ದೇಶದ ಭದ್ರತೆಗೆ ವಿದೇಶಿ ವಿದ್ಯಾರ್ಥಿಗಳು ಅಪಾಯಕಾರಿ!

ಬೆಂಗಳೂರು, ಮಾರ್ಚ್ 14: ದೇಶದ ಭದ್ರತೆಗೆ ವಿದೇಶಿ ವಿದ್ಯಾರ್ಥಿಗಳು ಅಪಾಯಕಾರಿ ಎಂದು ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ವೀಸಾ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಕಾಂಗೋದ ವಿದ್ಯಾರ್ಥಿ ಹೊಸೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯಪೀಠ ಆತಂಕ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಹಾಗೂ ಬೆಂಗಳೂರಲ್ಲಿ ಎಷ್ಟು ಮಂದಿ ವಿದೇಶಿ ವಿದ್ಯಾರ್ಥಿಗಳ ವೀಸಾ ಅವಧಿ ಮುಗಿದಿದೆ. ಅವರನ್ನು ಗಡಿಪಾರು ಮಾಡಲು ಕೈಗೊಂಡಿರುವ ಕ್ರಮಗಳೇನು ಎಂಬುದರ ಕುರಿತು ರಾಜ್ಯ ಸರ್ಕಾರ ಹಾಗೂ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರಿಗೆ ಸೂಚಿಸಿತು.

Karnataka HC cationed the government over foreign students

ಅಂದಾಜು 25 ಸಾವಿರ ವಿದೇಶಿ ವಿದ್ಯಾರ್ಥಿಗಳು ವೀಸಾ ಅವಧಿ ಮುಗಿದಿದ್ದರೂ ರಾಜ್ಯದಲ್ಲಿ ನೆಲೆಸಿದ್ದಾರೆ. ಕಾಂಬೋಡಿಯಾ, ಕಾಂಗೋ ಮತ್ತು ತಾಂಜೇನಿಯಾ ಸೇರಿದಂತೆ ಹಲವು ದೇಶದ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಮದ್ಯ, ಮಾದಕ ದ್ರವ್ಯ ಕಳ್ಳ ಸಾಗಣೆ ಮತ್ತಿತರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದೊಂದು ಗಂಭೀರ ಹಾಗೂ ಕಳವಳಕಾರಿ ಸಂಗತಿ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+