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮತಪಟ್ಟಿ ಅಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಮಾನತಿಗೆ ಕಾಂಗ್ರೆಸ್ ಆಗ್ರಹಮತಪಟ್ಟಿ ಅಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಮಾನತಿಗೆ ಕಾಂಗ್ರೆಸ್ ಆಗ್ರಹ

"ಹೆಚ್ಚು ವರ್ಷಗಳ ಕಾಲ ಕೆಲಸ ಮಾಡಿದ ವ್ಯಕ್ತಿಗೆ ಆದ್ಯತೆ ನೀಡಲಾಗುತ್ತದೆ. ಅವರು ಕನಿಷ್ಠ ಎರಡು ವರ್ಷಗಳವರೆಗೆ ಕೆಲಸ ಮಾಡಿದ ಮತ್ತು ವೇತನ ಪಡೆದಿದ್ದಕ್ಕಾಗಿ ಪುರಾವೆಗಳನ್ನು ಒದಗಿಸಬೇಕು" ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka govt regularises 3,673 pourakarmikas

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದ ಎಂಟು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಒಟ್ಟು 18,000 ಪೌರಕಾರ್ಮಿಕರ ಪೈಕಿ 3,673 ಮಂದಿಯನ್ನು ಜೇಷ್ಠತಾ ಪಟ್ಟಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿತ್ತು. ಅಭ್ಯರ್ಥಿಗಳನ್ನು ಅನುಭವದ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಮತ್ತು ಗರಿಷ್ಠ ವಯೋಮಿತಿಯನ್ನು 55 ವರ್ಷಗಳಿಗೆ ಮಿತಿಗೊಳಿಸಲಾಗಿದೆ.

"ಸಾಮಾನ್ಯ ಅರ್ಹತೆ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಇಲ್ಲದಿದ್ದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪರಿಗಣಿಸಲು ಷರತ್ತುಗಳನ್ನು ಸಡಿಲಿಸುವ ಮೂಲಕಷರತ್ತು ಸಡಿಲಿಸಲಾಗಿದೆ" ಎಂದು ಅಧಿಸೂಚನೆಯಲ್ಲಿ ಸೇರಿಸಲಾಗಿದೆ.

ಪೌರಕಾರ್ಮಿಕರು ಉತ್ತಮ ವೇತನ ಮತ್ತು ಖಾಯಂ ಉದ್ಯೋಗಕ್ಕಾಗಿ ಹಲವು ತಿಂಗಳಿನಿಂದ ಒತ್ತಾಯಿಸುತ್ತಿದ್ದಾರೆ. ಜುಲೈನಲ್ಲಿ, ತಮ್ಮ ಬೇಡಿಕೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ನಡೆಸಿದ್ದರು.

Karnataka govt regularises 3,673 pourakarmikas

ನೇರ ಪಾವತಿ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರನ್ನು ಕಾಯಂಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರತಿಭಟನಾ ನಿರತ ಕಾರ್ಮಿಕರಿಗೆ ಲಿಖಿತವಾಗಿ ಭರವಸೆ ನೀಡಿತ್ತು. ಕಸ ಸಂಗ್ರಹಿಸುವ ವಾಹನಗಳ ಚಾಲಕರು ಮತ್ತು ಲೋಡರ್‌ಗಳನ್ನೂ ನೇರ ಪಾವತಿ ವ್ಯವಸ್ಥೆಗೆ ತರಲಾಗುವುದು ಎಂದು ಸರ್ಕಾರ ತಿಳಿಸಿತ್ತು.

ಈ ತಿಂಗಳ ಆರಂಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಕೇವಲ 11,136 ನೈರ್ಮಲ್ಯ ಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸುವುದಾಗಿ ಘೋಷಿಸಿದ್ದರು. ಇದಕ್ಕೆ ಪೌರಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜ್ಯಾದ್ಯಂತ ಸುಮಾರು 48,000 ಪೌರಕಾರ್ಮಿಕರಿರುವಾಗ ಕೇವಲ 11,000 ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಬಸವರಾಜ ಬೊಮ್ಮಾಯಿ ನಿರ್ಧಾರದಿಂದ ಪೌರಕಾರ್ಮಿಕರು ಅಸಮಾಧಾನಗೊಂಡಿದ್ದಾರೆ.

English summary
Karnataka government regularised 3,673 pourakarmikas. who works with the Bruhat Bengaluru Mahanagara Palike (BBMP). know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X