ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್ ಪಡೆದ ಬೊಮ್ಮಾಯಿ ಸರ್ಕಾರ

|
Google Oneindia Kannada News

ಬೆಂಗಳೂರು ಜುಲೈ 16: ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬ ಆದೇಶವನ್ನು ಜುಲೈ 15 ರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರ ವಾಪಸ್ ಪಡೆದಿದೆ. ಈ ಆದೇಶ ಸಾರ್ವಜನಿಕ ವಲಯದಲ್ಲಿ ತೀವ್ರ ವಿವಾದ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆದಿದೆ.

ಸರ್ಕಾರಿ ಕಚೇರಿಗಳಲ್ಲಿ ಫೋಟೋ -ವೀಡಿಯೋ ತೆಗೆಯುವುದಕ್ಕೆ ನಿಷೇಧ ಹೇರಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿತ್ತು. ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಾರಣ ನೀಡಿ ಕರ್ನಾಟಕ ಸರ್ಕಾರ ಈ ಆದೇಶ ನೀಡಿತ್ತು. ಅಲ್ಲದೇ ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಈ ಆದೇಶ ಪ್ರಕಟಿಸಿತ್ತು. ಆದರೀಗ ಈ ಆದೇಶ ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರ ಹಿಂಪಡೆದುಕೊಂಡಿದೆ.

Karnataka Govt withdraws order to ban Photos and Videos in Govt Offices after Outrage

Recommended Video

Sushmita Sen ಮತ್ತು Lalit Modi ಲವ್ ಲೈಫ್ ಬಗ್ಗೆ ಸುಶ್ಮಿತಾ ಮಾಜಿ ಲವ್ವರ್ ಹೀಗಾ ಹೇಳೋದು!! *India |Oneindia

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬ ಆದೇಶಕ್ಕೆ ಇತ್ತ ವಿಪಕ್ಷಗಳು ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಅದನ್ನು ಮರೆ ಮಾಚಲು ಈ ಆದೇಶ ತಂದಿದೆ ಎಂದು ಆರೋಪ ಮಾಡಿ ವಾಗ್ದಾಳಿ ನಡೆಸಿದ್ದವು. ಈ ಒಂದು ಆದೇಶದ ವಿವಾದಿಂದ ಬೆಚ್ಚಿಬಿದ್ದ ಬೊಮ್ಮಾಯಿ ಸರ್ಕಾರ ಇದನ್ನು ರದ್ದುಗೊಳಿಸಿದೆ.

English summary
Karnataka Govt withdraws controversial order to ban Photos and Videos in Govt Offices after Outrage from public and opposition. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X