Get Updates
Get notified of breaking news, exclusive insights, and must-see stories!

ಬೆಂಗಳೂರು ಕರಗದ ಮೆರವಣಿಗೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್

ಬೆಂಗಳೂರು ಏ.13. ಏಪ್ರಿಲ್ 16ರಂದು ನಡೆಯಲಿರುವ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಮರವಣಿಗೆ ನಡೆಸಲು ಹೈಕೋರ್ಟ್ ಬುಧವಾರ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಕರಗ ಮಹೋತ್ಸವದ ಮೆರವಣಿಗೆಗೆ ಇದ್ದ ದೊಡ್ಡ ಅಡ್ಡಿ ನಿವಾರಣೆಯಾಗಿದೆ.

ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ನಗರದ ಬೇರೆ ಯಾವುದೇ ಜಾಗದಲ್ಲಿ ಪ್ರತಿಭಟನೆ ಆಥವಾ ಮೆರವಣಿಗೆ ನಡೆಸಬಾರದು ಎಂದು ಮಾ.3ರಂದು ಹೈಕೋರ್ಟ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಈ ಆದೇಶ ಕರಗ ಮೆರವಣಿಗೆ ನಡೆಸಲು ಅಡ್ಡಿಯಾಗುತ್ತದೆ. ಹಾಗಾಗಿ ಈ ಆದೇಶ ತಿದ್ದುಪಡಿ ಮಾಡಬೇಕು ಹಾಗೂ ಕರಗ ಮರೆವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು.

ನ್ಯಾ. ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ಹಾಜರಾದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ಮಧ್ಯಂತರ ಅರ್ಜಿ ಸಲ್ಲಿಸಿರುವ ವಿಷಯ ಪ್ರಸ್ತಾಪಿಸಿದರು.

ವಾದ ಆಲಿಸಿದ ನ್ಯಾಯಪೀಠ, ಮಧ್ಯಂತರ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಕರಗ ಉತ್ಸವ ಹಿನ್ನೆಲೆಯಲ್ಲಿ ಮರೆವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನೀಡಿತು.‌ ಆದರೆ ಮರೆವಣಿಗೆ ವೇಳೆ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿದೆ.

Karnataka HC gives green signal for historical procession of Bangalore karaga

ಫ್ರೀಡಂ ಪಾರ್ಕ್ ಬಿಟ್ಟು ಹೊರಗೆ ಪ್ರತಿಭಟನೆಗೆ ಬ್ರೇಕ್:

ಬೆಂಗಳೂರಿನ ಗಾಂಧಿನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನದಲ್ಲಿ (ಫ್ರೀಡಂ ಪಾರ್ಕ್) ಹೊರತುಪಡಿಸಿ ನಗರದ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಯದಂತೆ ಸರ್ಕಾರ ಖಾತರಿಪಡಿಸಬೇಕು ಎಂದು ಹೈಕೋರ್ಟ್ ಕಳೆದ ಮಾ.3ರಂದು ಮಹತ್ವದ ಆದೇಶ ಹೊರಡಿಸಿದೆ.

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ್ದ ನ್ಯಾಯಪೀಠ ಈ ಆದೇಶ ಮಾಡಿತ್ತು.

''ನಗರದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದರಿಂದ ಸಂಚಾರದ ದಟ್ಟಣೆ ಉಂಟಾಗುತ್ತಿದೆ. ನಗರ ಮತ್ತು ನಗರದಲ್ಲಿ ದಿನನಿತ್ಯದ ಚಟುವಟಿಕೆ ಗಂಭೀರ ಪರಿಣಾಮ ಬೀರುತ್ತಿದೆ. ಹಾಗಾಗಿ, ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯೇತರ ಸಂಘಟನೆಗಳು ನಗರದ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನದಲ್ಲಿ ಹೊರತುಪಡಿಸಿ ನಗರದ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಸಭೆ ನಡೆಯದಂತೆ ಸರ್ಕಾರ ಖಾತರಿಪಡಿಸಬೇಕು'' ಎಂದು ಆದೇಶಿಸಿತು.

ಅಲ್ಲದೆ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆಗಳು ಕಂಡುಬಂದರೆ ತಕ್ಷಣ ಅದಕ್ಕೆ ನಿರ್ಬಂಧ ವಿಧಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶವನ್ನು ತಕ್ಷಣ ಜಾರಿ ಮಾಡಬೇಕು. ಈ ಆದೇಶ ಪಾಲನೆ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿತು.

ಹಾಗೆಯೇ, ಸಾರ್ವಜನಿಕ ಸಭೆ, ಪ್ರತಿಭಟನೆ ಇತ್ಯಾದಿ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ಅನುಮತಿ ನೀಡುವ ಸಂಬಂಧ ರಾಜ್ಯ ಸರ್ಕಾರವು ಇ-ಗೆಜೆಟೆಡ್ ನಿಯಮಗಳನ್ನು ಸಲ್ಲಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆ-1963ರ ಸೆಕ್ಷನ್‌103 ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ ೧೮೮ರ ಅಡಿ ಈ ನಿಯಮಗಳನ್ನು ಜಾರಿ ಮಾಡುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್ಸ್‌ಪೆಕ್ಟರ್ ಕ್ರಮಕೈಗೊಳ್ಳಬಹುದು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ವಿಚಾರ ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಹಾಲಿ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್ ಕುಮಾರ್ ಅವರು 2022ರ ಮಾರ್ಚ್‌ನಲ್ಲಿ ಹೈಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದರು. ಅದನ್ನು ಪರಿಗಣಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+