ವೃಷಭಾವತಿ ನದಿ ನೀರು ಸಂಸ್ಕರಣೆಗೆ ಸರ್ಕಾರದಿಂದ 1500 ಕೋಟಿ ರೂ. ಮೀಸಲು

ಬೆಂಗಳೂರು, ಜುಲೈ 09: ಬೆಂಗಳೂರಿನ ವೃಷಭಾವತಿ ನದಿ ನೀರು ಸಂಸ್ಕರಣೆ ಯೋಜನೆಗೆ ಸರ್ಕಾರದಿಂದ 1500 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ಸಿಪಿ ಯೋಗೇಶ್ವರ್ ಮಾತನಾಡಿ, ಬೆಂಗಳೂರು ನಗರದ ಶೇ 40 ರಷ್ಟು ತ್ಯಾಜ್ಯ ನೀರು ವೃಷಭಾವತಿ ನದಿ ಮೂಲಕ ಬಿಡದಿಯ ಬೈರಮಂಗಲ ಕೆರೆಗೆ ಸೇರುತ್ತಿದೆ.

ಪ್ರಸಕ್ತ ಕೇವಲ ಎರಡು ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲಾಗುತ್ತಿದ್ದು, ಈ ನೀರು ಕೃಷಿ ಸೇರಿದಂತೆ ಯಾವುದಕ್ಕೂ ಬಳಸಲು ಸಾಧ್ಯವಿಲ್ಲ. ಇನ್ನೊಂದೆಡೆ ಸಂಸ್ಕರಣೆ ಮಾಡಿದ ನೀರನ್ನು ಚರಂಡಿಗಳಿಗೆ ಹರಿಸುತ್ತಿದ್ದು, ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ ಎಂದರು.

Karnataka Govt To Spend Rs 1,500 cr On Desilting And Cleaning Up Vrishabhavathi Valley

ವೃಷಭಾವತಿ ನದಿಯಲ್ಲಿ ಹರಿಯುವ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡುವ ಬಗ್ಗೆ ಕಾರ್ಖಾನೆಗಳು, ಜನವಸತಿ ಪ್ರದೇಶಗಳು ಹಾಗೂ ಅಪಾರ್ಟಮೆಂಟ್‍ಗಳಿಂದ ಸಂಸ್ಕರಣೆ ಮಾಡದೇ ನದಿಗೆ ನೇರವಾಗಿ ತ್ಯಾಜ್ಯ ನೀರು ಹರಿಸುತ್ತಿರುವುದರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇನೆ. ಮುಂದಿನ ವಾರದಲ್ಲಿ ಇದಕ್ಕೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆ ಕರೆದು ಒಂದು ದೃಢ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಬೆಂಗಳೂರು ನಗರದ ವೃಷಬಾವತಿ ಕಣಿವೆ ವ್ಯಾಪ್ತಿಯಲ್ಲಿ ಹರಿಯುವ 1500 ಎಂ.ಎಲ್‍.ಡಿ ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಿ, ಕೆರೆಗಳನ್ನು ತುಂಬಿಸುವುದು ಹಾಗೂ ಕೃಷಿ ಚಟುವಟಿಕೆಗಳಿಗೆ ಬಳಸುವುದು ನಮ್ಮ ಉದ್ದೇಶವಾಗಿದೆ.

ಒಂದು ಎಂ.ಎಲ್‍.ಡಿ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಲು ರೂ.1.00 ಕೋಟಿ ವೆಚ್ಚವಾಗುತ್ತದೆ. 1500 ಎಂ.ಎಲ್‍.ಡಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲು ರೂ.1500 ಕೋಟಿ ವೆಚ್ಚವಾಗಲಿದ್ದು, 3-5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ. ಆನಂತರ ಕುಡಿಯುವುದಕ್ಕೆ ಹೊರತುಪಡಿಸಿ, ಬೇರೆ ಎಲ್ಲಾ ಚಟುವಟಿಕೆಗಳಿಗೆ ಈ ಶುದ್ಧ ನೀರನ್ನು ಬಳಸಬಹುದಾಗಿದೆ ಎಂದು ಸಚಿವರು ವಿವರಿಸಿದರು.

ಬಸವನಗುಡಿಯಲ್ಲಿ ಹುಟ್ಟುವ ವೃಷಬಾವತಿ ನದಿ ಬಿಡದಿಯ ಬೈರಮಂಗಲ ಕೆರೆಗೆ ತಲುಪುತ್ತದೆ. ನಾಯಂಡನಹಳ್ಳಿ ಹಾಗೂ ಮೈಲಸಂಧ್ರದಲ್ಲಿ ಇದೀಗ ಎರಡು ಹಂತಗಳಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಲಾಗುತ್ತಿದೆ.

ಬೆಂಗಳೂರು ವಿಶ್ವವಿದ್ಯಾಲಯ 600 ಪ್ರದೇಶದಲ್ಲಿದ್ದು, ಅಲ್ಲಿಯೂ ಸಹ ಒಂದು ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಅಳವಡಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‍ ಸದಸ್ಯರು ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ.

ಸಿಂಡಿಕೇಟ್‍ ಸದಸ್ಯರಿಗೆ ಈ ಯೋಜನೆಯ ಮಹತ್ವವನ್ನು ವಿವರಿಸಿ, ಅಲ್ಲಿಯೂ ತ್ಯಾಜ್ಯ ನೀರು ಸಂಸ್ಕರಣ ಘಟಕವನ್ನು ರಾಜ್ಯ ಸರ್ಕಾರದ ವತಿಯಿಂದ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.

Recommended Video

      Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+