ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶದ ಭದ್ರತೆಗೆ ವಿದೇಶಿ ವಿದ್ಯಾರ್ಥಿಗಳು ಅಪಾಯಕಾರಿ!

|
Google Oneindia Kannada News

ಬೆಂಗಳೂರು, ಮಾರ್ಚ್ 14: ದೇಶದ ಭದ್ರತೆಗೆ ವಿದೇಶಿ ವಿದ್ಯಾರ್ಥಿಗಳು ಅಪಾಯಕಾರಿ ಎಂದು ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ವೀಸಾ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಕಾಂಗೋದ ವಿದ್ಯಾರ್ಥಿ ಹೊಸೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯಪೀಠ ಆತಂಕ ವ್ಯಕ್ತಪಡಿಸಿದೆ.

ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು

ರಾಜ್ಯದಲ್ಲಿ ಹಾಗೂ ಬೆಂಗಳೂರಲ್ಲಿ ಎಷ್ಟು ಮಂದಿ ವಿದೇಶಿ ವಿದ್ಯಾರ್ಥಿಗಳ ವೀಸಾ ಅವಧಿ ಮುಗಿದಿದೆ. ಅವರನ್ನು ಗಡಿಪಾರು ಮಾಡಲು ಕೈಗೊಂಡಿರುವ ಕ್ರಮಗಳೇನು ಎಂಬುದರ ಕುರಿತು ರಾಜ್ಯ ಸರ್ಕಾರ ಹಾಗೂ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಮಾಹಿತಿ ಪಡೆದು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರಿಗೆ ಸೂಚಿಸಿತು.

Karnataka HC cationed the government over foreign students

ಡ್ರಗ್ಸ್ ಮುಕ್ತ ತುಮಕೂರು ವಿವಿ: ಡಿಸಿಎಂ ಕಟ್ಟುನಿಟ್ಟಿನ ಸೂಚನೆ ಡ್ರಗ್ಸ್ ಮುಕ್ತ ತುಮಕೂರು ವಿವಿ: ಡಿಸಿಎಂ ಕಟ್ಟುನಿಟ್ಟಿನ ಸೂಚನೆ

ಅಂದಾಜು 25 ಸಾವಿರ ವಿದೇಶಿ ವಿದ್ಯಾರ್ಥಿಗಳು ವೀಸಾ ಅವಧಿ ಮುಗಿದಿದ್ದರೂ ರಾಜ್ಯದಲ್ಲಿ ನೆಲೆಸಿದ್ದಾರೆ. ಕಾಂಬೋಡಿಯಾ, ಕಾಂಗೋ ಮತ್ತು ತಾಂಜೇನಿಯಾ ಸೇರಿದಂತೆ ಹಲವು ದೇಶದ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಮದ್ಯ, ಮಾದಕ ದ್ರವ್ಯ ಕಳ್ಳ ಸಾಗಣೆ ಮತ್ತಿತರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದೊಂದು ಗಂಭೀರ ಹಾಗೂ ಕಳವಳಕಾರಿ ಸಂಗತಿ ಎಂದು ತಿಳಿಸಿದ್ದಾರೆ.

English summary
Karnataka High Court warn Government over foreign students activities. HC showing its concern that many students are invloving in drugs and other anti national activities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X