'ಹಿಂದಿ ದಿವಸ್' ರದ್ದತಿಗೆ ಆಗ್ರಹಿಸಿ ಬೆಂಗಳೂರಲ್ಲಿ ಹಕ್ಕೊತ್ತಾಯದ ಮೆರವಣಿಗೆ

ಬೆಂಗಳೂರು, ಸೆಪ್ಟೆಂಬರ್ 13: ಕನ್ನಡ ಗ್ರಾಹಕರ ಕೂಟವು 'ಹಿಂದಿ ದಿವಸ್' ರದ್ದತಿಗೆ ಆಗ್ರಹಿಸಿ ಸೆ.14ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದೆ.

ಅದರ ಜೊತೆಗೆ ಸೆಪ್ಟೆಂಬರ್ 14ರಂದು ಟ್ವಿಟ್ಟರ್ ಅಭಿಯಾನವನ್ನು ಕೂಡ ಹಮ್ಮಿಕೊಂಡಿದ್ದಾರೆ 10.30ರ ಬಳಿಕ ಅಭಿಯಾನದಲ್ಲಿ ಸಹಿ ಹಾಕಬಹುದಾಗಿದೆ. #StopHindiImposition #MakeMyLanguageOfficial
ನಲ್ಲಿ ಸಹಿ ಮಾಡಬಹುದಾಗಿದೆ.

ಅಲ್ಲದೇ ಹಿಂದಿ ಭಾಷೆಯನ್ನು ಮೇಲ್ದರ್ಜೆಯಲ್ಲಿ ಕೂರಿಸಿ ಹಿಂದಿಯೇತರ ಭಾಷೆಗಳನ್ನು ಕಡೆಗಣಿಸುತ್ತಿದೆ. ಹಿಂದಿ ಭಾಷೆಯಂತೇ ಎಲ್ಲಾ ಭಾಷೆಗಳಿಗೂ ಹೆಚ್ಚಿನ ಮನ್ನಣೆ ಸಿಗಬೇಕು. ಹಾಗಾಗಿ ಪ್ರತಿ ವರ್ಷ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಅನ್ನು ರಾಜಭಾಷಾ ದಿವಸ್ ಎಂದು ಆಚರಿಸುವುದನ್ನು ನಿಲ್ಲಿಸಬೇಕೆಂದು ಕನ್ನಡಪರ ಹೋರಾಟಗಾರರು ಆಗ್ರಹಿಸಲಿದ್ದಾರೆ.

Karnataka Grahakara Kuta Celebrate Black Day On September 14

ಇನ್ನು ಕೇಂದ್ರ ಸರ್ಕಾರದ ಅನಗತ್ಯ ಹಿಂದಿ ಹೇರಿಕೆ ವಿರೋಧಿಸಿ ಟ್ವಿಟ್ಟರ್ ಅಭಿಯಾನ ಹಮ್ಮಿಕೊಂಡಿದ್ದೇವೆ. ಟ್ವಿಟ್ಟರ್ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿ.

ಸಂವಿಧಾನದ 8 ಪರಿಚ್ಛೇದದಲ್ಲಿರುವ ಎಲ್ಲಾ ಭಾಷೆಗಳನ್ನು ಒಕ್ಕೂಟದ ಆಡಳಿತ ಭಾಷೆ ಎಂದು ಘೋಷಿಸಬೇಕೆಂದು ಕೇಂದ್ರಕ್ಕೆ ಒತ್ತಾಯಿಸೋಣ ಎಂದು ಕನ್ನಡ ಗ್ರಾಹಕರ ಕೂಟದ ಅರುಣ್​​ ಜಾವಗಲ್​​​ ಕರೆ ಹೇಳಿದ್ದಾರೆ.

ಹಿಂದಿ ಭಾಷೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡು ಈ ದಿನದ ಪ್ರಾಮುಖ್ಯತೆಯನ್ನು ತೋರಿಸಲಾಗುತ್ತದೆ. ಭಾರತದಲ್ಲಿ ಪ್ರತಿ ವರ್ಷ ಸೆಪ್ಟೆಂಬರ್‌ 14 ರಂದು ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಇದಾಗಿದ್ದು, ಸರಕಾರಿ ಕಚೇರಿಗಳು, ಸಂಸ್ಥೆಗಳು, ಶಾಲೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಆಚರಣೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+