ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಿಂದ ತಿರುಮಲದಲ್ಲಿ 200 ಕೋಟಿ ವೆಚ್ಚದ ಅತಿಥಿ ಗೃಹ ನಿರ್ಮಾಣ

|
Google Oneindia Kannada News

ಬೆಂಗಳೂರು, ಜುಲೈ 15: ಆಂಧ್ರಪ್ರದೇಶದ ತಿರುಮಲದಲ್ಲಿ ಸುಮಾರು 200 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ.

Recommended Video

Anand Mahindra Road Roast | Oneindia Kannada

ಸೋಮವಾರದ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿರುಮಲ ಗೆಸ್ಟ್ ಹೌಸ್ ನಿರ್ಮಾಣ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದು, ಈ ಕುರಿತು ಕಂದಾಯ ಇಲಾಖೆ ಅಧಿಕೃತ ಪ್ರಕಟಣೆ ನೀಡಿದೆ.

ಲಾಕ್ ಡೌನ್ ತೆರವುಗೊಂಡ ನಂತರ ತಿರುಪತಿ ತಿಮ್ಮಪ್ಪನ 2ವಾರದ ಆದಾಯ ಪ್ರಕಟಲಾಕ್ ಡೌನ್ ತೆರವುಗೊಂಡ ನಂತರ ತಿರುಪತಿ ತಿಮ್ಮಪ್ಪನ 2ವಾರದ ಆದಾಯ ಪ್ರಕಟ

ಕಳೆದ ವರ್ಷದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಿರುಮಲದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ 26 ಕೋಟಿ ಅನುಮೋದನೆ ನೀಡಲಾಗಿತ್ತು. ಆದ್ರೀಗ, ಬಿಜೆಪಿ ಸರ್ಕಾರ 200 ಕೋಟಿ ವೆಚ್ಚದಲ್ಲಿ ಯಾತ್ರಿಕರಿಗೆ ಗೆಸ್ಟ್ ಹೌಸ್ ನಿರ್ಮಿಸುತ್ತಿದೆ.

Karnataka Govt To Build 200 crore Guest House At tirumala

ತಿರುಮಲದಲ್ಲಿ ಕರ್ನಾಟಕ ರಾಜ್ಯ ಛತ್ರ ಸೇರಿದ 7.05 ಎಕರೆ (322,545 ಚದರ ಅಡಿ) ಜಾಗದಲ್ಲಿ ಸಮಗ್ರ ಅಭಿವೃದ್ದಿ ಕಾರ್ಯಗಳನ್ನು ನೆರವೇರಿಸಲು ಸಚಿವ ಸಂಪುಟ ಸಮ್ಮತಿಸಿದೆ. ಒಟ್ಟು 1005 ಯಾತ್ರಿಕರಿಗೆ ಅನುಕೂಲವಾಗುವಂತೆ ಈ ಅತಿಥಿ ಗೃಹ ನಿರ್ಮಾಣವಾಗುತ್ತಿದೆ.

ಇದರಲ್ಲಿ ಕಲ್ಯಾಣ ಮಂಟಪ, ಡಾರ್ಮೆಂಟ್ರಿ, ಸಿಬ್ಬಂದಿ ಕೊಠಡಿ ಮತ್ತು ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. 140 ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 12 ಡಾರ್ಮೆಂಟ್ರಿಗಳು, 605 ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 305 ಕೊಠಡಿಗಳು, ಗಣ್ಯರಿಗೆ ವಿಶೇಷವಾಗಿ 24 ಸೂಟ್‌ ಕೊಠಡಿಗಳು ಮತ್ತು 4 ಡಬಲ್ ಸೂಟ್ ಕೊಠಡಿಗಳು, 1 ಕಲ್ಯಾಣ ಮಂಟಪ, ಕಾರು, ಬಸ್ಸುಗಳಿಗೆ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ, ಕಲ್ಯಾಣಿ ಜೀರ್ಣೋದ್ಧಾರ, ಹೊಸ ರಸ್ತೆಗಳ ನಿರ್ಮಾಣ, ಲ್ಯಾಂಡ್ ಸ್ಕೆಪಿಂಗ್, ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡಲಾಗುತ್ತದೆ ಎಂದು ಕಂದಾಯ ಇಲಾಖೆಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆಯೂ ತಿರುಮಲ ಅತಿಥಿ ಗೃಹ ನಿರ್ಮಾಣ ಯೋಜನೆ ಅನುಮೋದನೆ ನೀಡಿರುವುದು ಸಹಜವಾಗಿ ಕುತೂಹಲ ಮೂಡಿಸಿದೆ.

English summary
Karnataka government has approved to build 200 crores Guest House in tirumala for 1005 Pilgrims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X