ಚಾಲಕ ರಮೇಶ್ ಆತ್ಮಹತ್ಯೆ ಕೇಸ್, ಕೆಎಎಸ್ ಅಧಿಕಾರಿ ಅಮಾನತು!
ಮದ್ದೂರು ಮೂಲದ ಕಾರು ಚಾಲಕ ರಮೇಶ್ ಗೌಡ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರು ವಿಶೇಷ ಭೂಸ್ವಾಧೀನಾಧಿಕಾರಿ ಎಲ್. ಭೀಮಾನಾಯ್ಕ ಅವರನ್ನು ಅಮಾನತು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಮದ್ದೂರು, ಡಿಸೆಂಬರ್ 13: ಮದ್ದೂರು ಮೂಲದ ಕಾರು ಚಾಲಕ ರಮೇಶ್ ಗೌಡ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರು ವಿಶೇಷ ಭೂಸ್ವಾಧೀನಾಧಿಕಾರಿ ಎಲ್. ಭೀಮಾನಾಯ್ಕ ಅವರನ್ನು ಅಮಾನತು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-2) ಸೋಮವಾರ ಸಂಜೆ ಹೊರಡಿಸಿದ ಆದೇಶದಲ್ಲಿ, 'ಭೀಮಾನಾಯ್ಕ ಅವರು ಪೂರ್ವಾನುಮತಿ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಕಾರು ಚಾಲಕನ ಆತ್ಮಹತ್ಯೆ ಪ್ರಕರಣದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತು ಮಾಡಲಾಗಿದೆ' ಎಂದು ಹೇಳಲಾಗಿದೆ.

'ಭೀಮಾನಾಯ್ಕ ಅವರು ಗಾಲಿ ಜನಾರ್ದನ ರೆಡ್ಡಿ ಅವರ ಮಗಳ ಮದುವೆಗೆ 25 ಕೋಟಿ ಕಪ್ಪು ಹಣ ಬಿಳಿ ಮಾಡಿಕೊಟ್ಟಿದ್ದರು. ಈ ವಿಷಯ ಗೊತ್ತಿದ್ದ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಅವರ ಕಾರು ಚಾಲಕರಾಗಿದ್ದ ರಮೇಶ ಗೌಡ ಅವರು ತಮ್ಮ ಸೂಸೈಡ್ ನೋಟ್ ನಲ್ಲಿ ಉಲ್ಲೇಖಿಸಿದ್ದರು.
ಈ ಪ್ರಕರಣದ ಆರೋಪಿ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಭೀಮಾನಾಯ್ಕ ಅವರನ್ನು ಭಾನುವಾರ ಬೆಳಿಗ್ಗೆ ಕಲಬುರ್ಗಿಯಲ್ಲಿ ಬಂಧಿಸಲಾಗಿತ್ತು. ರಮೇಶ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸೋಮವಾರದಂದು ಇಡೀ ದಿನ ಮದ್ದೂರಿನ ಗೆಸ್ಟ್ ಹೌಸ್ ನಲ್ಲಿ ಭೀಮಾನಾಯ್ಕ ಅವರನ್ನು ತೀವ್ರ ವಿಚಾರಣೆ ನಡೆಸಲಾಯಿತು.
ಸಿಐಡಿ ಎಸ್ಪಿ ಮಾರ್ಟಿನ್ ನೇತೃತ್ವದ ತಂಡವು ಆರೋಪಿಗಳನ್ನು ಆರು ಗಂಟೆ ವಿಚಾರಣೆ ನಡೆಸಿ, ಮಾಹಿತಿ ದಾಖಲಿಸಿಕೊಂಡಿತು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು, ಹಲವು ವ್ಯಕ್ತಿಗಳ ಹೆಸರು ಹೇಳಿದ್ದಾರೆ. ಆ ವ್ಯಕ್ತಿಗಳ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅವರಲ್ಲಿ ಕೆಲವರನ್ನು ಬಂಧಿಸುವ ಸಾಧ್ಯತೆಯೂ ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications