ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಸರ್ಕಾರಿ ಶಾಲೆ: 47000 ಖಾಯಂ ಶಿಕ್ಷಕರು, 24000 ರೂಮ್‌ಗಳ ಕೊರತೆ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ರಾಜ್ಯದಲ್ಲಿ ಬರೋಬ್ಬರಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವುದನ್ನು ಹಾಗೂ ಶಾಲೆಗಳಲ್ಲಿ 24 ಸಾವಿರ ಕೊಠಡಿಗಳ ಕೊರತೆ ಇರುವುದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದು, ಶಿಕ್ಷಣ ಕ್ಷೇತ್ರದ ಕುರಿತು ಸರ್ಕಾರದ ತೀವ್ರ ನಿರ್ಲಕ್ಷ್ಯ ಇದರಿಂದ ಸಾಬೀತಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರವರು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 47 ಸಾವಿರ ಹುದ್ದೆಗಳು ಖಾಲಿ ಇರುವುದನ್ನು ಒಪ್ಪಿಕೊಂಡಿದ್ದಾರೆ. ಈ ಪೈಕಿ ಕೇವಲ 15 ಸಾವಿರ ಹುದ್ದೆಗಳಿಗೆ ಮಾತ್ರ ಖಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಪ್ರಕ್ರಿಯೆ ನಡೆಸುತ್ತಿದೆ. ಈ ವರ್ಷದಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು. ಇನ್ನು ಆಯ್ಕೆ ಪಟ್ಟಿಯನ್ನು ಸಹ ಬಿಡುಗಡೆ ಮಾಡಿಲ್ಲ. ಆಯ್ಕೆ ಪಟ್ಟಿ ಬಿಡುಗಡೆಯ ಬಳಿಕ ದಾಖಲೆ ವೇರಿಫಿಕೇಷನ್ ಮಾಡಿ ನೇಮಕಾತಿ ಆದೇಶವವನ್ನು ಬಿಡುಗಡೆ ಮಾಡಬೇಕಿದೆ.

"15 ಸಾವಿರ ಶಿಕ್ಷಕರ ನೇಮಕವು ಸ್ವತಂತ್ರ ಭಾರತದ ಇತಿಹಾಸದಲ್ಲೇ ದೊಡ್ಡ ದಾಖಲೆ ಎಂದು ಸಚಿವರು ಸುಳ್ಳು ಹೇಳಿದ್ದಾರೆ. ಸಚಿವರು ಈ ಹೇಳಿಕೆಯು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡರಿಗೆ ಮಾಡಿದ ಅಪಮಾನ" ಎಂದು ಪೃಥ್ವಿ ರೆಡ್ಡಿ ಹೇಳಿದರು.

 ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ

ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ

"ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಖಾಯಂ ಶಿಕ್ಷಕರು ಇಲ್ಲದಿರುವುದು ಕೂಡ ಬೆಳಕಿಗೆ ಬಂದಿದೆ. ಶಿಕ್ಷಕರ ಕೊರತೆಯಿಂದಾಗಿ ಈಗಿರುವ ಶಿಕ್ಷಕರ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಬೋಧನೆಯಲ್ಲಿ ವ್ಯತ್ಯಯ ಉಂಟಾಗಿ ಅವರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ" ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

 ಶಿಕ್ಷಣ ಇಲಾಖೆಯಲ್ಲೂ 40% ಭಷ್ಟಾಚಾರ

ಶಿಕ್ಷಣ ಇಲಾಖೆಯಲ್ಲೂ 40% ಭಷ್ಟಾಚಾರ

"ರಾಜ್ಯಾದ್ಯಂತ 24 ಸಾವಿರ ಶಾಲಾ ಕೊಠಡಿಗಳ ಅಗತ್ಯವಿದ್ದರೂ ಕೇವಲ 8100 ಕೊಠಡಿಗಳನ್ನು ಮಾತ್ರ ನಿರ್ಮಿಸುವುದಾಗಿ ಸಚಿವ ನಾಗೇಶ್‌ ಹೇಳಿದ್ದಾರೆ. ಶಿಕ್ಷಣ ಇಲಾಖೆಯಲ್ಲೂ 40% ಭಷ್ಟಾಚಾರ ನಡೆಯುತ್ತಿರುವ ಸುದ್ದಿಗಳು ಕೇಳಿಬರುತ್ತಿವೆ. ಸರ್ಕಾರ ನಿರ್ಮಿಸಲಿರುವ ಶಾಲಾ ಕೊಠಡಿಗಳ ಕಾಮಗಾರಿಗಳಲ್ಲಿ ಕೂಡ ಅಕ್ರಮ ನಡೆಯುವ ಸಾಧ್ಯತೆಯಿದೆ" ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

 ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಸೌಲಭ್ಯ

ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಸೌಲಭ್ಯ

"ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯವೆಂಬುದನ್ನು ಪಕ್ಷವು ದೆಹಲಿಯಲ್ಲಿ ತೋರಿಸಿಕೊಟ್ಟಿದೆ. ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಮೂಲಸೌಕರ್ಯಗಳಿದ್ದು, ಹಲವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳಿವೆ. ಸ್ಮಾರ್ಟ್‌ ತರಗತಿಗಳು, ಈಜುಕೊಳಗಳು, ದೇಶಭಕ್ತಿ ಪಠ್ಯಕ್ರಮ, ಬ್ಯುಸಿನೆಸ್‌ ಬ್ಲಾಸ್ಟರ್ಸ್‌ ಯೋಜನೆ, ಶಿಕ್ಷಕರಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಮುಂತಾದ ಹಲವು ಸುಧಾರಣೆಗಳನ್ನು ದೆಹಲಿ ಸರ್ಕಾರ ತಂದಿದೆ ಎಂದು ದೆಹಲಿ ಸರ್ಕಾರದ ಸಾಧನೆಯನ್ನು ಪೃಥ್ವಿ ರೆಡ್ಡಿ ಹೊಗಳಿದ್ದಾರೆ.

 ಸರ್ಕಾರಿ ಶಾಲೆಗಳು ಪಂಚತಾರಾ ಹೊಟೇಲ್‌ನಂತಿವೆ

ಸರ್ಕಾರಿ ಶಾಲೆಗಳು ಪಂಚತಾರಾ ಹೊಟೇಲ್‌ನಂತಿವೆ

ದೆಹಲಿ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸುಧಾರಣೆಯನ್ನು ತಂದಿದೆ. ಕೆಲವು ಸರ್ಕಾರಿ ಶಾಲೆಗಳಿಗೆ ಹೋದರೆ ಪಂಚತಾರಾ ಹೋಟೆಲ್‌ಗೆ ಹೋದ ಅನುಭವವಾಗುತ್ತದೆ. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಗೆ ದೆಹಲಿ ಶಿಕ್ಷಣ ಇಲಾಖೆಯ ಸಾಧನೆಯ ಶೇ. 1ರಷ್ಟು ಸುಧಾರಣೆ ತರಲೂ ಸಾಧ್ಯವಾಗಿಲ್ಲ ಎಂದು ಪೃಥ್ವಿ ರೆಡ್ಡಿ ಹೇಳಿದರು.

English summary
Aam Aadmi Party State President Prithvi Reddy said that education minister BC Nagesh has admitted in the assembly that there are 47 thousand vacant posts of teachers in the state and there is a shortage of 24 thousand rooms in schools. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X