ಎಚ್ಡಿಕೆ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
ಬೆಂಗಳೂರು, ಜೂನ್ 15 : ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಂಡು ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ.
ಮುಂದಿನ ವಿಚಾರಣೆ ಮುಗಿಯುವವರೆಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ವಿಶೇಷ ತನಿಖಾ ದಳ(ಎಸ್‌ಐಟಿ)ಕ್ಕೆ ಗುರುವಾರ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ಎಚ್ಡಿಕೆ ಕೊಂಚ ನಿರಾಳರಾಗಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ವೇಳೆ ಅಕ್ರಮವಾಗಿ ಜಂತಕಲ್ ಗಣಿ ಕಂಪೆನಿ ಅನುಮತಿ ನೀಡಿದ್ದಾರೆ ಎಂಬ ಅರೋಪ ಕುಮಾರಸ್ವಾಮಿ ಅವರ ಮೇಲಿದೆ.
ಹಾಗಾಗಿ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಎಸ್‌ಐಟಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿತ್ತು.
ಬಳಿಕ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರು ಪ್ರಕರಣವನ್ನು ಮುಂದೂಡಿದ್ದು, ಮುಂದಿನ ವಿಚಾರಣೆ ಮುಗಿಯುವವರೆಗೂ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.












Click it and Unblock the Notifications