Jayanagar: ಸರ್ಕಾರದಿಂದ ಜಯನಗರಕ್ಕೆ ಅನ್ಯಾಯ: 'ರಾಜಕೀಯ ಬದಿಗಿಡಿ, ಅನುದಾನ ನೀಡಿ'
ಬೆಂಗಳೂರು, ನವೆಂಬರ್ 06: ಕರ್ನಾಟಕದಲ್ಲಿ ಯಾವುದೇ ಸರ್ಕಾರಗಳು ಬಂದರೂ ಸಹಿತ ಕಳೆದ ಒಂದು ದಶಕದಿಂದ ಬೆಂಗಳೂರಿನ ಜಯನಗರವನ್ನು ಕಡೆಗಣಿಸಿವೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ. ರಾಜಕೀಯ ಧ್ವೇಷ ಬದಿಗೆ ಇಡಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿ ಎಂಬ ಕೂಗು ಶುರುವಾಗಿದೆ. ಇತ್ತೀಚೆಗೆ ಆನ್‌ಲೈನ್ ನಲ್ಲೂ ಈ ಬಗ್ಗೆ ಒತ್ತಾಯ ಕೇಳಿ ಬಂದಿತ್ತು.
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಸರ್ಕಾರ ಬಂದರೂ ಅನುದಾನ ನೀಡುವಲ್ಲಿ ಅನ್ಯಾಯವಾಗುತ್ತಿದೆ, ಬಿಜೆಪಿ ಶಾಸಕ ರಾಮಮೂರ್ತಿಯವರು ಕಾಂಗ್ರೆಸ್ ಸರ್ಕಾರ ಅನುದಾನ ಕೊಡುತ್ತಿಲ್ಲ ಎಂದು ಕಾರಣ ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅನುದಾನ ತರಲು ಆಗದಿದ್ದ ಮೇಲೆ ರಾಜೀನಾಮೆ ಕೊಡಿ ಎಂದು ಆಮ್ ಆದ್ಮಿ ಪಕ್ಷದ ಜಯನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ. ಸರವಣ ಒತ್ತಾಯಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಜಯನಗರ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಲೇ ಇದೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಯನಗರಕ್ಕೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಇದ್ದರು. ಬಿಜೆಪಿ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎಂದು ಅವರು ಹೇಳುತ್ತಿದ್ದರು ಎಂದರು.
ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು
ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ, ಆದರೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಈ ಸರ್ಕಾರ ಕೂಡ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎಂದು ಆರೋಪಿಸಿದರು. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಇವರ ರಾಜಕೀಯ ಕಿತ್ತಾಟಕ್ಕೆ ಕ್ಷೇತ್ರದ ಜನ ದಿನನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಮೂರು ತಿಂಗಳಿನಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಕೆಲಸ ಮಾಡಿಸಿ ಎಂದರೆ ಶಾಸಕರು ಅನುದಾನ ಇಲ್ಲ ಎನ್ನುತ್ತಿದ್ದಾರೆ. ಶಾಸಕರು ಯಾವುದೇ ಪಕ್ಷದವರಾಗಲಿ ಅಭಿವೃದ್ಧಿಗೆ ಹಣ ಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂಧು ತಿಳಿಸಿದರು.
ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ
ಬೆಂಗಳೂರಿನ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅಭಿವೃದ್ಧಿಗಾಗಿ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಆದರೆ ಜಯನಗರ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ, ಇಲ್ಲಿನ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಿನ ಮನಸ್ತಾಪವೇ ಇದಕ್ಕೆ ಕಾರಣ ಎನ್ನುತ್ತಿದ್ದಾರೆ. ನಿಮ್ಮ ರಾಜಕೀಯ ದ್ವೇಷಕ್ಕೆ ಕ್ಷೇತ್ರದ ಮತದಾರರು ಶಿಕ್ಷೆ ಅನುಭವಿಸಬೇಕಾ? ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಸಿ.ಕೆ. ರಾಮಮೂರ್ತಿ ಬಿಜೆಪಿ ಶಾಸಕ ಮಾತ್ರವಲ್ಲ ಅವರು ಜಯನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ನಿಮ್ಮಿಬ್ಬರ ನಡುವಿನ ವೈಯಕ್ತಿಕ ಜಗಳಕ್ಕೆ ಕ್ಷೇತ್ರದ ಮತದಾರರಿಗೆ ಶಿಕ್ಷೆ ಯಾಕೆ?, ಶಾಸಕರೇ ನಿಮ್ಮ ಕ್ಷೇತ್ರಕ್ಕೆ ಅನುದಾನ ತರಲು ನಿಮಗೆ ತಾಕತ್ತಿಲ್ವಾ? ಬೇರೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ವಾ? ನಿಮಗೆ ಅನುದಾನ ತರಲು ಆಗದಿದ್ದರೆ ರಾಜೀನಾಮೆ ಕೊಡಿ ಎಂದು ಅವರು ಆಗ್ರಹಿಸಿದರು.
ಜಯನಗರದಿಂದ ರೂ.540 ಕೋಟಿ ತೆರಿಗೆ
ಜಯನಗರ ಕ್ಷೇತ್ರವೊಂದರಿಂದಲೇ ರಾಜ್ಯ ಸರ್ಕಾರಕ್ಕೆ 540 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದೇವೆ. ಕ್ಷೇತ್ರದಿಂದ ಇಷ್ಟು ಆದಾಯ ಪಡೆದು ಈಗ ಅಭಿವೃದ್ಧಿಗೆ ಅನುದಾನ ಕೊಡದೆ ಅನ್ಯಾಯ ಮಾಡುತ್ತೀದ್ದೀರಾ?. ಕೂಡಲೇ ಡಿ.ಕೆ. ಶಿವಕುಮಾರ್ ತಮ್ಮ ರಾಜಕೀಯ ದ್ವೇಷವನ್ನು ಬದಿಗಿಟ್ಟು ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.
ಪಕ್ಷದ ಬೆಂಗಳೂರು ದಕ್ಷಿಣ ವಿಭಾಗದ ಅಧ್ಯಕ್ಷ ಜೋಶ್ವಾ ಸಿಂಟು, ಬೆಂಗಳೂರು ದಕ್ಷಿಣ ವಿಭಾಗದ ಸಂಘಟನಾ ಕಾರ್ಯದರ್ಶಿ ಶಶಿಧರ್ ಆರಾಧ್ಯ, ಜೋಶ್ವ, ಬೆಂಗಳೂರು ದಕ್ಷಿಣ ಅಲ್ಪ ಸಂಖ್ಯಾತರದ ಘಟಕದ ಅಧ್ಯಕ್ಷ ಮುರ್ತುಜಾ, ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಜರಿದ್ದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications