B Khata: ಬಿ ಖಾತಾದಿಂದ ಎ ಖಾತಾ ರಾಜ್ಯದಾದ್ಯಂತ ವಿಸ್ತರಣೆ: ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್!
ಕರ್ನಾಟಕದಾದ್ಯಂತ ಬಿ - ಖಾತಾ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ಸರ್ಕಾರವು ಮುಂದಾಗಿದೆ. ಬೆಂಗಳೂರಿನಾದ್ಯಂತ ಬಿ ಖಾತಾ ಹೊಂದಿರುವ ಆಸ್ತಿದಾರರಿಗೆ ಎ ಖಾತಾ ನೀಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಇದೀಗ ರಾಜ್ಯದಾದ್ಯಂತ ಬಿ ಖಾತಾ ಆಸ್ತಿದಾರರಿಗೂ ಗುಡ್‌ನ್ಯೂಸ್ ಕೊಡುವುದಕ್ಕೆ ಮುಂದಾಗಿದೆ. ಈ ಮೂಲಕ ಕರ್ನಾಟಕದಾದ್ಯಂತ ಲಕ್ಷಾಂತರ ಬಿ ಖಾತಾ ಹೊಂದಿರುವ ಆಸ್ತಿದಾರರಿಗೆ ಗುಡ್‌ನ್ಯೂಸ್ ಕೊಡುವುದಕ್ಕೆ ನಿರ್ಧರಿಸಲಾಗಿದೆ. ಇದರಿಂದ ಲಕ್ಷಾಂತರ ಜನ ಆಸ್ತಿದಾರರಿಗೆ ಅನುಕೂಲವಾಗಲಿದ್ದು ರಿಯಲ್ ಎಸ್ಟೇಟ್ ಬೂಸ್ಟ್ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಬಿ ಖಾತಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊಟ್ಟ ಹೊಸ ಅಪ್ಡೇಟ್ಸ್ ವಿವರ ನೋಡೋಣ.
ಕರ್ನಾಟಕದಲ್ಲಿ ಬಿ ಖಾತಾ ಹೊಂದಿರುವ ಆಸ್ತಿದಾರರಿಗೆ ಎ ಖಾತಾ ನೀಡಲು ನಿರ್ಧರಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಬಿ ಖಾತಾ ಆಸ್ತಿಗಳಿಗೆ ಎ ಖಾತೆ ನೀಡುವ ಯೋಜನೆಯನ್ನು ರಾಜ್ಯವ್ಯಾಪ್ತಿ ವಿಸ್ತರಿಸಲು ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ಕರ್ನಾಟಕದಾದ್ಯಂತ ಲಕ್ಷಾಂತರ ಜನ ಆಸ್ತಿದಾರರು ಬಿ - ಖಾತಾ ಹೊಂದಿದ್ದಾರೆ. ಬಿ ಖಾತಾ ಇರುವ ಆಸ್ತಿದಾರರು ಎ ಖಾತಾ ಸೌಲಭ್ಯ ನೀಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಬದಲಾವಣೆಗೆ ಮುಂದಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ಅಲ್ಲದೇ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕಂದಾಯ ಭೂಮಿಯಲ್ಲಿ ನಿರ್ಮಿಸಲಾಗಿರುವ ಬಡಾವಣೆಗಳನ್ನು ಅನಧಿಕೃತವೆಂದು ಘೋಷಿಸಲಾಗಿದೆ. ಈ ರೀತಿಯ ಬಡಾವಣೆಗಳಲ್ಲಿ ನಿವೇಶನಗಳಿಗೆ ಖಾತಾ ನೀಡುವುದನ್ನು ನಿರ್ಬಂಧಿಸಲಾಗಿದೆ ಎಂದೂ ವಿವರಿಸಿದ್ದಾರೆ. ಅನಧಿಕೃತ ಬಡಾವಣೆಗಳ ನಿರ್ಮಾಣ ತಡೆಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯಿದೆ- 1960ರ ಕಲಂ 17(4)ರ ಅಡಿಯಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಡಲಾಗಿದೆ. ಅಕ್ರಮ ಬಡಾವಣೆಗಳ ನಿರ್ಮಾಣ ತಡೆಗಟ್ಟುವಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಡಿದರೂ ಅಥವಾ ಎಡವಿದರೂ ದಂಡ ವಿಧಿಸುವ, ಅಮಾನತು ಮಾಡುವ ಹಾಗೂ ಸೇವೆಯಿಂದಲೇ ವಜಾಗೊಳಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿ ಖಾತಾ ಇರುವುದಿಲ್ಲ ಎನ್ನುವ ವಿಷಯವನ್ನು ಅವರು ಪುನರುಚ್ಚರಿಸಿದ್ದಾರೆ.
ರಿಯಲ್ ಎಸ್ಟೇಟ್ ಬೂಸ್ಟ್: ಇನ್ನು ಕರ್ನಾಟಕದಲ್ಲಿ ಅಂದಾಜು 30 ಲಕ್ಷಕ್ಕೂ ಹೆಚ್ಚು ಬಿ ಖಾತಾ ಆಸ್ತಿದಾರರು ಇದ್ದಾರೆ ಎಂದು ಹೇಳಲಾಗಿದೆ. ಆದರೆ ಈ ರೀತಿ ಲಕ್ಷಾಂತರ ಬಿ ಖಾತಾ ಆಸ್ತಿ ಇದ್ದರೂ ಕಾನೂನು ತೊಡಕಿನ ಕಾರಣಕ್ಕೆ ಈ ಆಸ್ತಿಗಳ ಮಾರಾಟ ಹಾಗೂ ಖರೀದಿ ಸಾಧ್ಯವಾಗುತ್ತಿಲ್ಲ. ಮನೆಗಳ ನಿರ್ಮಾಣ ಹಾಗೂ ವಿದ್ಯುತ್ & ನೀರು ಪೂರೈಕೆಯು ಸಾಧ್ಯವಾಗುತ್ತಿಲ್ಲ. ಅಲ್ಲದೇ ಕಟ್ಟಡ ನಕ್ಷೆ ಮಂಜೂರಾತಿ ಸೌಲಭ್ಯ ಸಿಗುತ್ತಿಲ್ಲ. ಬ್ಯಾಂಕ್ ಸಾಲ ಸೌಲಭ್ಯವೂ ಸಿಗುತ್ತಿಲ್ಲ ಇದೀಗ ಕೊನೆಗೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಾದ್ಯಂತ ಬಿ ಖಾತಾದಿಂದ ಎ ಖಾತಾ ನೀಡುವುದಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ರಿಯಲ್ ಎಸ್ಟೇಟ್‌ಗೂ ಬೂಸ್ಟ್ ಸಿಗಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications