ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮ ಪಂಚಾಯಿತಿ ಚುನಾವಣೆ: ದಿನಾಂಕ ನಿಗದಿಗೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು, ನವೆಂಬರ್ 13: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಅಂತಿಮ ದಿನಾಂಕವನ್ನು ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮೂರು ವಾರಗಳಲ್ಲಿ ಚುನಾವಣಾ ಪ್ರಕ್ರಿಯೆಯ ದಿನಾಂಕಗಳನ್ನು ಪ್ರಕಟಿಸುವಂತೆ ಅದು ಹೇಳಿದೆ.

ಚುನಾವಣೆ ನಡೆಸಲು ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಯ ಅಗತ್ಯವಿದ್ದರೆ ರಾಜ್ಯ ಚುನಾವಣಾ ಆಯೋಗವು ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.

ಗ್ರಾಮ ಪಂಚಾಯಿತಿ ಚುನಾವಣೆ; ಹೈಕೋರ್ಟ್ ಮಹತ್ವದ ಸೂಚನೆಗ್ರಾಮ ಪಂಚಾಯಿತಿ ಚುನಾವಣೆ; ಹೈಕೋರ್ಟ್ ಮಹತ್ವದ ಸೂಚನೆ

ಕೊರೊನಾ ವೈರಸ್ ಸೋಂಕು ಹರಡುತ್ತಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಈ ಹಿಂದೆ ಸರ್ಕಾರ ಕೇಳಿಕೊಂಡಿತ್ತು. ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳು ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಏನು ಕಷ್ಟ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

Karnataka HC Directs State Election Commission To Finalise Scheduler For Gram Panchayat Elections

ಪ್ರಕರಣಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತಹಂತವಾಗಿ ಚುನಾವಣೆ ನಡೆಸಬಹುದು. ಸರ್ಕಾರವು ಶಾಲಾ ಕಾಲೇಜುಗಳ ಪರೀಕ್ಷೆಯನ್ನೇ ನಡೆಸಿದೆ. ಹೀಗಿರುವಾಗ ಚುನಾವಣೆ ನಡೆಸಲು ಏಕೆ ಸಾಧ್ಯವಿಲ್ಲ? ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಹೇಳಿತ್ತು.

ಕಳೆದ ವಾರ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದ ಡಾ. ಎಂ.ಕೆ. ಸುದರ್ಶನ ನೇತೃತ್ವದ ತಜ್ಞರ ಸಮಿತಿ, ಕೋವಿಡ್ ಕಾರಣದಿಂದ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಮದೂಡುವುದು ಸೂಕ್ತ ಎಂದು ಸಲಹೆ ನೀಡಿತ್ತು.

ಇದೇ ವರ್ಷ ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರಕ್ಕೆ ಪತ್ರ ಬರೆದ ರಾಜ್ಯ ಚುನಾವಣಾ ಆಯೋಗ!ಇದೇ ವರ್ಷ ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರಕ್ಕೆ ಪತ್ರ ಬರೆದ ರಾಜ್ಯ ಚುನಾವಣಾ ಆಯೋಗ!

Recommended Video

ಸ್ಮಾರ್ಥ ಬ್ರಾಹ್ಮಣ ವಿಧಿವಿಧಾನದಲ್ಲಿ ನಡೆಯಲಿದೆ ರವಿ ಬೆಳಗೆರೆ ಅಂತ್ಯಕ್ರಿಯೆ

ಈಗ ಕೋವಿಡ್ ಅಪಾಯ ಸ್ವಲ್ಪ ತಗ್ಗಿದ್ದರೂ ಚುನಾವಣೆ ಸಲುವಾಗಿ ಜನರು ಒಟ್ಟಿಗೆ ಸೇರುವುದರಿಂದ ಸೋಂಕು ಮತ್ತೆ ಹರಡುವ ಸಾಧ್ಯತೆ ಇದೆ. ಗ್ರಾಮೀಣ ಭಾಗಗಳಲ್ಲಿ ಜನರು ಗುಂಪು ಗುಂಪಾಗಿ ಓಡಾಡುತ್ತಾರೆ. ಅಲ್ಲಿ ಭೌತಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮುಂತಾದ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಸಾಧ್ಯತೆ ತೀರಾ ಕಡಿಮೆ. ಇದರಿಂದ ಮನೆ ಮನೆಗೂ ಸೋಂಕು ಹರಡುವ ಅಪಾಯವಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿತ್ತು.

English summary
Karnataka HC directs State Election Commission to finalise scheduler for Gram Panchayat elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X