ಐಪಿಎಸ್ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಐಎಎಸ್ ರೋಹಿಣಿ ಸಿಂಧೂರಿಗೆ ಹಿನ್ನಡೆ

IAS Rohini Sindhuri: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಮಾಧ್ಯಮಗಳ ಮುಂದೆ ಅವಹೇಳನಕಾರಿ ಹೇಳಿಕೆ ನೀಡಲಾಗಿದ್ದು, ಆ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಶೇರ್ ಮಾಡಲಾಗಿದೆ ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಆ ಅರ್ಜಿಯನ್ನು ತಿರಸ್ಕರಿಸಿದೆ. ಜೊತೆಗೆ ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣ ಮುಂದುವರೆದಿದೆ.

Karnataka HC Dismisses IAS Rohini Sindhuri s Plea to Quash Defamation Case Filed by IPS D Roopa

ರೂಪಾ ಮೌದ್ಗಿಲ್ ದೂರಿನಲ್ಲಿ ಏನಿದೆ?

ರೂಪಾ ಮೌದ್ಗಿಲ್ ಅವರು 19-02-2023ರಂದು ನೀಡಲಾಗಿದ್ದ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಮಾಧ್ಯಮಗಳ ಮುಂದೆ ಮಾಡಲಾದ ಹೇಳಿಕೆಗಳು ಹಾಗೂ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ತಮ್ಮ ಮಾನಹಾನಿಗೆ ಕಾರಣವಾಗಿದೆ ಎಂದು ಆರೋಪಿಸಿ, ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಸುಪ್ರೀಂ ಕೋರ್ಟ್‌ವರೆಗೂ ಹೋಗಿದ್ದ ಪ್ರಕರಣ

ಈ ಪ್ರಕರಣ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಗಳಲ್ಲಿ ಮುಂದುವರೆದಿದ್ದು, ಒಂದು ಹಂತದಲ್ಲಿ ಸುಪ್ರೀಂ ಕೋರ್ಟ್‌ನಿಂದ ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿತ್ತು. ಇದೀಗ ಹೈಕೋರ್ಟ್ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ತಿರಸ್ಕರಿಸಿರುವ ಹಿನ್ನೆಲೆ, ಪ್ರಕರಣ ಮುಂದಿನ ಕಾನೂನು ಪ್ರಕ್ರಿಯೆಯಂತೆ ಮುಂದುವರೆಯಲಿದೆ.

2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ಬಳಿಕ ತಮ್ಮ ಟ್ವಿಟರ್ ಖಾತೆಯಲ್ಲಿ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು. ಈ ಹೇಳಿಕೆಯನ್ನು ಸುಮಾರು ಒಂದು ಲಕ್ಕಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ದೂರಿದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯ ನಂತರ ತಮಗೆ ವರ್ಗಾವಣೆ ಆಗಿದ್ದು, ಆರು ತಿಂಗಳ ಕಾಲ ಸಂಬಳ ಇಲ್ಲದೆ ಹುದ್ದೆ ಇಲ್ಲದಂತಹ ಪರಿಸ್ಥಿತಿ ಉಂಟಾಯಿತು ಎಂದು ರೂಪಾ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬದ ಸದಸ್ಯರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂಬ ಕಾರಣ ನೀಡಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+